Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಲಕ್ಷಾಂತರ ಹಣ ಓಡಾಟ..!

---Advertisement---

ಬಾಗಲಕೋಟೆ : ಚುನಾವಣೆ ಅಂದ್ರೆನೇ ಅಲ್ಲಿ ಝಣ ಝಣ ಕಾಂಚಾಣ ಓಡಾಡ್ತಾ ಇರುತ್ತೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಎಲ್ಲೇ ಚುನಾವಣೆ ಆದ್ರೂ ಕೂಡ ಅಲ್ಲಿ ಹಣದ ಕಂತೆಗಳು ಸಿಕ್ಕಿರುವ ಸುದ್ದಿಯನ್ನ ನೀವೂ ನೋಡಿರ್ತೀರಿ. ಅದೇ ರೀತಿ ಬಾಗಲಕೋಟೆಯಲ್ಲು ಕಂತೆ ಕಂತೆ ಹಣ ಸಿಕ್ಕಿದೆ. ಅಂದ್ರೆ ದಾಖಲೆಯೇ ಇಲ್ಲದ 12 ಲಕ್ಷದ 37 ಸಾವಿರ ಹಣ ಸಿಕ್ಕಿದೆ. ಚುನಾವಣಾಧಿಕಾರಿಗಳು ಈ ಹಣವನ್ನ ಜಪ್ತಿ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಮೇಟಿ ಅವರ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ‌. ಸದ್ಯ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಚುನಾವಣಾ ಅಧಿಕಾರಿಗಳು ಕೂಡ ಹದ್ದಿನ ಕಣ್ಣಿಟ್ಟಿದ್ದಾರೆ. ಇದರ ನಡುವೆಯೇ ಹುನಗುಂದ ತಾಲೂಕಿನ ಧನ್ನೂರು ಚೆಕ್ ಪೋಸ್ಟ್ ಬಳಿ ಕಾರ್ಯಾಚರಣೆ ನಡೆಸಿದಾಗ ಈ ಹಣ ಸಿಕ್ಕಿದೆ. ಎರಡು ಬೊಲೆರೋ ಕಾರುಗಳನ್ನ ಧನ್ನೂರು ಚೆಕ್ ಪೋಸ್ಟ್ ಬಳಿ ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಕಾರಿನಲ್ಲಿ ಭಾರಿ ಮೊತ್ತದ ಹಣ ಪತ್ತೆಯಾಗಿದೆ. ಹಣಕ್ಕೆ ಸಂಬಂಧಿಸಿದ ಅಧಿಕೃತ ದಾಖಲೆಗಳು ಇಲ್ಲದ ಕಾರಣ, ಎಫ್ ಎಸ್ ಟಿ ತಂಡವು ಕೂಡಲೇ ಹಣವನ್ನು ವಶಕ್ಕೆ ಪಡೆದಿದ್ದಾರೆ.

 

ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ಜಿಲ್ಲಾಡಳಿತವೂ ಚುನಾವಣಾ ಅಕ್ರಮಗಳನ್ನು ತಡೆಯಲು ಬಿಗಿ ಬಂದೋಬಸ್ತ್ ಕೈಗೊಂಡಿದೆ. ದಾಖಲೆಗಳಿಲ್ಲದೆ ದೊಡ್ಡ ಮೊತ್ತದ ಹಣ ಅಥವಾ ಉಡುಗೊರೆಗಳನ್ನು ಸಾಗಿಸುವುದರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಸದ್ಯ ಜಪ್ತಿ ಮಾಡಲಾದ ಹಣವನ್ನು ಚುನಾವಣಾಧಿಕಾರಿಗಳ ವಶಕ್ಕೆ ನೀಡಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ. ಚುನಾವಣಾಧಿಕಾರಿಗಳು ಹಣವನ್ನ ಜಪ್ತಿ ಮಾಡಲಾಗಿದೆ. ಆ ಹಣದ ಮೂಲ ಎಲ್ಲಿಯದ್ದು ಎಂಬ ತನಿಖೆ ನಡೆಯುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...