Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಜ್ವಲ್ ಜೈಲು ಸೇರಲು ಕುಮಾರಸ್ವಾಮಿನೇ ಕಾರಣ : ಏನಿದು ಹೊಸ ಟ್ವಿಸ್ಟ್..?

---Advertisement---

ಮಂಡ್ಯ: ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಸಿಗದೆ ಒದ್ದಾಡುತ್ತಿದ್ದಾರೆ. ಅವರು ಜೈಲಿಗೆ ಹೋಗೋದಕ್ಕೆ ಕುಮಾರಸ್ವಾಮಿ ಅವರೇ ಕಾರಣ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ ಕದಲೂರು ಉದಯ್. ಅಣ್ಣನ ಮಗನನ್ನೇ ಸಹಿಸಿಕೊಳ್ಳಲಿಲ್ಲ, ಇನ್ನು ನಮ್ಮನ್ನ ಸಹಿಸಿಕೊಳ್ತಾರಾ ಎಂದಿದ್ದಾರೆ.

ಮದ್ದೂರಿನಲ್ಲಿ ಮಾತನ್ನಾಡಿದ ಕದಲೂರು ಉದಯ್, ಇವರ ಮಗ ಗೆದ್ದಿಲ್ಲ ಅಂತ ಷಡ್ಯಂತ್ರ ಮಾಡಿ ಅಣ್ಣನ ಮಗನನ್ನೇ ಜೈಲಿಗೆ ಹಾಕಿಸಿದ್ರು. ಮಾಜಿ ಪ್ರಧಾನಿ ಮನಸ್ಸು ಮಾಡಿದ್ರೆ ಬಿಡಿಸಬಹುದಿತ್ತು. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ತಾಕತ್ತಿದ್ದರೆ ಮಂಡ್ಯಕ್ಕೆ ಕೈಗಾರಿಕೆ ತರಲಿ. ನಾನೇ 60-70 ಎಕರೆ ಜಮೀನು ಕೊಡ್ತೀನಿ. ಸರ್ಕಾರದ ಭಾಗವಾಗಿ ನಾವೂ ಕೊಡುತ್ತೇವೆ‌. ಮೊದಲು ಎಚ್ಡಿಕೆ ಯಾವ ಕೈಗಾರಿಕೆ ತರುತ್ತಾರೆ ಅಂತ ಹೇಳಲಿ. ಅಭಿವೃದ್ಧಿ ಮಾಡಲು ಛಲ, ಆಸಕ್ತಿ ಬೇಕು. ರೈತರ ಕಷ್ಟ ತಿಳಿದಿರಬೇಕು. ಬರೀ ಭಾಷಣ, ಟಿವಿ ಮುಂದರ ಹೇಳಿದರೆ ಅಭಿವೃದ್ಧಿ ಆಗುವುದಿಲ್ಲ.

ಕುಮಾರಸ್ವಾಮಿ ಮೊದಲು ಪ್ರಾಮಾಣಿಕವಾಗಿ ಕೆಲಸ ಮಾಡಿ ತೋರಿಸಲಿ. ನಗರಸಭೆ ಸೇರ್ಪಡೆ ವಿರೋಧಿಸಿ ಗಜ್ಜಲಗೆರೆಯಲ್ಲಿ ಪ್ರತಿಭಟನೆ ಆಗ್ತಾ ಇದ್ದು, ನನ್ನ ವಿರುದ್ಧ ಪ್ರತಿಭಟನೆಗೆ ದುಡ್ಡು ಹಂಚಿಕೆ ಮಾಡ್ತಾ ಇದ್ದಾರೆ. ನನ್ನ ವೈಯಕ್ತಿಕ ವಿಚಾರ ಬಿಚ್ಚಿಡ್ತೀನಿ ಅಂತ ಕುಮಾರಸ್ವಾಮಿ ಅವರು ಹೇಳಿದ್ದಾರೆ. ನನಗೇನು ಮೂರು ಮದುವೆ ಆಗಿದೆಯಾ ಬಿಚ್ಚಿಡುವುದಕ್ಕೆ. ನಾನು ಹಳ್ಳಿ ರೈತನ ಮಗ. ಅವರ ರೀತಿ ಯಾರ ಬಳಿಯೂ ಹೆಲಿಕಾಪ್ಟರ್ ಪಡೆದುಕೊಂಡಿಲ್ಲ. ಭೂಕಬಳಿಕೆ ಆರೋಪ ನನ್ನ ಮೇಲಿಲ್ಲ. ಹೋರಾಟಕ್ಕೆ ನಿತ್ಯ ಹಣ ಬೇಕು. ಅದಕ್ಕೆ ವಿಪಕ್ಷದವರು ಕೊಡ್ತಿದ್ದಾರೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now