ಕೊಬ್ಬರಿ ಬೆಲೆ ಏರಿಕೆ ಮಾಡಿದ ಕೇಂದ್ರ ಸರ್ಕಾರ : ಧನ್ಯವಾದ ತಿಳಿಸಿದ ಕುಮಾರಸ್ವಾಮಿ

suddionenews
1 Min Read

ಬೆಂಗಳೂರು: ಕೇಂದ್ರ ಸರ್ಕಾರ ಕೊಬ್ಬರಿ ಬೆಲೆ ಏರಿಕೆ ಮಾಡಿದ್ದು, ರೈತರಿಗೆ ಸಾಕಷ್ಟು ಅನುಕೂಲವಾಗಿದೆ. ಈ ವಿಚಾರ ತಿಳಿದ ಮಾಜಿ ಸಿಎಂ ಕುಮಾರಸ್ವಾಮಿ ಸಂತಸ ವ್ಯಕ್ತಪಡಿಸಿದ್ದು, ಪ್ರಧಾನಿ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಕೊಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ಮಾನ್ಯ ಶ್ರೀ @narendramodi ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು. ಮಿಲ್ಲಿಂಗ್‌ ಕೊಬರಿಗೆ 300 ರೂ. ಹಾಗೂ ಉಂಡೆ ಕೊಬರಿಗೆ 250 ರೂ. (ಪ್ರತಿ ಕ್ವಿಂಟಾಲ್‌ಗೆ) ಏರಿಕೆ ಮಾಡಿರುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ.

ಡಿಸೆಂಬರ್ 21ರಂದು ನವದೆಹಲಿಯಲ್ಲಿ ಮಾಜಿ ಪ್ರಧಾನಿಗಳಾದ ಮಾನ್ಯ ಶ್ರೀ @H_D_Devegowda ಅವರ ನೇತೃತ್ವದಲ್ಲಿ ಪ್ರಧಾನಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೊಬರಿ ರೈತರ ಸಂಕಷ್ಟ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಮಾನ್ಯ ಪ್ರಧಾನಿಗಳು ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದರು.

ತೆಂಗು ಬೆಳೆಗಾರರು ಬಹಳಷ್ಟು ಸಂಕಷ್ಟದಲ್ಲಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ನೆರವು ಬೇಕಿದೆ. ಮಧ್ಯವರ್ತಿಗಳು ಅವರನ್ನು ಕಿತ್ತು ತಿನ್ನುತ್ತಿದ್ದಾರೆ. ಇದು ಎಲ್ಲೆಡೆ ಕಂಡು ಬರುತ್ತಿರುವ ನೈಜ ಚಿತ್ರಣ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ನಾಫೆಡ್ ಮೂಲಕವೇ ಕೊನೆಪಕ್ಷ ರಾಜ್ಯದಲ್ಲಿ 1.5 ಲಕ್ಷ ಮೆಟ್ರಿಕ್ ಟನ್ ಕೊಬರಿ ಖರೀದಿಸಬೇಕು ಎಂದು ಕೇಂದ್ರವನ್ನು, ಮಾನ್ಯ ಪ್ರಧಾನಿಗಳಲ್ಲಿ ವಿನಂತಿಸುತ್ತೇನೆ ಎಂದು ಪ್ರಧಾನಿ ಮೋದಿಯವರಿಗೆ ಟ್ವೀಟ್ ಮಾಡುವ ಮೂಲಕ ಧನ್ಯವಾದ ಅರ್ಪಿಸಿದ್ದಾರೆ. ರೈತರಿಗೂ ಇದರಿಂದ ಬಹಳ ಅನುಕೂಲವಾಗಲಿದೆ.

Share This Article
Leave a Comment

Leave a Reply

Your email address will not be published. Required fields are marked *