Connect with us

Hi, what are you looking for?

ಪ್ರಮುಖ ಸುದ್ದಿ

ಬಿಜೆಪಿಗರಿಗೆ ನಾನೇ ಸಂವಿಧಾನದ ಪಾಠ ಮಾಡುತ್ತೇನೆ : ಸಿದ್ದರಾಮಯ್ಯ

ಬೆಂಗಳೂರು : ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವನಿಲುವು. ನರೇಂದ್ರಮೋದಿಯವರು ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ, ಆ ವ್ಯವಹಾರದಲ್ಲಿ ತೊಡಗಿರುವ ಅನೇಕ ವ್ಯಾಪಾರಿಗಳು ಕೂಡಾ ಬಿಜೆಪಿಯವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಹರಿಹಾಯ್ದರು.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಗೋಹತ್ಯೆ ನಿಷೇಧದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ನಮ್ಮ ನಿಲುವಿನಲ್ಲಿ ಬದಲಾವಣೆಯಿಲ್ಲ. ಹಿಂದಿನ ಬಿಜೆಪಿ ಸರ್ಕಾರ 1964ರ ಗೋಹತ್ಯೆ ನಿಷೇಧ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ನಮ್ಮ ಸರ್ಕಾರ ರದ್ದುಗೊಳಿಸಿ ಮೂಲ ಕಾಯ್ದೆಯನ್ನು ಉಳಿಸಿಕೊಂಡಿದೆ. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಈ ಲವ್ ಜೆಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನ. ಅವರಿಗೆ ಸಾಧನೆಯ ಬಲದಿಂದ ಚುನಾವಣೆ ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಕೋಮುದ್ವೇಷ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ.

ಮದುವೆಗೆ ಜಾತಿ-ಧರ್ಮಗಳ ನಿರ್ಬಂಧ ಕಾನೂನಿನಲ್ಲಿ ಇಲ್ಲ. ದೇಶದ ಯಾವ ಕಾನೂನು ಕೂಡಾ ಲವ್ ಜೆಹಾದ್ ಎಂದರೆ ಏನು ಎಂದು ವ್ಯಾಖ್ಯಾನಿಸಿಲ್ಲ ಎಂದು ಕೇಂದ್ರ ಗೃಹಸಚಿವರೇ ಸಂಸತ್ ನಲ್ಲಿ ಹೇಳಿದ್ದಾರೆ. ಸಿ.ಟಿ.ರವಿಯವರು ಗೃಹಸಚಿವರನ್ನು ಕೇಳಿಕೊಂಡು ಬಂದು ಮಾತನಾಡಲಿ.

ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅಂತರಧರ್ಮೀಯ ಮದುವೆ ಅಕ್ರಮ ಎಂದು ಹೇಳಿಲ್ಲ. ಆ ತೀರ್ಪನ್ನು ಉಲ್ಲೇಖಿಸುವವರು ಮೊದಲು ಅದನ್ನು ಓದಿಕೊಳ್ಳಲಿ. ಗೂಂಡಾರಾಜ್ಯವಾದ ಉತ್ತರಪ್ರದೇಶ ನಮಗೆ ಮಾದರಿ ಅಲ್ಲ.

ಆರ್ ಎಸ್ ಎಸ್ ಶಾಖೆಗೆ ಹೋಗಿ ನಾನು ಕಲಿಯಬೇಕಾಗಿಲ್ಲ, ಅದರ ಬಗ್ಗೆ ತಿಳಿದುಕೊಂಡೇ ವಿರೋಧಿಸುತ್ತಿದ್ದೇನೆ, ಆಡಳಿತ ನಡೆಸುವವರಿಗೆ ಸಂವಿಧಾನ ಗೊತ್ತಿರಬೇಕು, ಆರ್ ಎಸ್ ಎಸ್ ಅಲ್ಲ. ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ. ಬೇಕಾದರೆ ನಾನೇ ಸಂವಿಧಾನದ ಪಾಠ ಮಾಡ್ತೇನೆ. ಬಿಜೆಪಿ ಮತ್ತು ಆರ್ ಎಸ್ ಎಸ್ ಮೂಲಭೂತವಾಗಿ ಸಂವಿಧಾನ ವಿರೋಧಿ. ಅದು ಮೀಸಲಾತಿ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎಲ್ಲವನ್ನೂ ವಿರೋಧಿಸುತ್ತದೆ. ಅವರು ಮಿಲ್ಲರ್ ವರದಿಯಿಂದ ಮಂಡಲ್ ವರದಿ ವರಗೆ ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರು ಎಂದು ಹೇಳಿದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 48 ಗಂಟೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ರಮೇಶ್ ಬಾಬು ತಿಳಿಸಿದ್ದಾರೆ. ತೀವ್ರ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಕರ್ನಾಟಕದಲ್ಲಿ 64.5...

ಪ್ರಮುಖ ಸುದ್ದಿ

ಬೆಂಗಳೂರು : ಕೋಮುವಾದ ಕೊರೋನಾಗಿಂತಲೂ ಅಪಾಯಕಾರಿಯಾದ ವೈರಸ್’ ಎಂದು ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್ ಜಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ‘ಅವಧಿ’ ಹಮ್ಮಿಕೊಂಡಿದ್ದ ಎಸ್ ಜಿ ಸಿದ್ದರಾಮಯ್ಯನವರ ‘ಬಿಜ್ಜಳ...

ಪ್ರಮುಖ ಸುದ್ದಿ

ಬೆಂಗಳೂರು :ಮನುಷ್ಯ ಸಂಕುಲವನ್ನು ಭಯದ ಕೂಪಕ್ಕೆ ತಳ್ಳಿದ್ದ ಕೊರೊನಾ ಮಹಾಮಾರಿಗೆ ಅಂತ್ಯವಾಡುವ ಕಾಲ ಸನಿಹವಾಗಿದೆ. ಈಗಾಗಲೇ ಲಸಿಕೆ ಪ್ರಯೋಗ ಕೊನೆ ಹಂತದಲ್ಲಿದ್ದು ಶೀಘ್ರ ಜನರಿಗೆ ಸಿಗುವ ನಿರೀಕ್ಷೆ ಹೆಚ್ಚಿದೆ. ಈ ಬಗ್ಗೆ ಮಾತನಾಡಿದ...

ಪ್ರಮುಖ ಸುದ್ದಿ

ಕಲಬುರಗಿ: ಬಿಜೆಪಿಯಿಂದ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ದ್ವೇಷದ ರಾಜಕಾರಣ ವ್ಯಾಪಕವಾಗಿದೆ. ಯಾರ ಮೇಲೂ ಮಾಡದೆ ನನ್ನೊಬ್ಬನಿಗೆ ಯಾಕೆ ಮಾಡ್ತಿದಾರೆ. ನನ್ನ ಮಗಳ ನಿಶ್ಚಿತಾರ್ಥದ ದಿನವೇ ನೋಟೀಸ್ ಕೊಡ್ತಾರೆ ಅಂದ್ರೆ ಅವರ ದ್ವೇಷ...

ಪ್ರಮುಖ ಸುದ್ದಿ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಹಾಗೂ ರಾಜಕೀಯ ಬೆಳವಣಿಗೆಗಳ ನಡುವೆ ಸೋಮವಾರ ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ನಗರದ ಖಾಸಗಿ...

ಪ್ರಮುಖ ಸುದ್ದಿ

ಬೆಂಗಳೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಈಗಾಗಲೇ ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಸಿದ್ಧತೆಗಳು ಆರಂಭವಾಗಿವೆ....

ಪ್ರಮುಖ ಸುದ್ದಿ

ಬೆಂಗಳೂರು: ಇಂದು ರೆಬಲ್ ಸ್ಟಾರ್ ದರ್ಶನ್ ಅವರ ಎರಡನೇ ಪುಣ್ಯ ತಿಥಿ. ಈ ವೇಳೆ ಚಿತ್ರರಂಗದ ಗಣ್ಯರು ಅಂಬರೀಶ್ ಅವರನ್ನು ಮತ್ತೊಮ್ಮೆ ನೆನಪಿಸಿಕೊಳ್ಳುತ್ತಿದ್ದಾರೆ. ಅಂಬರೀಶ್ ಹಿರಿಯ ಮಗನ ಹಾಗೆ ಇದ್ದ ಪ್ರೀತಿಯ ದರ್ಶನ್,...

ಪ್ರಮುಖ ಸುದ್ದಿ

ಬೆಂಗಳೂರು :ರಾಜ್ಯದಲ್ಲಿ ಮರಾಠ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳು ರಚನೆಯಾದ ಬೆನ್ನಲ್ಲೇ ‘ಒಕ್ಕಲಿಗೆ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ಘೋಷಿಸುತ್ತಿದ್ದಂತೆ ಎಲ್ಲ ಜಾತಿ ನಾಯಕರು ನಮ್ಮ ಸಮುದಾಯಕ್ಕೂ...

ಪ್ರಮುಖ ಸುದ್ದಿ

ಬೆಂಗಳೂರು: ಕಲಿಯುಗ ಕರ್ಣ, ಮಂಡ್ಯದ ಗಂಡು, ಅಂಬಿ ಎಂದೇ ಅಭಿಮಾನಿಗಳಿಂದ ಕರೆಯಿಸಿಕೊಂಡಿರುವ ಅಭಿಮಾನ ಆರಾಧ್ಯ ದೈವ ಅಂಬರೀಶ್ ಅವರ ಎರಡನೇ ವರ್ಷದ ಪುಣ್ಯತಿಥಿ. ಅವರು ಅಗಲಿ 2 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ...

error: Content is protected !!