Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗಕ್ಕೆ ಇಂದು ಲಕ್ಷ್ಮೀ ಹೆಬ್ಬಾಳ್ಕರ್ : ರಾಷ್ಟ್ರನಾಯಕ‌ ದಿವಂಗತ ಎಸ್. ನಿಜಲಿಂಗಪ್ಪ ನವರ ಮನೆಗೆ ಭೇಟಿ ಸಾಧ್ಯತೆ…!

ಹೆಬ್ಬಾಳ್ಕರ್
---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 02 : ಮಹಿಳಾ ಮತ್ತು ಮಕ್ಕಳ‌ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಚಿತ್ರದುರ್ಗಕ್ಕೆ‌ ಭೇಟಿ ನೀಡುತ್ತಿದ್ದಾರೆ. ಈ ಭೇಟಿ ವೇಳೆ ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದಾರೆ. ಆ ಕಾರ್ಯಕ್ರಮದ ವಿವರದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ಬೆಳಗ್ಗೆ 11 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗಮಿಸಲಿದ್ದಾರೆ. ಬಳಿಕ 12 ಗಂಟೆಗೆ ಜಿ.ಪಂ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3:30ಕ್ಕೆ ಬಾಲ ಮಂದಿರಕ್ಕೆ ಭೇಟಿ ನೀಡುತ್ತಾರೆ. 4:30ಕ್ಕೆ ಕಬೀರಾನಂದ ಆಶ್ರಮಕ್ಕೆ ತೆರಳಲಿದ್ದಾರೆ.


ಅಷ್ಟೇ ಅಲ್ಲದೆ ರಾಷ್ಟ್ರನಾಯಕ‌ ದಿ.ಎಸ್ ನಿಜಲಿಂಗಪ್ಪ ನವರ ಮನೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಚಿತ್ರದುರ್ಗದ ಜಿಲ್ಲಾಧಿಕಾರಿ ನಿವಾಸ ಬಳಿ ಎಸ್. ನಿಜಲಿಂಗಪ್ಪ ಅವರ ಮನೆ ಇದೆ. ರಾಜ್ಯ ಸರ್ಕಾರ ಎಸ್ ನಿಜಲಿಂಗಪ್ಪ ಮನೆ ಖರೀದಿಗೆ ಈ ಹಿಂದೆ ಯತ್ನಿಸಿತ್ತು. ಇಲ್ಲಿ ಮ್ಯೂಸಿಯಂ ಮಾಡಬೇಕೆಂದುಕೊಂಡಿತ್ತು. ಆದರೆ ಮ್ಯೂಸಿಯಂ ನಿರ್ಮಾಣ ಯೋಜನೆ ದಶಕದಿಂದ ನೆನೆಗುದಿಗೆ ಬಿದ್ದಿದೆ. ಈ ಹಿನ್ನೆಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬಿ.ಸಿ ಚಂದ್ರಶೇಖರ್, ಮುರುಳೀಧರ್ ಹಾಲಪ್ಪ ಭೇಟಿ ನೀಡುವ ಸಾಧ್ಯತೆ ಇದೆ.

ಕೆಪಿಸಿಸಿಯಿಂದ ನಿಜಲಿಂಗಪ್ಪ ಮನೆ ಖರೀದಗೆ ಸಿದ್ಧತೆ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಈ ಸಂಬಂಧ ಎಸ್. ನಿಜಲಿಂಗಪ್ಪ ಪುತ್ರ ಕಿರಣ್ ಜೊತೆ ಒಂದು ಸುತ್ತಿನ ಮಾತುಕತೆ ಆಗಿದೆ ಎನ್ನಲಾಗಿದೆ. ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ ಅವರು ನಿನ್ನೆ ಖಾಸಗಿ ಹೋಟೆಲ್‌ನಲ್ಲಿ ಮಾತುಕತೆ ನಡೆಸಿದ್ದಾರಂತೆ. ಎಸ್ ನಿಜಲಿಂಗಪ್ಪ ವಾಸವಿದ್ದ ಮನೆಯ ಆವರಣದಲ್ಲೇ ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಪ್ಲಾನ್ ಕೂಡ ನಡೀತಾ ಇದೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ಈ ಮಾಹಿತಿ ಲಭ್ಯವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...