ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಲತಾ ಮಂಗೇಶ್ಕರ್ ಅಂತಿಮ ವಿಧಿವಿಧಾನ

ಮುಂಬಯಿ : ಖ್ಯಾತ ಗಾಯಕಿ ಮತ್ತು ಭಾರತ ರತ್ನ ಪ್ರಶಸ್ತಿ ವಿಜೇತೆ ಲತಾ ಮಂಗೇಶ್ಕರ್ ಅವರ ನಿಧನದಿಂದ ಚಲನಚಿತ್ರ ಜಗತ್ತನ್ನು ಶೋಕದಲ್ಲಿ ಮುಳುಗಿದೆ. ಎಷ್ಟೋ ಹಾಡುಗಳಿಗೆ ಅವರ ಮಧುರ ಕಂಠದಿಂದ ಜೀವ ತುಂಬಿದ ಗಾನ ಕೋಗಿಲೆ ಇನ್ನಿಲ್ಲ ಎಂಬ ಸುದ್ದಿ ಅಭಿಮಾನಿಗಳು ದುಃಖ ಸಾಗರದಲ್ಲಿ ಮುಳುಗುವಂತೆ ಮಾಡಿತು. ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲು ರಾಜಕಾರಣಿಗಳು, ಚಿತ್ರರಂಗದ ಗಣ್ಯರು ಸೇರಿದಂತೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

ಇದಕ್ಕೂ ಮುನ್ನ ಮುಂಬೈನ ಲತಾ ಮಂಗೇಶ್ಕರ್ ಅವರ ನಿವಾಸದಿಂದ ಶಿವಾಜಿ ಪಾರ್ಕ್‌ವರೆಗೆ ಮೆರವಣಿಗೆ ನಡೆಸಲಾಯಿತು. ಈ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿ ಖ್ಯಾತ ಗಾಯಕಿಗೆ ಅಂತಿಮ ವಿದಾಯ ಹೇಳಿದರು. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಅಂತ್ಯಕ್ರಿಯೆ ವಿಧಿವಿಧಾನಗಳು ನಡೆಯುತ್ತಿವೆ.
ಇದಕ್ಕಾಗಿ ಈಗಾಗಲೇ ವ್ಯವಸ್ಥೆಗಳು ಪೂರ್ಣಗೊಂಡಿವೆ. ಲತಾ ಅವರ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *