ಚಿತ್ರದುರ್ಗ : ಹೋಳಿ ಹಬ್ಬ ಮತ್ತು ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 6 ನೇ ತಾರೀಖಿನಂದು ರಾತ್ರಿ ಎಂಟು ಗಂಟೆಗೆ ನ್ಯಾಯಾಲಯದ ಮುಂಭಾಗ ಎರಡನೇ ಪ್ರದರ್ಶನವಾಗಿ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಸಿ.ಶಿವುಯಾದವ್ ತಿಳಿದಿದ್ದಾರೆ.
ಚಿತ್ರದ ಜಿಲ್ಲಾ ನ್ಯಾಯಾಲಯಕ್ಕೆ ನೂರು ವರ್ಷಗಳ ಇತಿಹಾಸವಿದೆ. ಲೋಕ ಅದಾಲತ್ ಮತ್ತು ರಾಜಿ ಸಂಧಾನಗಳ ಮೂಲಕ ಕೇಸುಗಳನ್ನು ಇತ್ಯರ್ಥಪಡಿಸಲು ಅನುಕೂಲವಾಗಲಿ ಎನ್ನುವ ಸಂದೇಶವನ್ನು ನಾಟಕದಲ್ಲಿ ಪ್ರದರ್ಶಿಸಲಾಗುವುದು.
ರಾಜಿಸಂಧಾನವನ್ನು ಕೆಲವೊಮ್ಮೆ ಎರಡು ಕಡೆಯವರು ಒಪ್ಪದಿದ್ದರೆ ಮುಂದೆ ಏನೆಲ್ಲಾ ಪರಿಣಾಮಗಳು ಎದುರಾಗುತ್ತವೆ ಎನ್ನುವ ಅಂಶವನ್ನಿಟ್ಟು ಕೊಂಡು ನಾಟಕದಲ್ಲಿ ಅಭಿನಯಿಸಲಾಗುತ್ತದೆ ಎಂದರು.
ಪ್ರಥಮ ಬಾರಿಗೆ ವಕೀಲರ ದಿನಾಚರಣೆ ಅಂಗವಾಗಿ ಪ್ರದರ್ಶನ ಮಾಡಲಾಗಿತ್ತು. ನಾಟಕಕ್ಕೆ ವಕೀಲರುಗಳು ಅಭ್ಯಾಸದಲ್ಲಿ ತೊಡಗಿದ್ದೇವೆ. ಸದಾ ಒತ್ತಡದ ನಡುವೆ ಜೀವಿಸುವ ವಕೀಲರುಗಳಿಗೂ ಮನರಂಜನೆಯನ್ನು ನಾಟಕದ ಮೂಲಕ ನೀಡಬೇಕೆಂಬುದು ನಮ್ಮ ಉದ್ದೇಶ. ಅಂದು ಸಂಜೆ ಎಂಟು ಗಂಟೆಗೆ ಆರಂಭ ಗೊಳ್ಳುವ ನಾಟಕ ಬೆಳಗಿನ ಜಾವ ಮೂರು ಗಂಟೆಯವರೆಗೂ ಪ್ರದರ್ಶನವಾಗಬಹುದು ಎಂದರು.
ಪ್ರೇಕ್ಷಕರ ಒತ್ತಾಯದ ಮೇರೆಗೆ ಮತ್ತು ಗ್ರಾಮಾಂತರ ಭಾಗದ ಕುರುಕ್ಷೇತ್ರಕ್ಕೆ ಇರುವ ಒಲವಿಗೆ ಇದೀಗ ಎರಡನೇ ಪ್ರದರ್ಶನ ಮಾಡುತ್ತಿದ್ದೇವೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಪ್ರೇಮಾವತಿ ಮನಗೊಳಿ, ಜಿಲ್ಲಾಧಿಕಾರಿ ಜಿ.ಆರ್.ಜೆ. ದಿವ್ಯಪ್ರಭು, ಜಿಲ್ಲಾ ರಕ್ಷಣಾಧಿಕಾರಿ ಪರಶುರಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿವಾಕರ್ ಇವರುಗಳು ಆಗಮಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…