Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಮಾರಸ್ವಾಮಿ ಕೇವಲ ಸಿದ್ದರಾಮಯ್ಯ ವಿರೋಧಿಯಷ್ಟೇ ಅಲ್ಲ.. ಅಲ್ಪಸಂಖ್ಯಾತರ ವಿರೋಧಿ ಕೂಡ : ಶಾಸಕ ಜಮೀರ್

Facebook
Twitter
Telegram
WhatsApp

ವಿಜಯನಗರ : ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಕೇವಲ ಸಿದ್ಧರಾಮಯ್ಯ ವಿರೋಧಿ ಮಾತ್ರವಲ್ಲ, ಮುಸ್ಲಿಂ ಸಮುದಾಯದ ವಿರೋಧಿಯೂ ಹೌದು ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದಾರೆ.

ವಿಜಯಪುರ ಜಿಲ್ಲೆಯ ಮಾತನಾಡಿದ ಅವರು, ಕುಮಾರಸ್ವಾಮಿಗೆ ಅಲ್ಪ ಸಂಖ್ಯಾತರನ್ನು ಬಲಿ ಆಗಿಸುವುದೊಂದೇ ಟಾರ್ಗೆಟ್ ಆಗಿದೆ. ಮುಸ್ಲಿಮರನ್ನು ಮುಗಿಸುವುದು ಅವರ ದುರುದ್ದೇಶವಾಗಿದೆ .ಅಲ್ಪ ಸಂಖ್ಯಾತರ ಜೊತೆಯಲ್ಲೇ ಸಿದ್ದರಾಮಯ್ಯ ಅವರನ್ನೂ ಕುಮಾರಸ್ವಾಮಿ ಟಾರ್ಗೆಟ್ ಮಾಡುತ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಎಷ್ಟು ಜನ ಮುಸ್ಲಿಮರನ್ನು ಎಂ ಎಲ್ ಎ ಮಾಡಿದ್ದಾರೆ..? ಎಷ್ಟು ಅಲ್ಪ ಸಂಖ್ಯಾತರನ್ನು ಮಂತ್ರಿ ಮಾಡಿದ್ದಾರೆ? ಇದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಕಿಡಿ ಕಾರಿದರು.

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಾರ್ವತ್ರಿಕ ಚುನಾವಣೆಯಲ್ಲಿ ಯಾಕೆ ಮುಸ್ಲಿಂ ಅಭ್ಯರ್ಥಿಯನ್ನು ಹಾಕುವುದಿಲ್ಲ ಎಂದು ಪ್ರಶ್ನಿಸಿದ ಜಮೀರ್, ಉಪ ಚುನಾವಣೆಯಲ್ಲಿ ಮಾತ್ರ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾರಣವೇನು ಎಂದು ಕೇಳಿದರು.

ನಾನು ಕುಮಾರಸ್ವಾಮಿ ಅವರಿಗೆ ಬಹಳ ಆತ್ಮಿಯನಾಗಿದ್ದೆ. ಆದರೂ ನನಗೆ ಕೇವಲ ವಕ್ಫ್ ಮತ್ತು ಹಜ್ ಖಾತೆ ನೀಡಿದರು. ಈಗ ಹಾನಗಲ್‌ನಲ್ಲೂ ಮುಸ್ಲಿಂ ಅಭ್ಯರ್ಥಿ ಹಾಕಿದ್ದಾರೆ. ಈ ಹಿಂದೆ ಬಸವ ಕಲ್ಯಾಣದಲ್ಲೂ ಮುಸ್ಲಿಂ ಅಭ್ಯರ್ಥಿ ಹಾಕಿದ್ದರು. ಅಲ್ಲಿ ಜೆಡಿಎಸ್‌ಗೆ ಸುಮಾರು 11 ಸಾವಿರ ಮತಗಳು ಬಂದಿದ್ದವು. ಆ ಮತಗಳು ಎಚ್. ಡಿ. ಕುಮಾರಸ್ವಾಮಿ ಅವರಿಂದ ಬಂದಿಲ್ಲ. ಬದಲಾಗಿ, ಜೆಡಿಎಸ್ ಅಭ್ಯರ್ಥಿಯಾಗಿದ್ದ ದರ್ಗಾವೊಂದರ ಪೀಠಾಧಿಪತಿಗಳ ವೈಯಕ್ತಿಕ ವರ್ಚಸ್ಸಿನಿಂದ ವೋಟುಗಳು ಬಂದಿದ್ದವು ಎಂದು ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16 : ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಅಂದೇ ಕೆಲಸದಲ್ಲಿ ನಿರತರಾದ ನರೇಂದ್ರಮೋದಿ ಮೂರನೆ ಬಾರಿಗೆ

ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ : ಸಂತೋಷ್‍ ಜಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16  : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಉಳಿಕೊಳ್ಳುವುದೇ

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡಲು ಹುನ್ನಾರ :  ರೈತ ಮುಖಂಡ  ರಮೇಶ್ ಆರೋಪ

ಸುದ್ದಿಒನ್, ಹಿರಿಯೂರು, ಏಪ್ರಿಲ್. 16 : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ  ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ  ಹಾಗೂ  ಭದ್ರಾ ಮೇಲ್ದಂಡೆ ಅಚುಕಟ್ಟುದಾರ ರೈತಹಿತ ರಕ್ಷಣಾ

error: Content is protected !!