ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಳಗಾವಿ: ಅಧಿವೇಶನದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಜಾಗೂ ಸಿಟಿ ರವಿ ವಿಚಾರ ರಾಜ್ಯದಲ್ಲೆಡೆ ಸಂಚಲನ ಸೃಷ್ಟಿಸಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಹಿನ್ನೆಲೆಯಲ್ಲಿ ಸಿಟಿ ರವಿ ಬಂಧನ ಕೂಡ ಆಗಿದೆ. ಈ ಸಂಬಂಧ ಇಂದು ಬೆಳಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಕಣ್ಣೀರು ಹಾಕುತ್ತಲೇ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
‘ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿದ್ದಾರೆ ಎಂದು ನಾವೂ ಧರಣಿ ಮಾಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಡ್ರಗ್ ಅಡಿಕ್ಟ್ ಡ್ರಗ್ ಅಡಿಕ್ಟ್ ಎಂದು ಸಿಟಿ ರವಿ ಹೇಳುತ್ತಿದ್ದರು. ಡ್ರಗ್ ಅಡಿಕ್ಟ್ ಅಂತ ಯಾಕೆ ಹೇಳ್ತೀರಾ..? ನೀವೂ ಕೂಡ ಆಕ್ಸಿಡೆಂಟ್ ಮಾಡಿದ್ದೀರಲ್ಲ. ತಾವೂ ಕೂಡ ಒಂದು ಜೀವ ತೆಗೆದವರು ಆಗುತ್ತೀರಾ ಅಲ್ವಾ ಎಂದೇ ಆಗ ತಿರುಗಿ ಅಸಹ್ಯ ಪದ ಬಳಕೆ ಮಾಡಿದರು. ಅದನ್ನ ಬಳಸಲಿಕ್ಕೆ ನನಗೆ ಅಸಹ್ಯವಾಗುತ್ತದೆ. ನಾಗರಿಕ ಸಮಾಜದಲ್ಲಿ, ರಾಜಕೀಯದಲ್ಲಿ ಬಹಳಷ್ಟು ಧೈರ್ಯ ಮಾಡಿ ಇಲ್ಲಿಯವರೆಗೂ ಬಂದಿದ್ದೇನೆ. ಎಲ್ಲಾ ಮಹಿಳೆಯರನ್ನು ಪ್ರತಿನಿಧಿಸುತ್ತಿದ್ದೇನೆ. ಆದರೆ ಸಿಟಿ ರವಿ ಆ ಮಾತನ್ನು ಹತ್ತು ಬಾರಿ ಹೇಳಿ ತೇಜೋವಧೆ ಮಾಡಿದರು.

ಇದಕ್ಕೆಲ್ಲ ಹೆದರುವುದಿಲ್ಲ. ಒಬ್ಬ ತಾಯಿ, ಅಕ್ಕ, ಅತ್ತೆಯಾಗಿದ್ದೇನೆ. ಇವತ್ತು ನನ್ನನ್ನು ನೋಡಿ ಸಾವಿರಾರು ಮಹಿಳೆಯರು ರಾಜಕೀಯಕ್ಕೆ ಬರಬೇಕು ಎಂದುಕೊಳ್ಳುತ್ತಿದ್ದಾರೆ. ಸದನದಲ್ಲಿ ಈ ರೀತಿ ಮಾತಾಡಿದರೆ ಬಹಳ ಹರ್ಟ್ ಆಗುತ್ತದೆ. ಜೆಟ್ಟವರನ್ನ, ಕೆಟ್ಟದ್ದನ್ನ ನೋಡಿದರೇನೆ ದೂರ ಇರುವವಳು ನಾನು. ಯಾರಿಗೂ ತೊಂದರೆ ಕೊಟ್ಟವಳಲ್ಲ. ಪರಿಷತ್ ನಲ್ಲಿ ಅದನ್ನ ಯಾರೂ ಖಂಡಿಸಲಿಲ್ಲ. ಎಲ್ಲರೂ ಧೃತರಾಷ್ಟ್ರರಾದರು ಎಂದು ಬೇಸರ ಹೊರ ಹಾಕಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್