Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಂಬಾಣಿಹಟ್ಟಿಯನ್ನು ಕಂದಾಯ ಗ್ರಾಮವಾಗಿ ಘೋಷಿಸಿ; ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 13 : ಹೊಳಲ್ಕೆರೆ ತಾಲ್ಲೂಕು ಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ ಸ್ಥಾಪಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಿದರು.

ಬಿ.ದುರ್ಗ ಹೋಬಳಿಗೆ ಸೇರಿದ ಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಲಂಬಾಣಿ ಜನಾಂಗದವರೆ ಅಧಿಕವಾಗಿದ್ದು, ನೂರರಿಂದ 120 ಮನೆಗಳಿದ್ದು, ಐದುನೂರರಿಂದ 800 ರಷ್ಟು ಜನಸಂಖ್ಯೆಯಿದೆ. ತಾಂಡದಲ್ಲಿ ಪ್ರಾಥಮಿಕ ಶಾಲೆಯಿರುವುದರಿಂದ ಮಜುರೆ ಗ್ರಾಮವಾಗಿ ಪರಿಗಣಿಸಲಾಗಿದ್ದು, ಜನಸಂಖ್ಯೆ ಮತ್ತು ಮನೆಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಗಂಜಿಗಟ್ಟೆ ಲಂಬಾಣಿ ತಾಂಡವನ್ನು ಕಂದಾಯ ಗ್ರಾಮವಾಗಿ ಪರಿಗಣಿಸಿ ಪ್ರತ್ಯೇಕ ಮತದಾನದ ಬೂತ್ ಸ್ಥಾಪಿಸುವಂತೆ ಒತ್ತಾಯಿಸಿದರು.

ಗಂಜಿಗಟ್ಟೆ ಲಂಬಾಣಿಹಟ್ಟಿ ಕುಗ್ರಾಮವಾಗಿದ್ದು, ಬಡತನ ರೇಖೆಗಿಂತ ಕೆಳಗಿರುವ ಈ ಗ್ರಾಮದಲ್ಲಿ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ನಾಗರೀಕ ಮೂಲಭೂತ ಸೌಲಭ್ಯಗಳಿಂದ ದೂರ ಉಳಿದಿರುವ ಲಂಬಾಣಿಹಟ್ಟಿ ಗಣಿಬಾಧಿತ ಪ್ರದೇಶವಾಗಿದ್ದು, ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಪ್ರತ್ಯೇಕ ಮತದಾನದ ಬೂತ್ ಸ್ಥಾಪಿಸಿ ಗಣಿಬಾಧಿತ ಪ್ರದೇಶಕ್ಕೆ ಒಳಪಡಿಸುವಂತೆ ಗಣಿಬಾಧಿತ ಸಮಿತಿ ಸಂಸ್ಥಾಪಕ ರಮೇಶ್ ಬಿ.ದುರ್ಗ ಜಿಲ್ಲಾಡಳಿತವನ್ನು ಆಗ್ರಹಿಸಿದರು.

ರಮೇಶ್‍ನಾಯ್ಕ, ಗೋವರ್ಧನ್, ವೆಂಕಟೇಶ್, ಜಿ.ಸಿ.ತಿಪ್ಪೇಸ್ವಾಮಿ, ರಘು, ಉಮೇಶ್, ಶಿವನಾಯ್ಕ, ಯೋಗೇಶ್, ಕರ್ನಾಟಕ ಶಾಂತಿ ಮತ್ತು ಸೌಹಾರ್ಧ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್‍ಕುಮಾರ್, ತಿಪ್ಪೇಸ್ವಾಮಿ, ಶಿವಕುಮಾರ್, ಕೃಷ್ಣನಾಯ್ಕ, ಮಂಜುಳಬಾಯಿ, ಕರಿಬಸವ ಇನ್ನು ಅನೇಕರು ಪ್ರತಿಭಟನೆಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now