Connect with us

Hi, what are you looking for?

ಪ್ರಮುಖ ಸುದ್ದಿ

ಶೀಘ್ರ 973 ಮನೆಗಳನ್ನು ಹಸ್ತಾಂತರಿಸಿ: ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಸೂಚನೆ

ಚಿತ್ರದುರ್ಗ : ಅಲೆಮಾರಿ, ಯಾದವ ಜನಾಂಗದ ಬಡವರಿಗೆ ಮಂಜೂರಾಗಿರುವ 973 ಮನೆಗಳನ್ನು ನಿಗಧಿತ ಸಮಯದಲ್ಲಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ನೀಡಬೇಕು ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪಿಡಿಒಗಳಿಗೆ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ವಸತಿಗೆ ಸಂಬಂಧಿಸಿದಂತೆ ಶನಿವಾರ ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಸವ ವಸತಿ ಯೋಜನೆಯಡಿ ಒಂದು ಗ್ರಾಮ ಪಂಚಾಯಿತಿಗೆ 20 ಮನೆಗಳು ಮಂಜೂರಾಗಿದ್ದು, ತುರ್ತಾಗಿ ಫಲಾನುಭವಿಗಳಿಗೆ ಮನೆಗಳು ಸಿಗಬೇಕು.

ಅಪ್ಪಿತಪ್ಪಿ ಒಂದು ಮನೆಯೂ ಲ್ಯಾಪ್ಸ್ ಆಗಬಾರದು. ಬೇಕಾದರೆ ಸರ್ಕಾರದಿಂದ ಇನ್ನು ಹೆಚ್ಚಿನ ಅನುದಾನ ಮಂಜೂರು ಮಾಡಿಸುತ್ತೇನೆ, ತಾಂತ್ರಿಕ ಸಮಸ್ಯೆಗಳೇನಾದರೂ ಇದ್ದರೆ ತಡಮಾಡದೆ ನನ್ನ ಗಮನಕ್ಕೆ ತನ್ನಿ ವಸತಿಯಿಂದ ಮಾತ್ರ ಯಾರು ವಂಚಿತರಾಗಬಾರದು ಪಿ.ಡಿ.ಓ.ಗಳು ಚುರುಕಾಗಿ ಕೆಲಸ ಮಾಡಿ ಸರ್ಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸಿ ಎಂದು ತಿಳಿಸಿದರು.

ಅರ್ಜಿ ಸಲ್ಲಿಸಿದವರಿಗೆಲ್ಲಾ ಮನೆಗಳನ್ನು ನೀಡಿದ್ದೇವೆ. ಅಕಸ್ಮಾತ್ ಯಾರದಾದರೂ ಬಿಟ್ಟುಹೋಗಿದ್ದರೆ ಆತಂಕ ಪಡುವುದು ಬೇಡ. ಕೆಲವೊಮ್ಮೆ ಗುಂಪುಗಾರಿಕೆ ಮೇಲೆ ಕೆಲವರು ರಾಜಕೀಯ ಮಾಡಿದಾಗ ಏರುಪೇರಾಗಬಹುದು. ಕೈಬಿಟ್ಟು ಹೋಗಿರುವವರನ್ನು ಗುರುತಿಸಿ ಮನೆಗಳನ್ನು ನೀಡಿ. ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾದರೆ ನೀತಿ ಸಂಹಿತೆ ಅಡ್ಡಿಯಾಗುತ್ತದೆ. ಅಷ್ಟರೊಳಗೆ ಮನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿ ಇಲ್ಲವಾದರೆ ಇನ್ನು ಎರಡು ಮೂರು ತಿಂಗಳು ತಡವಾಗುತ್ತದೆ ಎಂದು ಪಿ.ಡಿ.ಓ.ಗಳನ್ನು ಎಚ್ಚರಿಸಿದರು.

ತಾಪಂ ಇಒ ಎಚ್.ಕೃಷ್ಣನಾಯ್ಕ, ತಹಸೀಲ್ದಾರ್ ಜೆ.ಸಿ.ವೆಂಕಟೇಶಯ್ಯ, ತಾಪಂ ಅಧ್ಯಕ್ಷ ಲಿಂಗರಾಜು, ಜಿಪಂ ಇಂಜಿನಿಯರ್ ಭಾರತಿ, ಸದಸ್ಯರಾದ ಎನ್.ಮಂಜುನಾಥ್, ವೀಣಾ, ಕೆ.ಎನ್.ರಾಜಣ್ಣ, ಲಕ್ಷ್ಮಿಸಾಗರದ ರಾಜಣ್ಣ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್24):ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 64 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,399 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಚಿತ್ರದುರ್ಗ, (ನ.24) : ಕೆಲ ದಿನಗಳಿಂದ ತಾಲೂಕಿನ ಸಿರಿಗೆರೆಯಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಮಂಗಳವಾರ ಬೋನಿಗೆ ಬಿದ್ದಿದೆ. ಸಿರಿಗೆರೆ ಸಮೀಪದ ಜಮೀನಿನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಜಾನುವಾರುಗಳ ಮೇಲೆ ದಾಳಿ ನಡೆಸಿತ್ತು. ಇದರಿಂದ ಗ್ರಾಮಸ್ಥರು...

ಪ್ರಮುಖ ಸುದ್ದಿ

ಚಳ್ಳಕೆರೆ :ಮಾನಸಿಕ ಅಸ್ವಸ್ಥನನ್ನು ರಕ್ಷಿಸಿದ ಚಳ್ಳಕೆರೆ ಪೊಲೀಸರು ನಿರಾಶ್ರಿತರ ಕೇಂದ್ರಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ನಗರದ ನೆಹರು ವೃತ್ತದ ಸುತ್ತಮುತ್ತಲಿನ ಪ್ರದೇಶದಲ್ಲಿ ತಿರುಗಾಡುತ್ತಿದ್ದ ಜನತಾ ಕಾಲೋನಿಯ ಲೇಟ್ ಹನುಮಂತಪ್ಪ ಅವರ ಮಗನಾದ ಮಾನಸಿಕ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ನವೆಂಬರ್-24,2020 ಸೂರ್ಯೋದಯ: 06:26, ಸೂರ್ಯಸ್ತ: 17:46 ಶಾರ್ವರಿ ನಾಮ ಸಂವತ್ಸರ ಕಾರ್ತಿಕ ಮಾಸ ದಕ್ಷಿಣಾಯಣ ತಿಥಿ: ದಶಮೀ – 26:41+ ವರೆಗೆ ನಕ್ಷತ್ರ: ಪೂರ್ವಾ ಭಾದ್ರ – 15:32 ವರೆಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಆರೋಗ್ಯ ಸರಿಯಿಲ್ಲದಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಹಾಕಿಕೊಂಡು ವ್ಯಕ್ತಿಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾಲೇಶ (32) ಆರೋಗ್ಯ ಸರಿಯಿಲ್ಲದ್ದಕ್ಕೆ ನೊಂದು ಸೋಮವಾರ ಮನೆಯಲ್ಲೇ ನೇಣು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಜೋಗಿ ಸಮಾಜ ಕ್ಷೇಮಾಭಿವೃದ್ಧಿ ಸಂಘದಿಂದ ಜೋಗಿಮಟ್ಟಿಯಲ್ಲಿ ಶ್ರೀ ಕಾಲಭೈರವ ಜಯಂತಿ ಆಚರಿಸಲಾಯಿತು. ನಗರದ ಚಂದ್ರವಳ್ಳಿಯ ಹುಲೆಗೊಂದಿ ಸಿದ್ದೇಶ್ವರಸ್ವಾಮಿಯ ಪೂಜೆ ಸಲ್ಲಿಸಿ ಬಳಿಕ ಕನಕದಾಸರು, ಸಂಗೋಳ್ಳಿರಾಯಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಒನಕೆ ಓಬವ್ವ...

ಪ್ರಮುಖ ಸುದ್ದಿ

ಚಿತ್ರದುರ್ಗ : ಗ್ರಾಮ ಪಂಚಾಯಿತಿಗಳ ನೋಟಿಸ್ ಬೋರ್ಡ್‍ನಲ್ಲಿ ಪಿಡಿಒ ಹಾಗೂ ಇಂಜಿನಿಯರ್‍ಗಳ ಭೇಟಿ ದಿನಾಂಕ ಹಾಗೂ ಮಾಹಿತಿಯನ್ನು ಕಡ್ಡಾಯವಾಗಿ ಹಾಕಬೇಕೆಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಾಪಂ...

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್23): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 33 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,335 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಪಂಚಾಯಿತಿ ಅಭಿವೃದ್ದಿ ಅನುದಾನದಡಿ ಹಿರೇಗುಂಟನೂರು ಕ್ಷೇತ್ರದ ನಾಲ್ಕು ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿದರು. ಕುರುಬರಹಳ್ಳಿಯಲ್ಲಿ ಹೈಮಾಸ್ ವಿದ್ಯುತ್ ದೀಪ ಅಳವಡಿಕೆಗೆ ಭೂಮಿಪೂಜೆ, ಹುಲ್ಲೂರು...

error: Content is protected !!