Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಹೊಸ ಬಾಂಬ್..!

---Advertisement---

ಬೆಂಗಳೂರು: ಮುಖ್ಯಮಂತ್ರಿ ಕಚೇರಿಯಲ್ಲಿ ವರ್ಗಾವಣೆ ದಂಧೆ ಶುರುವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಸಿದ್ದರಾಮಯ್ಯ ಪುತ್ರ ಯತೀಂದ್ರ ವಿರುದ್ಧ ಪರೋಕ್ಷ ಆರೋಪ ಮಾಡಿದ್ದಾರೆ.

ಪಂಚಗ್ಯಾರಂಟಿಗಳ @INCKarnataka ಸರಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ.
ಅದು; ʼಕಾಸಿಗಾಗಿ ಪೋಸ್ಟಿಂಗ್!!ʼ
ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ.

ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ!! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ @CMofKarnataka ವೋ ಅಥವಾ Corruption of Karnataka ವೋ??

 

4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ (!?) ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್‌ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್‌ ಕಂಟ್ರೋಲ್‌ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ.

ಈ @INCKarnataka ಸರಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment