ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇಗ ಗುಣಮುಖರಾಗಲೆಂದು ಅಭಿಮಾನಿಗಳು ಇವರಿಗೆ ಹಾರೈಸಿದ್ದಾರೆ.

ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಇದರಿಂದಾಗಿ ಅವರ ಆರೋಗ್ಯ ಸ್ಥಿತಿ ತುಂಬಾ ಹದಗೆಟ್ಟಿದೆ. ಹೀಗಾಗಿ ಅವರನ್ನ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಐಸಿಯೂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೆರ ಇದೆ. ಮಮಬೈ, ಮಹಾರಾಷ್ಟ್ರದಲ್ಲೂ ಸೋಂಕು ಉಲ್ಬಣಗೊಂಡಿದೆ. ಹೀಗಾಗಿ ಎಲ್ಲೆಡೆ ಆಯಾಯ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಕೈಗೊಂಡಿದೆ.
