ಚಿತ್ರದುರ್ಗ ನಗರಸಭೆಯ ನೂತನ ಪೌರಾಯುಕ್ತರಾಗಿ ಲಕ್ಷ್ಮೀ ನೇಮಕ : ರೇಣುಕಾ ವರ್ಗಾವಣೆ

0 Min Read

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 30 : ಚಿತ್ರದುರ್ಗ ನಗರಸಭೆಯ ನೂತನ ಪೌರಾಯುಕ್ತರನ್ನಾಗಿ ಶ್ರೀಮತಿ ಎಸ್. ಲಕ್ಷ್ಮೀ ಅವರನ್ನು ವರ್ಗಾಯಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಮಂಜುನಾಥ್ ರವರು ಆದೇಶಿದ್ದಾರೆ.

ದಾವಣಗೆರೆ ಮಹಾನಗರ ಪಾಲಿಕೆಯ ಪೌರಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಎಸ್. ಲಕ್ಷ್ಮೀ ಕೆ ಅವರನ್ನು
ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಆಡಳಿತಾತ್ಮಕ ಹಿತದೃಷ್ಟಿಯಿಂದ ಚಿತ್ರದುರ್ಗ ನಗರಸಭೆಯ ಪೌರಾಯುಕ್ತರಾಗಿ ವರ್ಗಾವಣೆಗೊಳಿಸಿ
ಆದೇಶಿಸಿದೆ.

ಚಿತ್ರದುರ್ಗ ನಗರಸಭೆಯ ಪೌರಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಎಂ.ರೇಣುಕಾ ಅವರನ್ನು‌ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ಹುದ್ದೆಗೆ ನೇಮಿಸಿ ಆದೇಶಿದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks