ಹಿರಿಯೂರು : ಪ್ರಾಮಾಣಿಕತೆ ಹಾಗೂ ನಿಷ್ಠೆಗೆ ಲಂಬಾಣಿ ಸಮುದಾಯವು ಹೆಸರುವಾಸಿಯಾಗಿದೆ. ಈ ಸಮುದಾಯ ಜಾನಪದ ಕ್ಷೇತ್ರಕ್ಕೆ ತನ್ನದೇ ಆದ ವಿಶಿಷ್ಟ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕ ರಾಜಣ್ಣ ಅಭಿಪ್ರಾಯಪಟ್ಟರು.
ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಓಬಳಾಪುರ ಲಂಬಾಣಿ ತಾಂಡಾ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ 286ನೇ ಶ್ರೀ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಲಂಬಾಣಿ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯ ಮುನ್ನಡೆ ಸಾಧಿಸಿ ಅಭಿವೃದ್ಧಿ ಹೊಂದಬೇಕು ಎಂದರು.
12ನೇ ಶತಮಾನದ ಬಸವಣ್ಣನವರ ಕಾಯಕ ತತ್ವವನ್ನು ಸಂತ ಸೇವಾಲಾಲ್ ಅವರು ಪುನರುಚ್ಚರಿಸಿದ್ದಾರೆ. ಕಾಡಿನಲ್ಲಿ ಅಸಂಘಟಿತವಾಗಿ ವಾಸಿಸುತ್ತಿದ್ದ ಜನರಿಗೆ ನೆಲೆ ದೊರಕಿಸಿಕೊಡಲು ಹೋರಾಟ ಸಂಘಟಿಸಿದರು. ನಿಷ್ಠೆ ಭಕ್ತಿ ಹಾಗೂ ಶ್ರದ್ಧೆಯಿಂದ ಲಂಬಾಣಿ ಸಮಾಜವಲ್ಲದೇ ಇತರೆ ಸಮುದಾಯಗಳು ಸನ್ಮಾರ್ಗದಲ್ಲಿ ನಡೆಯಬೇಕು ಎಂದು ತೋರಿಸಿಕೊಟ್ಟಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಂಜು ನಾಯ್ಕ್, ಷಣ್ಮುಖನಾಯ್ಕ್ , ಗುಂಡು ನಾಯ್ಕ್, ಗಿರೀಶ್ ನಾಯ್ಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















