ಕುಮಾರಸ್ವಾಮಿ ಅಣ್ಣನ ಮಗ ರೇಪ್ ಮಾಡಿ ಓಡಿ ಹೋಗಿರುವುದು.. ಸತ್ತು ಹೋದ ನನ್ನ ಮಗನಿಗೂ ಈ ವಿಚಾರಕ್ಕೂ ಏನು ಸಂಬಂಧ : ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಇಂದು ಸಿಎಂ ಸಿದ್ದರಾಮಯ್ಯ ಅವರ ಸತ್ತು ಹೋದ ಮಗ ರಾಕೇಶ್ ಬಗ್ಗೆ ಮಾತನಾಡಿದ್ದಾರೆ. ವಿದೇಶಕ್ಕೆ ನಿಮ್ಮ ಮಗ ಸಾಯಲಿ ಎಂದೇ ಕಳುಹಿಸಿದ್ರಾ..? ಅವರ ಸಾವಿಗೆ ನೀವೆ ಕಾರಣವಾ..? ರಾಜತಂತ್ರಿಕ ಪಾಸ್ ಪೋರ್ಟ್ ಬಗ್ಗೆ ಇವರೆಲ್ಲಾ ಮಾತನಾಡುತ್ತಿದ್ದಾರೆ. ಆದರೆ ಇವರಿಗೆ ಕಾನೂನಿನ ತಿಳುವಳಿಕೆಯೇ ಇಲ್ಲ. ಈಗ ಪ್ರಜ್ವಲ್ ನನ್ನು ವಾಪಾಸ್ ಕರೆದುಕೊಂಡು ಬರಲು ಪತ್ರ ಬರೆದಿದ್ದಾರೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಡಬೇಕು ಎಂದಿದ್ದಾರೆ. ಸದ್ಯಕ್ಕದು ಸಾಧ್ಯವೇ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ನನ್ನ ಮಗ ಸತ್ತು ಹೋಗಿ ಎಂಟು ವರ್ಷಗಳೇ ಕಳೆದಿವೆ. ಈಗ ಆ ವಿಚಾರವನ್ನು ಯಾವುದಕ್ಕೋ ಲಿಂಕ್ ಮಾಡಿ ಮಾತನಾಡುವುದು ಮೂರ್ಖತನ. ಅವರ ಅಣ್ಣನ ಮಗ ರೇಪ್ ಮಾಡಿ ಓಡಿ ಹೋಗಿರುವುದು. ಅದಕ್ಕೂ 2016ರಲ್ಲಿ ಸತ್ತು ಹೋದ ರಾಕೇಶ್ ಸಾವಿನ ವಿಚಾರಕ್ಕೂ ಏನು ಸಂಬಂಧ ಎಂದು ಮೈಸೂರಿನಲ್ಲಿ ಕೇಳಿದ್ದಾರೆ.

ರೇಪ್ ಗಿಂತ ಅದರ ವಿಡಿಯೋ ಹಂಚಿದ್ದು ದೊಡ್ಡ ಅಪರಾಧ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ರೇಪ್ ಗಿಂತ ವಿಡಿಯೋ ಹಂಚಿದ್ದು ದೊಡ್ಡ ಅಪರಾಧ ಅಂತ ಯಾವ ಕಾನೂನಿನಲ್ಲಿದೆ ಹೇಳಿ. ಕುಮಾರಸ್ವಾಮಿ ಏನಾದರೂ ಸೆಕ್ಷನದ ಹೇಳಿದ್ದಾರಾ..? ಅದು ಭಾರತೀಯ ದಂಡ ಸಂಹಿತೆಯಲ್ಲಿದೆಯಾ..? ಅಥವಾ ಇವರೇ ಬರೆದುಕೊಂಡಿರುವ ಕಾನೂನಿನಲ್ಲಿ ಇದೆಯಾ..? ಹಾಗಂತ ನಾನು ಅಶ್ಲೀಲ ವಿಡಿಯೋ ವಿತರಣೆಯನ್ನುಸಮರ್ಥನೆ ಮಾಡುತ್ತಿಲ್ಲ. ಆದರೆ ರಡೆಪ್ ಗಿಂತ ವಿಡಿಯೋ ಹಂಚಿದ್ದು ಮಹಾ ಅಪರಾಧ ಎನ್ನುವುದು ಸರಿಯಲ್ಲ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *