Connect with us

Hi, what are you looking for?

ಪ್ರಮುಖ ಸುದ್ದಿ

ಮಾಸಾಂತ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ?

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಂತೆ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರಗತಿಯಲ್ಲಿ ಬೆಳವಣಿಗೆಗಳು ಜರುಗುತ್ತಿದ್ದು, ಮಾಸಾಂತ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಗೆ ಹೈ ಕಮಾಂಡ್ ಸಿದ್ಧತೆ ನಡೆಸುತ್ತಿದೆ ಎನ್ನುತ್ತಿವೆ ದೆಹಲಿ ರಾಜಕೀಯ ವಿಶ್ಲೇಷಕರ ಮಾತುಕತೆ.

ಉಪ ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವನ್ನು ಪ್ರಸ್ತಾಪಿಸಿದ್ದರು. ಸಿಎಂ ಯಡಿಯೂರಪ್ಪ ದೆಹಲಿ ಯಾತ್ರೆ ವಿಫಲವಾಗುತ್ತಿರುವುದು ಮಾಜಿ ಸಿಎಂ ಹಾಗೂ ರಾಜಕೀಯ ವಿಶ್ಲೇಷಕರ ಮಾತಿಗೆ ಪುಷ್ಟಿ ನೀಡುತ್ತಿವೆ.

ಉಪ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬೆನ್ನಲ್ಲೇ ಸಚಿವಕಾಂಕ್ಷಿಗಳ ಪಟ್ಟಿ ಹಿಡಿದು ದೆಹಲಿಗೆ ಹೋದ ಸಿಎಂಗೆ ಭಾರಿ ನಿರಾಸೆಯಾಗಿದೆ. ಎಷ್ಟೇ ಸಾಧನೆ ಮಾಡಿಕೊಂಡು ಹೋದರು ಸಹ ಕೇಂದ್ರ ನಾಯಕರು ಮಾತ್ರ ಮೊದಲಿನಿಂದಲೂ ನಿರ್ಲಕ್ಷ್ಯದ ಭಾವ ತೋರುತ್ತಿದ್ದಾರೆ.

ಸೆಪ್ಟೆಂಬರ್.20ರಂದು ಪ್ರಧಾನಿಯನ್ನು ಕೆಲ ನಿಮಿಷ ಭೇಟಿ ಮಾಡಿ ಹಿಂತಿರುಗಿದ್ದರು. ಆ ವೇಳೆ ಬಿಎಸ್‍ವೈ ಮುಖದಲ್ಲಿ ನಿರಾಸೆ ಭಾವ ಆವರಿಸಿತ್ತು. ಆದರೆ ಭೇಟಿಯಲ್ಲಿ ನಡೆದ ಚರ್ಚೆ ಮಾತ್ರ ಬಹಿರಂಗವಾಗಲಿಲ್ಲ. ಪುನಃ ನ.18 ರಂದು ದೆಹಲಿಗೆ ತೆರಳಿದಾಗ ಪಕ್ಷದ ಅಧ್ಯಕ್ಷರನ್ನು ಮಾತ್ರ ಭೇಟಿ ಮಾಡಿದರು.

ಆದರೆ ಮೋದಿ ಮತ್ತು ಅಮಿತ್ ಷಾ ಅವರ ಭೇಟಿಗೆ ಅವಕಾಶ ಸಿಗಲಿಲ್ಲ. ಈ ವೇಳೆ ಬೆಳಗಾವಿ ಸಾಹುಕಾರ್ ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದರೂ ಸಹ ಸಿಎಂ ಅವರನ್ನು ಭೇಟಿ ಮಾಡಲಿಲ್ಲ. ನನಗೆ ಸಿಎಂ ಬಂದಿದ್ದು ಗೊತ್ತೆ ಇಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಮುಖ್ಯಮಂತ್ರಿ ಬಿಎಸ್‍ವೈ ಅವರ ಬಗ್ಗೆ ಹೈಕಮಾಂಡ್ ನಿರ್ಲಕ್ಷ್ಯ ತೋರಿದ್ದು ಮೇಲ್ನೋಟಕ್ಕೆ ಗೋಚರಿಸುತ್ತಿದ್ದು, ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಇದೇ ಅಡಿಗಲ್ಲಾಗಬಹುದಾ ಎಂಬ ಅನುಮಾನ ರಾಜಕೀಯ ಪಡಸಾಲೆಯಲ್ಲಿ ದಟ್ಟವಾಗುತ್ತಿವೆ.

ಭೇಟಿಗೆಂದು ತೆರಳಿದಾಗ ಅವಕಾಶವನ್ನೇ ನೀಡದಿರುವುದು, ರಾಜ್ಯ ಕೇಳಿದ ಪರಿಹಾರ ಮೊತ್ತ ಬಿಡುಗಡೆಗೆ ಮೀನಾಮೇಷ ಎಣಿಸಿ, ಕಡೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಅಷ್ಟೋಇಷ್ಟೋ ಹಣ ನೀಡಿ ಮುಜುಗರ ಉಂಟು ಮಾಡುವುದು ನಡೆಯುತ್ತಲೇ ಇದೆ.

ಮಾಸಾಂತ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ?

ತಿಂಗಳಾಂತ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬ ಕೂಗು ಶಕ್ತಿ ಪಡೆಯುತ್ತಿದೆ. ಈ ಸೂಕ್ಷ್ಮತೆ ಅರಿತೇ ಸಿಎಂ ರಾಜಕೀಯ ಸಲಹೆಗಾರರಾಗಿದ್ದ ಎಂ.ಬಿ.ಮರಮಕಲ್ ಹಾಗೂ ಸಿಎಂ ಮಾಧ್ಯಮ ಸಲಹೆಗಾರ ಮಹಾದೇವ್ ಪ್ರಕಾಶ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಟ್ಟು ಹೊರ ನಡೆದಿದ್ದಾರೆ ಎನ್ನಲಾಗುತ್ತಿದೆ.

ಸೆಪ್ಟೆಂಬರ್ 20 ರಂದು ಸಿಎಂ ಯಡಿಯೂರಪ್ಪ ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿದಾಗ ನಾಯಕತ್ವ ತ್ಯಜಿಸಲು ಒಂದು ತಿಂಗಳ ಕಾಲಾವಕಾಶ ಕೇಳಿದ್ದರಂತೆ. ಅದರಂತೆ ಅಕ್ಟೋಬರ್ ವೇಳೆಗೆ ರಾಜೀನಾಮೆ ನೀಡಬೇಕಿತ್ತು. ಆದರೆ ಉಪ ಚುನಾವಣೆ ಘೋಷಣೆಯಾದ ಕಾರಣ ಪುನಃ ಒಂದು ತಿಂಗಳು ಮುಂದಕ್ಕೆ ಹಾಕಲಾಯಿತು.

ಈಗ ಎಲ್ಲ ಗಡುವು ಮುಗಿದಿದ್ದು, ಮಾಸಾಂತ್ಯಕ್ಕೆ ನಾಯಕತ್ವ ಬದಲಾವಣೆ ಪಕ್ಕಾ ಎನ್ನಲಾಗುತ್ತಿದೆ. ಈ ಕಾರಣಕ್ಕಾಗಿಯೇ ಸಿಎಂ ತನ್ನ ವರ್ಚಸ್ಸುನ್ನು ಮತ್ತಷ್ಟು ಹೆಚ್ಚಿಸಿ ಕೊಳ್ಳಲು ಮರಾಠ, ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ, ವಿಜಯನಗರ ಜಿಲ್ಲೆ, ಎಸ್ಟಿ ಮೀಸಲು ಹೆಚ್ಚಳ, ಮಠಗಳಿಗೆ ಕೋಟಿಗಟ್ಟಲೆ ದೇಣಿಗೆ ಸೇರಿದಂತೆ ಕೇಳಿದ್ದಕ್ಕೆಲ್ಲ ಅಸ್ತು ಎಂದಿದ್ದಾರೆ ಎನ್ನುತ್ತಿವೆ ಆಪ್ತ ಮೂಲಗಳು.

ಕೇಂದ್ರದದಲ್ಲಿನ ಸಚಿವ ಸಂಪುಟ ಸಭೆ ಮುಂದಿನ ವಾರದಲ್ಲಿ ನಡೆಯಲಿದೆ. ಈ ಸಭೆ ಬಳಿಕ ರಾಜ್ಯದಲ್ಲಿನ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಗಮನ ಹರಿಸುವುದು ಬಹುತೇಕ ಖಚಿತ ಎನ್ನುತ್ತಿದ್ದಾರೆ ರಾಜಕೀಯ ವಿಶ್ಲೇಷಕರು.

ಸಂತೋಷ್ ಜೀಗೆ ಪ್ರಾಧಾನ್ಯತೆ

ಹೈಕಮಾಂಡ್ ಗೆ ಆಪ್ತರಿರುವ ನಾಯಕರ ಪ್ರಕಾರ, ಸದ್ಯದ ಪರಿಸ್ಥಿತಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಅಸಾಧ್ಯ ಎನ್ನಲಾಗುತ್ತಿದೆ. ಮೋದಿ ಸಂಪುಟದ ವಿಸ್ತರಣೆ ಆಗಲಿ, ಮುಂದೆ ನೋಡೋಣ ಎಂದು ರಾಷ್ಟ್ರೀಯ ಅಧ್ಯಕ್ಷರೇ ಹೇಳಿದ್ದಾರೆ. ಬಹುತೇಕ ಸಂಕ್ರಾಂತಿ ಕಳೆದ ನಂತರವೇ ವಿಸ್ತರಣೆ ಸಾಧ್ಯತೆ ಜಾಸ್ತಿಯಿದೆ. ಆಗಲೂ ಬಿಬಿಎಂಪಿ ಚುನಾವಣೆ, ಗ್ರಾಮ ಪಂಚಾಯತಿ ಚುನಾವಣೆಗಳು ಬಂದರೆ ಮತ್ತೆ ಬ್ರೇಕ್ ಬೀಳುವ ಸಾಧ್ಯತೆಗಳೇ ಹೆಚ್ಚು.

ಈ ಎಲ್ಲದರ ನಡುವೆ ಕರ್ನಾಟಕದ ವಿಚಾರದಲ್ಲಿ ಅಮಿತ್ ಶಾ ಮತ್ತು ನಡ್ಡಾ ಕರ್ನಾಟಕದ ಬಗ್ಗೆ ಯಾವುದೇ ನಿರ್ಣಯ ತೆಗೆದು ಕೊಳ್ಳದಿದ್ದರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜೀ ಮಾತಿಗೆ ಹೆಚ್ಚು ಪ್ರಾಧ್ಯಾನತೆ ನೀಡುತ್ತಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಮುಖ್ಯ ಕಾರಣರಾಗಿರುವ ಬೆಳಗಾವಿ ಸಾಹುಕಾರ ಸಚಿವ ರಮೇಶ್ ಜಾರಕಿಹೊಳಿ ಸಂತೋಷ್ ಜೀ ಜತೆ ಸುರ್ಧಿಘ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಒಂದು ವೇಳೆ ಹೈ ಕಮಾಂಡ್ ಚಿಂತನೆಯಂತೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೊಂಡರೆ ರಾಜ್ಯ ರಾಜಕೀಯದಲ್ಲಿ ಅಸಮಾಧಾನ ಸ್ಟೋಟಗೊಳ್ಳುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 48 ಗಂಟೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ರಮೇಶ್ ಬಾಬು ತಿಳಿಸಿದ್ದಾರೆ. ತೀವ್ರ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಕರ್ನಾಟಕದಲ್ಲಿ 64.5...

ಪ್ರಮುಖ ಸುದ್ದಿ

ಬೆಂಗಳೂರು : ಕೋಮುವಾದ ಕೊರೋನಾಗಿಂತಲೂ ಅಪಾಯಕಾರಿಯಾದ ವೈರಸ್’ ಎಂದು ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್ ಜಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ‘ಅವಧಿ’ ಹಮ್ಮಿಕೊಂಡಿದ್ದ ಎಸ್ ಜಿ ಸಿದ್ದರಾಮಯ್ಯನವರ ‘ಬಿಜ್ಜಳ...

ಪ್ರಮುಖ ಸುದ್ದಿ

ಬೆಂಗಳೂರು :ಮನುಷ್ಯ ಸಂಕುಲವನ್ನು ಭಯದ ಕೂಪಕ್ಕೆ ತಳ್ಳಿದ್ದ ಕೊರೊನಾ ಮಹಾಮಾರಿಗೆ ಅಂತ್ಯವಾಡುವ ಕಾಲ ಸನಿಹವಾಗಿದೆ. ಈಗಾಗಲೇ ಲಸಿಕೆ ಪ್ರಯೋಗ ಕೊನೆ ಹಂತದಲ್ಲಿದ್ದು ಶೀಘ್ರ ಜನರಿಗೆ ಸಿಗುವ ನಿರೀಕ್ಷೆ ಹೆಚ್ಚಿದೆ. ಈ ಬಗ್ಗೆ ಮಾತನಾಡಿದ...

ಪ್ರಮುಖ ಸುದ್ದಿ

ಕಲಬುರಗಿ: ಬಿಜೆಪಿಯಿಂದ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ದ್ವೇಷದ ರಾಜಕಾರಣ ವ್ಯಾಪಕವಾಗಿದೆ. ಯಾರ ಮೇಲೂ ಮಾಡದೆ ನನ್ನೊಬ್ಬನಿಗೆ ಯಾಕೆ ಮಾಡ್ತಿದಾರೆ. ನನ್ನ ಮಗಳ ನಿಶ್ಚಿತಾರ್ಥದ ದಿನವೇ ನೋಟೀಸ್ ಕೊಡ್ತಾರೆ ಅಂದ್ರೆ ಅವರ ದ್ವೇಷ...

ಪ್ರಮುಖ ಸುದ್ದಿ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಹಾಗೂ ರಾಜಕೀಯ ಬೆಳವಣಿಗೆಗಳ ನಡುವೆ ಸೋಮವಾರ ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ನಗರದ ಖಾಸಗಿ...

ಪ್ರಮುಖ ಸುದ್ದಿ

ಬೆಂಗಳೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಈಗಾಗಲೇ ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಸಿದ್ಧತೆಗಳು ಆರಂಭವಾಗಿವೆ....

ಪ್ರಮುಖ ಸುದ್ದಿ

ಬೆಂಗಳೂರು: ಇಂದು ರೆಬಲ್ ಸ್ಟಾರ್ ದರ್ಶನ್ ಅವರ ಎರಡನೇ ಪುಣ್ಯ ತಿಥಿ. ಈ ವೇಳೆ ಚಿತ್ರರಂಗದ ಗಣ್ಯರು ಅಂಬರೀಶ್ ಅವರನ್ನು ಮತ್ತೊಮ್ಮೆ ನೆನಪಿಸಿಕೊಳ್ಳುತ್ತಿದ್ದಾರೆ. ಅಂಬರೀಶ್ ಹಿರಿಯ ಮಗನ ಹಾಗೆ ಇದ್ದ ಪ್ರೀತಿಯ ದರ್ಶನ್,...

ಪ್ರಮುಖ ಸುದ್ದಿ

ಬೆಂಗಳೂರು :ರಾಜ್ಯದಲ್ಲಿ ಮರಾಠ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳು ರಚನೆಯಾದ ಬೆನ್ನಲ್ಲೇ ‘ಒಕ್ಕಲಿಗೆ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ಘೋಷಿಸುತ್ತಿದ್ದಂತೆ ಎಲ್ಲ ಜಾತಿ ನಾಯಕರು ನಮ್ಮ ಸಮುದಾಯಕ್ಕೂ...

ಪ್ರಮುಖ ಸುದ್ದಿ

ಬೆಂಗಳೂರು: ಕಲಿಯುಗ ಕರ್ಣ, ಮಂಡ್ಯದ ಗಂಡು, ಅಂಬಿ ಎಂದೇ ಅಭಿಮಾನಿಗಳಿಂದ ಕರೆಯಿಸಿಕೊಂಡಿರುವ ಅಭಿಮಾನ ಆರಾಧ್ಯ ದೈವ ಅಂಬರೀಶ್ ಅವರ ಎರಡನೇ ವರ್ಷದ ಪುಣ್ಯತಿಥಿ. ಅವರು ಅಗಲಿ 2 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ...

error: Content is protected !!