Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾರ್ಮಿಕ ದಿನಾಚರಣೆ ಕೇವಲ ಸರ್ಕಾರಿ ಅಧಿಕಾರಿಗಳ ರಜೆಗೆ ಸೀಮಿತ : ವೈ ಕುಮಾರ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮೇ. 04 :
ಕಳೆದ ಒಂದು ವರ್ಷಗಳಿಂದ ರಾಜ್ಯ ಸರ್ಕಾರದ ಮಂತ್ರಿಗಳು ಕಟ್ಟಡ ಕಾರ್ಮಿಕರಿಗೆ ಯಾವುದೇ ರೀತಿಯ ಹಣಕಾಸಿನ ಸೌಲಭ್ಯಗಳನ್ನು ನೀಡುವುದರಲ್ಲಿ ವಿಫಲರಾಗಿದ್ದಾರೆ. ಮಂಡಳಿಯಲ್ಲಿ ಇರುವ ಹಣವನ್ನು ತಡೆ ಹಿಡಿದು ಒಂದು ವರ್ಷಕ್ಕೆ ಬರುವ ಬಡ್ಡಿಯಿಂದ ಸಂತೋಷ ಲಾಡ್ ಫೌಂಡೇಶನ್‍ಗೆ ಮಂಡಳಿಯ ಹಣ ಹೋಗುತ್ತಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ ಕುಮಾರ್ ಆರೋಪಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಕಾರ್ಮಿಕ ದಿನಾಚರಣೆಯ ಕೇವಲ ಸರ್ಕಾರಿ ಅಧಿಕಾರಿಗಳ ರಜೆಗೆ ಸೀಮಿತವಾಗಿದ್ದು ಯಾವುದೇ ಕಚೇರಿಗಳಲ್ಲಿ ಕಾರ್ಮಿಕ ದಿನಾಚರಣೆಯನ್ನು ಆಚರಿಸುವಲ್ಲಿ ಎಲ್ಲಾ ಇಲಾಖೆಗಳು ಮತ್ತು ರಾಜ್ಯದ ಎಲ್ಲಾ ಅಧಿಕಾರಿಗಳು ವಿಫಲರಾಗಿರುವುದರಿಂದ ಕಾರ್ಮಿಕ ದಿನಾಚರಣೆಗೆ ಅರ್ಥಪೂರ್ಣವಿಲ್ಲದಂತಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ತಾಲೂಕು ಕಚೇರಿಗಳಲ್ಲಿ ಮೇ ಒಂದನೇ ತಾರೀಕು ಸರ್ಕಾರಿ ಗ್ರಾಮ ಕಾರ್ಯಕ್ರಮದ ಭಾಗವಾಗಿ ಕಾರ್ಮಿಕ ದಿನಾಚರಣೆಯನ್ನು ಮಾಡಲು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಲಾಯಿತು.

 

ಕಾರ್ಮಿಕ ದಿನಾಚರಣೆಗಾಗಿ ಸರ್ಕಾರವು ಹಣವನ್ನು ನೀಡುತ್ತಾ ಬಂದಿದ್ದರು ಕೂಡ ಅಧಿಕಾರಿಗಳ ಇಚ್ಛಾಶಕ್ತಿಯಿಂದ ಕಾರ್ಮಿಕರಿಗೆ ಯಾವುದೇ ರೀತಿಯ ಗೌರವ ಸಮರ್ಪಣೆ ಮಾಡುವುದರಲ್ಲಿ ಹಿಂದೆ ಬೀಳಾಗಿದೆ. ಇದರ ಬಗ್ಗೆ ಹಿಂದಿನ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಈ ನಿಟ್ಟಿನಲ್ಲಿ ಈ ಸಭೆಯಲ್ಲಿ ನಾವು ರಾಜ್ಯ ಸರ್ಕಾರಕ್ಕೆ ಎಚ್ಚರಿಸುವುದೇನೆಂದರೆ ಪ್ರತಿವರ್ಷ ಮೇ 1ನೇ ತಾರೀಖು ಕಾರ್ಮಿಕ ಸಂಘಟನೆಗಳ ಮುಖಂಡರನ್ನು ಕರೆದು ನೋಂದಾಯಿತ ಕಟ್ಟಡ ಕಾರ್ಮಿಕರನ್ನು ಅವರ ಅನುಭವದ ಗುರುತಿಸಿ ಅವರಿಗೆ ಸನ್ಮಾನ ಮಾಡುವಂಥದ್ದು ಮತ್ತೆ ಸರ್ಕಾರದಿಂದ ಗೌರವ ಸರ್ವ ಸಮರ್ಪಣೆ ಮಾಡುವಂತಹ ಕೆಲಸವನ್ನು ಸರ್ಕಾರ ಮಾಡಬೇಕಾಗಿರುತ್ತದೆ ಎಂದು ತಿಳಿಸಿದ್ದಾರೆ.

 

ಒಂದು ವರ್ಷದಿಂದ ಪಿಂಚಿಣಿ ಹಣ ಬಿಡುಗಡೆಯಾಗಿಲ್ಲ. ಅಪಘಾತ ಮರಣದ ಹಣ ಬಿಡುಗಡೆಯಾಗಿಲ್ಲ ಮದುವೆ ಸಹಾಯಧನ ಬಿಡುಗಡೆಯಾಗಿಲ್ಲ. ಮೆಡಿಕಲ್ ಬಿಲ್ ಬಿಡುಗಡೆಯಾಗಿಲ್ಲ, ವಿದ್ಯಾರ್ಥಿ ವೇತನ ಮರೀಚಿಕೆಯಾಗಿದೆ. ಇದರ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇವೆ. ಇದೇ ರೀತಿ ಮುಂದುವರೆದರೆ ರಾಜ್ಯಾದ್ಯಂತ ಉಗ್ರವಾದ ಪ್ರತಿಭಟನೆಯನ್ನು ನಡೆಸುತ್ತಿವೆ ಬೋಗಸ್ ಕಾರ್ಯಕ್ರಮಗಳ ಹೆಸರಿನಲ್ಲಿ ಹಣನ ಲೂಟಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ನಾವು ಎಚ್ಚರಿಕೆ ಗಂಟೆಯನ್ನು ಹೋಡೆಯುತ್ತಿದ್ದೇವೆ ಎಂದು ಕುಮಾರ್ ತಿಳಿಸಿದರು.

 

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಸಭೆಯನ್ನು ನಡೆಸಿ ದಿನಾಂಕ 20.05.2025ರ ಮಂಗಳವಾರ ನಮ್ಮ ಸಂಘದ ವತಿಯಿಂದ ಕಾರ್ಮಿಕ ದಿನಾಚರಣೆಯನ್ನು ಆಚರಿಸಲು ತೀರ್ಮಾನಿಸಲಾಯಿತು. ಹಾಗೂ ಕಾರ್ಮಿಕ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲು ಸಭೆಯು ತೀರ್ಮಾನಿಸಲಾಯಿತು.

 

ಪತ್ರಿಕಾಗೋಷ್ಠಿ ರಾಜ್ಯ ಉಪಾಧ್ಯಕ್ಷರಾದ ಕೆ. ಗೌಸ್‍ಪೀರ್,  ರಾಜ್ಯ ಖಜಾಂಚಿ ಡಿ ಈಶ್ವರಪ್ಪ,  ಉಪಾಧ್ಯಕ್ಷರು ಗೌಸ್‍ಖಾನ್, ರಾಜ್ಯ ನಿರ್ದೇಶಕರು ಮಾಹಾಂತೇಶ್, ಗೌರವಾಧ್ಯಕ್ಷರು ತಿಮ್ಮಯ್ಯ ಎಂ, ರಾಜ್ಯ ನಿರ್ದೇಶಕರು ಉಮೇಶ್, ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಹಾಜರಿದ್ದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment