Connect with us

Hi, what are you looking for?

ಪ್ರಮುಖ ಸುದ್ದಿ

ಚರ್ಚ್ ಕುಸಿದು 22 ಮಂದಿ ಸಾವು

ಘಾನಾ:  ಪೂರ್ವ ಘಾನಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡ ಕುಸಿದು ಮಗು ಸೇರಿದಂತೆ 22 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಪೂರ್ವ ಪ್ರದೇಶದ ಅಕೀಮ್ ಬಟಾಬಿ ಪಟ್ಟಣದಲ್ಲಿ ಚರ್ಚ್ ಸಮುದಾಯವು ಇನ್ನೂ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿದು ಈ ಅಪಘಾತ ಸಂಭವಿಸಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ (ನ್ಯಾಡ್ಮೊ) ಅಧಿಕಾರಿ ರಿಚರ್ಡ್ ಅಮೋ-ಯಾರ್ಟೆ ತಿಳಿಸಿದ್ದಾರೆ.

ಸತ್ತವರಲ್ಲಿ 11 ಮಂದಿ ಮಹಿಳೆಯರು, ಒಂದು ಮಗು ಮತ್ತು 10 ಮಂದಿ ಪುರುಷರು ಇದ್ದಾರೆ ಎಂದು ಅಮೋ-ಯಾರ್ಟೆ ಹೇಳಿದ್ದಾರೆ.

ಅಪಘಾತದ ಸಮಯದಲ್ಲಿ ಚರ್ಚ್‌ನಲ್ಲಿ 60 ಮಂದಿ ಪ್ರಾರ್ಥಿಸುತ್ತಿದ್ದರು. ಮಾಹಿತಿ ತಿಳಿದ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅನೇಕರು ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ಅಪಘಾತದಲ್ಲಿ 22 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡವು ದುಸ್ಥಿತಿಯಲ್ಲಿರುವುದರಿಂದ ಇಂತಹ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

Click to comment

Leave a Reply

Your email address will not be published. Required fields are marked *

You May Also Like

error: Content is protected !!