ಬೆಳಗಾವಿ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ರಾಜಕೀಯ ಪಕ್ಷಗಳು ಗರಿಗೆದರಿವೆ. ಜಿಲ್ಲೆಯಲ್ಲಿ ಲಖನ್ ಜಾರಕಿಹೊಳಿ ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವಾಗಲೇ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಸುಮಾರು 25 ಸಾವಿರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ಜಿಲ್ಲೆಯ ಸರ್ದಾರ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆದಿದೆ. ಲಖನ್ ಜಾರಕಿಹೊಳಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ ಜಾರಕಿಹೊಳಿ ಹಾಗೂ ಮಾವ ಅಂಬಿರಾವ್ ಪಾಟೀಲ್ ಸಾಥ್ ನೀಡಿದ್ದಾರೆ. ರ್ಯಾಲಿ ವೇಳೆ 25 ಸಾವಿರ ಬೆಂಬಲಿಗರು ಲಖನ್ ಜಾರಕಿಹೊಳಿಗೆ ಘೋಷಣೆ ಕೂಗುತ್ತಾ, ಜೈಕಾರ ಹಾಕುತ್ತಾ ಸಾಥ್ ನೀಡಿದ್ದಾರೆ.
ಇನ್ನು ಬಿಜೆಪಿಯಿಂದ ಟಿಕೆಟ್ ನಿರಾಕರಣೆ ಬಳಿಕ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಸಹೋದರರಾದ ಬಾಲಚಂದ್ರ ಚಾರಕಿಹೊಳಿ ಹಾಗೂ ರಮೇಶದ ಜಾರಕಿಹೊಳಿ ಗೈರಾಗಿದ್ದರು.