ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 30 : ಚಿತ್ರದುರ್ಗ ನಗರಸಭೆಯ ನೂತನ ಪೌರಾಯುಕ್ತರನ್ನಾಗಿ ಶ್ರೀಮತಿ ಎಸ್. ಲಕ್ಷ್ಮೀ ಅವರನ್ನು ವರ್ಗಾಯಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಮಂಜುನಾಥ್ ರವರು ಆದೇಶಿದ್ದಾರೆ.
ದಾವಣಗೆರೆ ಮಹಾನಗರ ಪಾಲಿಕೆಯ ಪೌರಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಎಸ್. ಲಕ್ಷ್ಮೀ ಕೆ ಅವರನ್ನು
ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಆಡಳಿತಾತ್ಮಕ ಹಿತದೃಷ್ಟಿಯಿಂದ ಚಿತ್ರದುರ್ಗ ನಗರಸಭೆಯ ಪೌರಾಯುಕ್ತರಾಗಿ ವರ್ಗಾವಣೆಗೊಳಿಸಿ
ಆದೇಶಿಸಿದೆ.
ಚಿತ್ರದುರ್ಗ ನಗರಸಭೆಯ ಪೌರಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಎಂ.ರೇಣುಕಾ ಅವರನ್ನು ಬಾಗಲಕೋಟೆ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ಹುದ್ದೆಗೆ ನೇಮಿಸಿ ಆದೇಶಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.













