Connect with us

Hi, what are you looking for?

ಪ್ರಮುಖ ಸುದ್ದಿ

ಹಿರಿಯ ಪತ್ರಕರ್ತ ರವಿ ಬೆಳಗೆರೆಗೆ ನುಡಿ ನಮನ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜನೆ

ಬೆಂಗಳೂರು : ಬರೆಯುತ್ತಲೇ ಜೀವನದ ಪಯಣಕ್ಕೆ ಪೂರ್ಣ ವಿರಾಮ ಹಾಕಿದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರಿಗೆ ಶನಿವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ವರ್ಚ್ಯುಯಲ್ ಮೀಟ್ ನಲ್ಲಿ ನುಡಿ ನಮನ ಸಲ್ಲಿಸಲಾಯಿತು. ನಾಡಿನ ಹಿರಿಯ ಪತ್ರಕರ್ತರು ಹಾಗೂ ಅವರ ಆತ್ಮೀಯರು ಭಾವಪೂರ್ಣ ಶ್ರಧ್ಧಾಂಜಲಿ ಸಲ್ಲಿಸಿದರು.

ರವಿ ಬೆಳಗೆರೆ ಪುತ್ರಿ ಚೇತನ ಬೆಳಗೆರೆ, ಅಪ್ಪನೊಂದಿಗಿನ ಆಪ್ತತೆ ಮತ್ತು ಬರವಣಿಗೆ ತುಡಿತದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿ, ಕೆಯುಡಬ್ಲ್ಯೂಜೆಗೆ ಅಭಿನಂದನೆ ಸಲ್ಲಿಸಿದರು.

ಐಎಫ್‍ಡ್ಬ್ಲೂಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಮಾತನಾಡಿ, ಹಾಯ್ ಬೆಂಗಳೂರು ಪತ್ರಿಕೆಯನ್ನು ನನ್ನ ಕೈಯಲ್ಲಿ ಬಿಡುಗಡೆ ಮಾಡಿಸಿ, ನಾಡಿನ ಉದ್ದಗಲಕ್ಕೂ ಪತ್ರಿಕೆ ಬೆಳಸಿ, ಯಶಸ್ವಿಯಾಗಿ ನಡೆಸಿದ ಸಾಹಸಿ ರವಿ ಬೆಳಗೆರೆ ಎಂದು ಸ್ಮರಿಸಿದರು.

ವಿಜಯವಾಣಿ ಸಂಪಾದಕರಾದ ಕೆ.ಎನ್.ಚನ್ನೆಗೌಡ ಮಾತನಾಡಿ, ರವಿ ಬೆಳಗೆರೆ ಒಬ್ಬ ಬಹುಮುಖ ಪ್ರತಿಭೆಯಾಗಿದ್ದರು. ಕನ್ನಡ ಪತ್ರಿಕೋದ್ಯಮ ಒರ್ವ ಪತ್ರಿಭಾವಂತ ಪತ್ರಕರ್ತರೋರ್ವರನ್ನು ಕಳೆದುಕೊಂಡಿದೆ ಎಂದರು.

ವಿಜಯ ಕರ್ನಾಟಕ ಸಂಪಾದಕರಾದ ಹರಿಪ್ರಕಾಶ್ ಕೋಣೆಮನೆ ಮಾತನಾಡಿ, ರವಿಬೆಳಗೆರೆ ಜೀವನವೇ ಒಂದು ಸಾಹಸ. ಎಲ್ಲವನ್ನು ದಾಟಿ ಮುಂದೆ ಸಾಗಿದರೆ ಒಳ್ಳೆಯ ದಿನಗಳು ಬರುತ್ತವೆ ಎಂಬುದಕ್ಕೆ ರವಿಬೆಳಗೆರೆ ಬದುಕು ನಿದರ್ಶನ ಎಂದು ಹೇಳಿದರು.
ಅಸಹಾಯಕರಿಗೆ ಉಪಕಾರ, ಭರವಸೆಗಳನ್ನು ಮೂಡಿಸುವ ಮೂಲಕ ಅನೇಕರಿಗೆ ತಾಯಿ ಹೃದಯದಿಂದ ನೆರವಾಗುವ ಸ್ವಭಾವ ಅವರಲ್ಲಿತ್ತು ಎಂದು ಕನ್ನಡ ಪ್ರಭ ಪ್ರಧಾನ ಪುರವಣಿ ಸಂಪಾದಕ ಜೋಗಿ ನೆನೆದರು.

ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಓಂಕಾರ್ ಕಾಕಡೆ ಮಾತನಾಡಿ, ಪತ್ರಿಕೋದ್ಯಮಕ್ಕೆ ಹೊಸದಾಗಿ ಬರುತ್ತಿದ್ದ ಯುವಪೀಳಿಗೆಯನ್ನು ಪ್ರೋತ್ಸಾಹಿಸಿ ಬೆಳೆಸುತ್ತಿದ್ದರು. ಲಂಕೇಶ್ ಅವರಂತೆ ಪತ್ರಿಕೋದ್ಯಮದ ಮುಖ್ಯ ಸಾಲಿನ ನಿಂತರು ಎಂದರು.
ಸಂಘದ ಕಾರ್ಯದರ್ಶಿ ಬಂಗ್ಲೆ ಮಲ್ಲಿಕಾರ್ಜುನ, ಪತ್ರಕರ್ತ ಮತ್ತು ರಾಜ್ಯ ಸಮಿತಿ ಸದಸ್ಯ ಎನ್.ರವಿಕುಮಾರ್, ಆಕಾಶವಾಣಿಯ ನಿರ್ಮಲ ಎಲಿಗಾರ್, ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಉಪಾಧ್ಯಕ್ಷರಾದ ಮತ್ತಿಕೆರೆ ಜಯರಾಂ, ಪುಂಡಲೀಕ ಬಾಳೋಜಿ, ಕಾರ್ಯದರ್ಶಿ ಸಂಜೀವ್ ರಾವ್ ಕುಲಕರ್ಣಿ, ಖಜಾಂಚಿ ಡಾ.ಉಮೇಶ್ವರ ಭಾಗವಹಿಸಿ ರವಿ ಬೆಳಗೆರೆ ಅವರ ಬದುಕಿನ ಹಲವು ಮಗ್ಗುಲುಗಳನ್ನು ಪರಿಚಯಿಸಿದರು.

ರವಿ ಬೆಳಗೆರೆ ಪತ್ರಕರ್ತ ಅಷ್ಟೇ ಅಲ್ಲ, ಅವರೊಳೊಗೊಬ್ಬ ಸಾಹಿತಿ, ಸಂಘಟಕನೂ ಇದ್ದದ್ದು ವಿಶೇಷ.
– ಶಿವಾನಂದ ತಗಡೂರು, ಅಧ್ಯಕ್ಷರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 48 ಗಂಟೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ರಮೇಶ್ ಬಾಬು ತಿಳಿಸಿದ್ದಾರೆ. ತೀವ್ರ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಕರ್ನಾಟಕದಲ್ಲಿ 64.5...

ಪ್ರಮುಖ ಸುದ್ದಿ

ಬೆಂಗಳೂರು : ಕೋಮುವಾದ ಕೊರೋನಾಗಿಂತಲೂ ಅಪಾಯಕಾರಿಯಾದ ವೈರಸ್’ ಎಂದು ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್ ಜಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ‘ಅವಧಿ’ ಹಮ್ಮಿಕೊಂಡಿದ್ದ ಎಸ್ ಜಿ ಸಿದ್ದರಾಮಯ್ಯನವರ ‘ಬಿಜ್ಜಳ...

ಪ್ರಮುಖ ಸುದ್ದಿ

ಬೆಂಗಳೂರು :ಮನುಷ್ಯ ಸಂಕುಲವನ್ನು ಭಯದ ಕೂಪಕ್ಕೆ ತಳ್ಳಿದ್ದ ಕೊರೊನಾ ಮಹಾಮಾರಿಗೆ ಅಂತ್ಯವಾಡುವ ಕಾಲ ಸನಿಹವಾಗಿದೆ. ಈಗಾಗಲೇ ಲಸಿಕೆ ಪ್ರಯೋಗ ಕೊನೆ ಹಂತದಲ್ಲಿದ್ದು ಶೀಘ್ರ ಜನರಿಗೆ ಸಿಗುವ ನಿರೀಕ್ಷೆ ಹೆಚ್ಚಿದೆ. ಈ ಬಗ್ಗೆ ಮಾತನಾಡಿದ...

ಪ್ರಮುಖ ಸುದ್ದಿ

ಕಲಬುರಗಿ: ಬಿಜೆಪಿಯಿಂದ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ದ್ವೇಷದ ರಾಜಕಾರಣ ವ್ಯಾಪಕವಾಗಿದೆ. ಯಾರ ಮೇಲೂ ಮಾಡದೆ ನನ್ನೊಬ್ಬನಿಗೆ ಯಾಕೆ ಮಾಡ್ತಿದಾರೆ. ನನ್ನ ಮಗಳ ನಿಶ್ಚಿತಾರ್ಥದ ದಿನವೇ ನೋಟೀಸ್ ಕೊಡ್ತಾರೆ ಅಂದ್ರೆ ಅವರ ದ್ವೇಷ...

ಪ್ರಮುಖ ಸುದ್ದಿ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಹಾಗೂ ರಾಜಕೀಯ ಬೆಳವಣಿಗೆಗಳ ನಡುವೆ ಸೋಮವಾರ ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ನಗರದ ಖಾಸಗಿ...

ಪ್ರಮುಖ ಸುದ್ದಿ

ಬೆಂಗಳೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಈಗಾಗಲೇ ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಸಿದ್ಧತೆಗಳು ಆರಂಭವಾಗಿವೆ....

ಪ್ರಮುಖ ಸುದ್ದಿ

ಬೆಂಗಳೂರು: ಇಂದು ರೆಬಲ್ ಸ್ಟಾರ್ ದರ್ಶನ್ ಅವರ ಎರಡನೇ ಪುಣ್ಯ ತಿಥಿ. ಈ ವೇಳೆ ಚಿತ್ರರಂಗದ ಗಣ್ಯರು ಅಂಬರೀಶ್ ಅವರನ್ನು ಮತ್ತೊಮ್ಮೆ ನೆನಪಿಸಿಕೊಳ್ಳುತ್ತಿದ್ದಾರೆ. ಅಂಬರೀಶ್ ಹಿರಿಯ ಮಗನ ಹಾಗೆ ಇದ್ದ ಪ್ರೀತಿಯ ದರ್ಶನ್,...

ಪ್ರಮುಖ ಸುದ್ದಿ

ಬೆಂಗಳೂರು :ರಾಜ್ಯದಲ್ಲಿ ಮರಾಠ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳು ರಚನೆಯಾದ ಬೆನ್ನಲ್ಲೇ ‘ಒಕ್ಕಲಿಗೆ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ಘೋಷಿಸುತ್ತಿದ್ದಂತೆ ಎಲ್ಲ ಜಾತಿ ನಾಯಕರು ನಮ್ಮ ಸಮುದಾಯಕ್ಕೂ...

ಪ್ರಮುಖ ಸುದ್ದಿ

ಬೆಂಗಳೂರು: ಕಲಿಯುಗ ಕರ್ಣ, ಮಂಡ್ಯದ ಗಂಡು, ಅಂಬಿ ಎಂದೇ ಅಭಿಮಾನಿಗಳಿಂದ ಕರೆಯಿಸಿಕೊಂಡಿರುವ ಅಭಿಮಾನ ಆರಾಧ್ಯ ದೈವ ಅಂಬರೀಶ್ ಅವರ ಎರಡನೇ ವರ್ಷದ ಪುಣ್ಯತಿಥಿ. ಅವರು ಅಗಲಿ 2 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ...

error: Content is protected !!