Connect with us

Hi, what are you looking for?

ಪ್ರಮುಖ ಸುದ್ದಿ

ಚಿತ್ರದುರ್ಗ : ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖಪ್ಪ, ಕೆ.ಎಂ.ಮುತ್ತುಸ್ವಾಮಿ ಸೇರಿದಂತೆ 12 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಚಿತ್ರದುರ್ಗ, (ಅ.31) : ಜಿಲ್ಲೆಯ ಹಿರಿಯ ಪತ್ರಕರ್ತ,
ಕನ್ನಡಪ್ರಭ ಜಿಲ್ಲಾ ವರದಿಗಾರರಾದ ಚಿಕ್ಕಪ್ಪನಹಳ್ಳಿ
ಷಣ್ಮುಖಪ್ಪ, ಮತ್ತು ಹವ್ಯಾಸಿ ಪತ್ರಕರ್ತ ಕೆ.ಎಂ.ಮುತ್ತುಸ್ವಾಮಿ, ರಂಗಭೂಮಿ ಕಲಾವಿದ ಹೆಚ್.ಟಿ.ಸಿದ್ದನಾಯಕ, ಮರಗಾಲು ಕುಣಿತದ ಜಿ.ಗಿರೀಶ್ ಸೇರಿದಂತೆ 12 ಮಂದಿ ಸಾಧಕರಿಗೆ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಶಿಲ್ಪಕಲೆಯಲ್ಲಿ ಹೊಳಲ್ಕೆರೆಯ ನಾರಾಯಣಗೊಂಡನ ಹಳ್ಳಿಯ ಬಾಬು ಚರಣ್ ಎನ್.ಕೆ., ಸಮಾಜಸೇವೆಯಲ್ಲಿ ಹಿರಿಯೂರಿನ ಆದಿವಾಲ ಗ್ರಾಮದ ಇಬ್ರಾಹಿಂ ಖಲೀಲ್, ಮರಗಾಲು ಕುಣಿತಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಜೋಗಿಮಟ್ಟಿ ರಸ್ತೆಯ ಜಿ.ಗಿರೀಶ್, ರೇಷ್ಮೇ ಕೃಷಿಯಲ್ಲಿ ಸಾಧನೆ ಮಾಡಿದ ಮೊಳಕಾಲ್ಮೂರಿನ ಕೊಂಡ್ಲಹಳ್ಲಿಯ ಹೆಚ್.ಎನ್.ಮಂಜುನಾಥ್, ಕ್ರೀಡೆಯಲ್ಲಿ ಕು.ಸೈಯದಾ ಸುಮೈಯಾ, ನಾಟಕ ಕ್ಷೇತ್ರದಲ್ಲಿ ಹೊಸದುರ್ಗದ ಎಂ.ಶಿವಕುಮಾರ್, ಬಯಲಾಟದಲ್ಲಿ ಚಳ್ಳಕೆರೆ ತಾಲ್ಲೂಕಿನ ತೋಡ್ಲಾರಹಟ್ಟಿಯ ಸಣ್ಣಪಾಪಯ್ಯ ಹಾಗೂ ಸೂಲಗಿತ್ತಿ/ಸೋಬಾನೆ ಪದದಲ್ಲಿ ಮೊಳಕಾಲ್ಮೂರಿನ ಕೋನಸಾಗರದ ಶ್ರೀಮತಿ ಪಾರ್ವತಮ್ಮ ರವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ನಗರದ ಪೋಲಿಸ್ ಕವಾಯತ್ ಮೈದಾನದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀರಾಮುಲು ರವರು ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಪ್ರಧಾನ ಮಾಡಲಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ : ಆರೋಗ್ಯ ಸರಿಯಿಲ್ಲದಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಹಾಕಿಕೊಂಡು ವ್ಯಕ್ತಿಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾಲೇಶ (32) ಆರೋಗ್ಯ ಸರಿಯಿಲ್ಲದ್ದಕ್ಕೆ ನೊಂದು ಸೋಮವಾರ ಮನೆಯಲ್ಲೇ ನೇಣು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಜೋಗಿ ಸಮಾಜ ಕ್ಷೇಮಾಭಿವೃದ್ಧಿ ಸಂಘದಿಂದ ಜೋಗಿಮಟ್ಟಿಯಲ್ಲಿ ಶ್ರೀ ಕಾಲಭೈರವ ಜಯಂತಿ ಆಚರಿಸಲಾಯಿತು. ನಗರದ ಚಂದ್ರವಳ್ಳಿಯ ಹುಲೆಗೊಂದಿ ಸಿದ್ದೇಶ್ವರಸ್ವಾಮಿಯ ಪೂಜೆ ಸಲ್ಲಿಸಿ ಬಳಿಕ ಕನಕದಾಸರು, ಸಂಗೋಳ್ಳಿರಾಯಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಒನಕೆ ಓಬವ್ವ...

ಪ್ರಮುಖ ಸುದ್ದಿ

ಚಿತ್ರದುರ್ಗ : ಗ್ರಾಮ ಪಂಚಾಯಿತಿಗಳ ನೋಟಿಸ್ ಬೋರ್ಡ್‍ನಲ್ಲಿ ಪಿಡಿಒ ಹಾಗೂ ಇಂಜಿನಿಯರ್‍ಗಳ ಭೇಟಿ ದಿನಾಂಕ ಹಾಗೂ ಮಾಹಿತಿಯನ್ನು ಕಡ್ಡಾಯವಾಗಿ ಹಾಕಬೇಕೆಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಾಪಂ...

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್23): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 33 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,335 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಪಂಚಾಯಿತಿ ಅಭಿವೃದ್ದಿ ಅನುದಾನದಡಿ ಹಿರೇಗುಂಟನೂರು ಕ್ಷೇತ್ರದ ನಾಲ್ಕು ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿದರು. ಕುರುಬರಹಳ್ಳಿಯಲ್ಲಿ ಹೈಮಾಸ್ ವಿದ್ಯುತ್ ದೀಪ ಅಳವಡಿಕೆಗೆ ಭೂಮಿಪೂಜೆ, ಹುಲ್ಲೂರು...

ಪ್ರಮುಖ ಸುದ್ದಿ

ಚಿತ್ರದುರ್ಗ :ನ.1 ರಿಂದ ವಿದ್ಯುತ್ ದರ ಏರಿಸಿ ರಾಜ್ಯದ ಜನತೆಗೆ ಶಾಕ್ ನೀಡಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲೆಯಲ್ಲಿ ಕೇವಲ ಐದು ತಿಂಗಳಲ್ಲಿ 24 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 4ನೇ ತ್ರೈಮಾಸಿಕ...

ಪ್ರಮುಖ ಸುದ್ದಿ

ಚಿತ್ರದುರ್ಗ :ಭವ್ಯ ಪರಂಪರೆಯ ಕನ್ನಡವನ್ನು ಬೆಳೆಸುವ ಪ್ರಯತ್ನಕ್ಕೆ ಕೈ ಹಾಕದೇ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕøತಿಕವಾಗಿ ಅಧೋಗತಿಗೆ ನೂಕುತ್ತಿದ್ದೇವೆ ಎಂದು ಬಾಲಕರ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ರೇಣುಕಾ ಪ್ರಕಾಶ್ ಬೇಸರ ವ್ಯಕ್ತಪಡಿಸಿದರು....

ಪ್ರಮುಖ ಸುದ್ದಿ

ಚಿತ್ರದುರ್ಗ :ಯಾವ ರಾಷ್ಟ್ರದಲ್ಲಿ ರಾಷ್ಟ್ರೀಯ ಭಾವೈಕ್ಯತೆ ಇರುತ್ತದೆಯೋ ಅಲ್ಲಿ ಅಭಿವೃದ್ಧಿ ಇರುತ್ತದೆ ಎಂದು ಪ್ರಾಂಶುಪಾಲ ಡಾ.ಪಿ.ಶಿವಲಿಂಗಪ್ಪ ಹೇಳಿದರು. ನಗರದ ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದಲ್ಲಿ...

error: Content is protected !!