Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಿವಂಗತ. ಡಿ. ಸುಧಾಕರ್ ಸೇವೆ ಅಪಾರ : ಬಿಸಿ ಸಂಜೀವಮೂರ್ತಿ

---Advertisement---

ಸುದ್ದಿಒನ್, ಹಿರಿಯೂರು, ಜೂನ್‌. 02 : ದಿವಂಗತ ಮಾಜಿ ಸಚಿವ ಡಿ ಸುಧಾಕರವರ ಅಕಾಲಿಕ ನಿಧನ ಬೇಸರ ತರಿಸಿದ್ದು, ಇಂತಹ ಸಂದರ್ಭ ಬರುತ್ತದೆ ಎಂದು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ ಎಂದು ಶಿಮುಲ್ ನಿರ್ದೇಶಕ ಬಿಸಿ ಸಂಜೀವಮೂರ್ತಿ ತಿಳಿಸಿದರು.

ನಗರದ ಅನ್ನಪೂರ್ಣೆಶ್ವರಿ ಹೋಟೆಲ್ ಸಭಾಂಗಣದಲ್ಲಿ ದಿವಂಗತ ಡಿ. ಸುಧಾಕರವರ ನಿಧನಕ್ಕೆ ಶ್ರದ್ಧಾಂಜಲಿ ಸಭೆ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಕುರಿತು ಮಾತನಾಡಿದರು.

ಚಳ್ಳಕೆರೆಯಲ್ಲಿ ಒಮ್ಮೆ ಹಿರಿಯೂರು ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿರುವ ಅವರು ಸಾಕಷ್ಟು ಕೆಲಸ ಮಾಡಿದ್ದಾರೆ. ನಾವಿಬ್ಬರೂ ಒಳ್ಳೆಯ ಸ್ನೇಹಿತರು, ನನಗಿಂತ ಐದು ವರ್ಷ ದೊಡ್ಡವರಾಗಿದ್ದರು. ಶಾಸಕರವಧಿ ಇನ್ನು ಎರಡು ವರ್ಷ ಇತ್ತು ಅವಧಿಗೂ ಮುನ್ನವೇ ನಿಧನ ಹೊಂದಿರುವುದು ಅತೀವ ನೋವು ತಂದಿದೆ. ಆ ಭಗವಂತ ಆ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ಸಚಿವರ ಕಾರ್ಯವೈಖರಿ ಹಾಗೂ ಅಭಿವೃದ್ಧಿ ಕೆಲಸಗಳು ಕ್ಷೇತ್ರದ ಜನತೆಯ ಮನಸ್ಸಿನಲ್ಲಿ ಅಚ್ಚಳಿಯಾಗಿ ಉಳಿದಿವೆ. ಶಿಕ್ಷಣ, ಆರೋಗ್ಯ ಹಾಗೂ ಕೃಷಿ ಕ್ಷೇತ್ರದಲ್ಲಿ ಹೆಚ್ಚು ಒತ್ತು ನೀಡಿದ್ದಾರೆ. ರೈತರ ಹಿತ ಕಾಪಾಡಲು ಭದ್ರಾ ಮೇಲ್ದಂಡೆ ಯೋಜನೆಯನ್ನು ಯಶಸ್ವಿಗೊಳಿಸಲು ಸುಧಾಕರ್ ಸಾಕಷ್ಟು ಶ್ರಮವಹಿಸಿದ್ದರು.‌ ಬಡವರ ಬದುಕಿಗೆ ಬೆಳಕಾಗಿದ್ದ ಸಚಿವರು ಇಂದು ನಮ್ಮ ಜೊತೆ ಇಲ್ಲದಿದ್ದರೂ ಸಹ ಅವರ ಶಾಶ್ವತ ಅಭಿವೃದ್ಧಿ ಕೆಲಸಗಳು ಜನತೆಯ ಮನಸ್ಸಿನಲ್ಲಿ ಸದಾ ಉಳಿದಿವೆ ಎಂದು ತಿಳಿಸಿದರು.

ತಾಲೂಕಿನಲ್ಲಿ ಹಾಲಿನ ಸೊಸೈಟಿ ಹೆಚ್ಚಳದಿಂದ, ಹಾಲಿನ ಉತ್ಪಾದನೆಯಲ್ಲಿ ಏರಿಕೆ ಕಂಡಿದೆ. ಮುಂದಿನ ಎರಡು ವರ್ಷಗಳಲ್ಲಿ ಹಿರಿಯೂರು 10, ಚಳ್ಳಕೆರೆ 8 ಹಾಗೂ ಮೊಳಕಾಲ್ಮೂರು 2 ಸೇರಿದಂತೆ ಒಟ್ಟು 20 ಬಿಎಂಸಿ ಕೇಂದ್ರ ತೆರೆಯಲು ಚಿಂತನೆ ನಡೆಸಿದೆ. ಅತಿ ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಲಿದೆ. ವಿವಿ ಪುರ, ನಂಜಯ್ಯನಕೊಟ್ಟಿಗೆ, ಕಂದಿಕೆರೆ, ಸೂಗೂರು, ಪಟ್ರೆಹಳ್ಳಿ ಸೇರಿದಂತೆ ತಾಲ್ಲೂಕಿನಲ್ಲಿ 10 ಹೊಸ ಬಿಎಂಸಿ ಕೇಂದ್ರ ಆರಂಭಿಸಲು ಸಿದ್ಧತೆ ನಡೆಯುತ್ತಿದೆ. ಬಿಎಂಸಿ ಕೇಂದ್ರ ತೆರೆಯಲು ಆಸಕ್ತಿ ಇರುವ ಹಾಲು ಉತ್ಪಾದಕರ ಸಹಕಾರ ಸಂಘಗಳು ದಾಖಲೆಗಳೊಂದಿಗೆ ಸಂಬಂಧಪಟ್ಟವರನ್ನು ಸಂಪರ್ಕಿಸಬೇಕು. ಬಿಎಂಸಿ ಕೇಂದ್ರ ಆರಂಭದಿಂದ ರೈತರಿಗೆ ಹಾಗೂ ಹಾಲಿನ ಡೈರಿಗಳಿಗೆ ಅನುಕೂಲವಾಗಲಿದೆ ಎಂದು ಬಿಸಿ ಸಂಜೀವಮೂರ್ತಿ ಹೇಳಿದರು.

ಈ ಸಂದರ್ಭದಲ್ಲಿ ಚಳ್ಳಕೆರೆ ಉಪವಿಭಾಗಾಧಿಕಾರಿ ಪುಟ್ಟರಾಜು, ಎಸ್.ಜಿ. ಕೃಷ್ಣಕುಮಾರ್, ಮನೋಹರ್, ಜೆಜಿ ಹಳ್ಳಿ ಗೋವಿಂದರಾಜು ಸೇರಿದಂತೆ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now