ಹಿರಿಯೂರು, (ಜೂ.19): ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರು ಶಾಸಕರಾದ ಪೂರ್ಣಿಮಾ ಶ್ರೀನಿವಾಸ್ ರವರನ್ನು ಭೇಟಿಯಾಗಿ ನೌಕರರ ಬಹುದಿನದ ಬೇಡಿಕೆಯಾದ ಸಮುದಾಯ ಭವನ ಹಾಗೂ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಅಗತ್ಯವಿರುವ ಜಮೀನು ಮಂಜೂರು ಮಾಡುವಂತೆ ಮನವಿ ಮಾಡಲಾಯಿತು. ಹಾಗೂ ಜಿಲ್ಲೆಯ ನೌಕರರ ಸಮಸ್ಯೆಗಳ ಕುರಿತಾಗಿ ಚರ್ಚೆ ಮಾಡಿಲಾಯಿತು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದನೆ ನೀಡಿದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಸಮುದಾಯ ಭವನ ನಿರ್ಮಾಣ ಮಾಡಲು ಜಮೀನು ಮಂಜೂರು ಮಾಡಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಹಿರಿಯೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್, ಮಾಜಿ ನಗರಸಭಾ ಅಧ್ಯಕ್ಷ ರಾದ ಚಂದ್ರಶೇಖರ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಮಂಜುನಾಥ್ ತಾಲೂಕು ಘಟಕದ ಅಧ್ಯಕ್ಷರಾದ ಶಿವಕುಮಾರ್ ಕಾರ್ಯದರ್ಶಿಗಳಾದ ರಮೇಶ್, ಉಪಾಧ್ಯಕ್ಷರಾದ ಯಶೋಧರ, ಶಿವಾನಂದ, ಬಿ.ಕೆ.ಹನುಮಂತಪ್ಪ, ಹಾಗೂ ಸಂಘದ ಪದಾಧಿಕಾರಿಗಳು ವಿವಿಧ ಇಲಾಖೆಗಳ ಅಧಿಕಾರಿ ಮತ್ತು ನೌಕರರು ಉಪಸ್ಥಿತರಿದ್ದರು.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…