Connect with us

Hi, what are you looking for?

ಪ್ರಮುಖ ಸುದ್ದಿ

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ : ಚಿತ್ರದುರ್ಗ ಜಿಲ್ಲೆಯ 32 ಮತಗಟ್ಟೆಗಳಲ್ಲಿ ಮತದಾನ, ಸಂಪೂರ್ಣ ಮಾಹಿತಿ

ಚಿತ್ರದುರ್ಗ, (ಅಕ್ಟೋಬರ್27) : ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಇದೇ ಅಕ್ಟೋಬರ್ 28ರಂದು ಬೆಳಿಗ್ಗೆ 8 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಸುಗಮ ಮತದಾನಕ್ಕಾಗಿ 32 ಮತಗಟ್ಟೆಗಳನ್ನು ಜಿಲ್ಲೆಯಾದ್ಯಂತ ಸ್ಥಾಪಿಸಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ ಕೋವಿಡ್-19 ಮಾರ್ಗಸೂಚಿಯಂತೆ ಮುನ್ನಚ್ಚರಿಕೆ ವಹಿಸಲಾಗಿದ್ದು, ಜೊತೆಗೆ ಬಂದೋಬಸ್ತ್  ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ.

ಜಿಲ್ಲೆಯ ಆರು ತಾಲ್ಲೂಕು ಸೇರದಂತೆ ಹೋಬಳಿ ಕೇಂದ್ರದಲ್ಲಿ ಮತಗಟ್ಟೆ ಗುರುತಿಸಲಾಗಿದೆ. ಮತಗಟ್ಟೆಗಳಿಗೆ ಅಗತ್ಯ ಮೂಲಸೌಲಭ್ಯವನ್ನು ಕಲ್ಪಿಸಲಾಗಿದೆ.

ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೇರಿದಂತೆ 196 ಜನರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಜಿಲ್ಲೆಯಲ್ಲಿ 32 ಮತಗಟ್ಟೆ:
ಮೊಳಕಾಲ್ಮುರು 03,
ಚಳ್ಳಕೆರೆ 06,
ಚಿತ್ರದುರ್ಗ 08,
ಹಿರಿಯೂರು 06,
ಹೊಸದುರ್ಗ 05 ಹಾಗೂ
ಹೊಳಲ್ಕೆರೆ 04 ಮತಗಟ್ಟೆಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 32 ಮತಗಟ್ಟೆಗಳನ್ನು ತೆರೆಯಲಾಗಿದೆ.

ಮೊಳಕಾಲ್ಮುರು ತಾಲ್ಲೂಕಿನಲ್ಲಿ ಕಸಬಾ ಹೋಬಳಿಗೆ ಸಂಬಂಧಿಸಿದಂತೆ ಮೊಳಕಾಲ್ಮುರಿನ ತಹಶೀಲ್ದಾರ್ ಕಚೇರಿಯ ಸಭಾಂಗಣ ಹಾಗೂ ಸರ್ವೇ ಇಲಾಖೆಯ ಕಚೇರಿಯಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ದೇವಸಮುದ್ರ ಹೋಬಳಿಗೆ ಸಂಬಂಧಿಸಿದಂತೆ ರಾಂಪುರದ ಗದ್ದೆ ವೀರಭದ್ರಪ್ಪ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನಲ್ಲಿ 3 ಮತಗಟ್ಟೆಗಳನ್ನು ತೆರೆಯಲಾಗಿದೆ.

ಚಳ್ಳಕೆರೆ ತಾಲ್ಲೂಕಿನಲ್ಲಿ ಕಸಬಾ ಹೋಬಳಿಗೆ ಸಂಬಂಧಿಸಿದಂತೆ ಚಳ್ಳಕೆರೆಯ ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆ ರೂಂ ನಂ-1 ಹಾಗೂ ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆ ರೂಂ ನಂ-2, ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆ ರೂಂ ನಂ-3 ರಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು.

ಪರಶುರಾಂಪುರ ಹೋಬಳಿಗೆ ಸಂಬಂಸಿದಂತೆ ಪರಶುರಾಂಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

ನಾಯಕನಹಟ್ಟಿ ಹೋಬಳಿಗೆ ಸಂಬಂಧಿಸಿದಂತೆ ನಾಯಕನಹಟ್ಟಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

ತಳಕು ಹೋಬಳಿಗೆ ಸಂಬಂಧಿಸಿದಂತೆ ತಳುಕಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

ಚಳ್ಳಕೆರೆ ತಾಲ್ಲೂಕಿನಲ್ಲಿ ಒಟ್ಟು 06 ಮತಗಟ್ಟೆಗಳನ್ನು ತೆರೆಯಲಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ ಕಸಬಾ ಹೋಬಳಿಗೆ ಸಂಬಂಧಿಸಿದಂತೆ ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ರೂಂ-1 ಹಾಗೂ ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ರೂಂ-2, ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ರೂಂ-3, ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ರೂಂ-4, ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ರೂಂ-5ರಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಹಿರೇಗುಂಟನೂರು ಹೋಬಳಿಗೆ ಸಂಬಂಧಿಸಿದಂತೆ ಹಿರೇಗುಂಟನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

ಭರಮಸಾಗರ  ಹೋಬಳಿಗೆ ಸಂಬಂಧಿಸಿದಂತೆ ಭರಮಸಾಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

ತುರುವನೂರು ಹೋಬಳಿಗೆ ಸಂಬಂಧಿಸಿದಂತೆ ತುರುವನೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮತಗಟ್ಟೆ ಸ್ಥಾಪಿಸಲಾಗಿದ್ದು,

ಚಿತ್ರದುರ್ಗ ತಾಲ್ಲೂಕಿನಲ್ಲಿ ಒಟ್ಟು 08 ಮತಗಟ್ಟೆಗಳನ್ನು ತೆರೆಯಲಾಗಿದೆ.

ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಗೆ ಸಂಬಂಧಿಸಿದಂತೆ ಧರ್ಮಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

ಕಸಬಾ ಹೋಬಳಿಗೆ ಸಂಬಂಧಿಸಿದಂತೆ ಹಿರಿಯೂರಿನ ಮುಖ್ಯರಸ್ತೆಯ ಆಸ್ಪತ್ರೆ ಸಮೀಪದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ರೂಂ. 1,

ಹಿರಿಯೂರಿನ ಮುಖ್ಯರಸ್ತೆಯ ಆಸ್ಪತ್ರೆ ಸಮೀಪದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ರೂಂ. 2,

ಹಿರಿಯೂರಿನ ಮುಖ್ಯರಸ್ತೆಯ ಆಸ್ಪತ್ರೆ ಸಮೀಪದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ರೂಂ. 3ರಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಐಮಂಗಲ ಹೋಬಳಿಗೆ ಸಂಬಂಧಿಸಿದಂತೆ ಐಮಂಗಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

ಜೆ.ಜಿ.ಹಳ್ಳಿ ಹೋಬಳಿಗೆ ಸಂಬಂಧಿಸಿದಂತೆ ಜೆ.ಜಿ.ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ.

ಹಿರಿಯೂರು ತಾಲ್ಲೂಕಿನಲ್ಲಿ ಒಟ್ಟು 06 ಮತಗಟ್ಟೆಗಳನ್ನು ತೆರೆಯಲಾಗಿದೆ.

ಹೊಸದುರ್ಗ ತಾಲ್ಲೂಕಿನ ಕಸಬಾ ಹೋಬಳಿಗೆ ಸಂಬಂಧಿಸಿದಂತೆ ಹೊಸದುರ್ಗ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲೆ ವಿಭಾಗ ಹಳೆ ಕಟ್ಟಡ) ರೂಂ.1,

ಹೊಸದುರ್ಗ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲೆ ವಿಭಾಗ ಹಳೆ ಕಟ್ಟಡ) ರೂಂ.2ರಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಮಾಡದಕೆರೆ ಹೋಬಳಿಗೆ ಸಂಬಂಧಿಸಿದಂತೆ ಮಾಡದಕರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

ಶ್ರೀರಾಂಪುರ ಹೋಬಳಿಗೆ ಸಂಬಂಧಿಸಿದಂತೆ ಶ್ರೀರಾಂಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

ಮತ್ತೋಡು ಹೋಬಳಿಗೆ ಸಂಬಂಧಿಸಿದಂತೆ ಮತ್ತೋಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

ಹೊಸದುರ್ಗ ತಾಲ್ಲೂಕಿನಲ್ಲಿ ಒಟ್ಟು 05 ಮತಗಟ್ಟೆಗಳನ್ನು ತೆರೆಯಲಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಕಸಬಾ ಹೋಬಳಿಗೆ ಸಂಬಂಸಿದಂತೆ ಹೊಳಲ್ಕೆರೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಉರ್ದು ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

ಬಿ.ದುರ್ಗ ಹೋಬಳಿಗೆ ಸಂಬಂಧಿಸಿದಂತೆ ಬಿ.ದುರ್ಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ರಾಮಗಿರಿ ಹೋಬಳಿಗೆ ಸಂಬಂಧಿಸಿದಂತೆ ರಾಮಗಿರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

ತಾಳ್ಯ ಹೋಬಳಿಗೆ ಸಂಬಂಧಿಸಿದಂತೆ ತಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

ಹೊಳಲ್ಕೆರೆ ತಾಲ್ಲೂಕಿನಲ್ಲಿ 04 ಮತಗಟ್ಟೆಗಳನ್ನು ತೆರೆಯಲಾಗಿದೆ.

ಜಿಲ್ಲೆಯಲ್ಲಿ 21,024 ಮತದಾರರು: ಜಿಲ್ಲೆಯ ಆರು ತಾಲ್ಲೂಕುಗಳು ಆಗ್ನೇಯ ಪದವೀಧರರ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು 21,024 ಮತದಾರರು  ಇದ್ದಾರೆ. ಇದರಲ್ಲಿ 13,681 ಪುರುಷ ಹಾಗೂ 7342 ಮಹಿಳಾ ಹಾಗೂ ಇತರೆ 1 ಮತದಾರರು ಸೇರಿ 21,024 ಮತದಾರರಿದ್ದಾರೆ.

ತಾಲ್ಲೂಕುವಾರು ಮತದಾರರ ವಿವರ ಇಂತಿದೆ. ಮೊಳಕಾಲ್ಮೂರು ತಾಲ್ಲೂಕಿನಲ್ಲಿ 1,451 ಮತದಾರರಿದ್ದಾರೆ. ಚಳ್ಳಕೆರೆ ತಾಲ್ಲೂಕಿನಲ್ಲಿ 4,313  ಮತದಾರರು,  ಚಿತ್ರದುರ್ಗ ತಾಲ್ಲೂಕಿನಲ್ಲಿ 6,275 ಮತದಾರರು, ಹಿರಿಯೂರು ತಾಲ್ಲೂಕಿನಲ್ಲಿ 4,487 ಮತದಾರರು, ಹೊಸದುರ್ಗ ತಾಲ್ಲೂಕಿನಲ್ಲಿ 2,472 ಮತದಾರರು ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 2,023 ಮತದಾರರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 21,024 ಮತದಾರರಿದ್ದಾರೆ.

ಕೋವಿಡ್ ಮಾರ್ಗಸೂಚಿ ಪಾಲನೆಗೆ ಕ್ರಮ: ಮತದಾನದ ಸಮಯದಲ್ಲಿ ಪ್ರತಿ ಬೂತ್‍ಗೆ ಮೆಡಿಕಲ್ ಕಿಟ್ ಒದಗಿಸಲಾಗಿದೆ. ಪಲ್ಸ್ ಆಕ್ಸಿಮೀಟರ್, ಥರ್ಮಾಮೀಟರ್, ಸ್ಯಾನಿಟೈಸರ್ ಹೊಂದಿರುವ ಆರೋಗ್ಯ ಸಿಬ್ಬಂದಿಯನ್ನು ಪ್ರತಿ ಮತಗಗಟ್ಟೆಗೆ ನೇಮಕ ಮಾಡಲಾಗಿದೆ.

ವೆಬ್‍ಸೈಟ್‍ನಲ್ಲಿ ಮತಗಟ್ಟೆ ವಿವರ: ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಅಕ್ಟೋಬರ್ 28 ರಂದು ಮತದಾನ ನಡೆಯುತ್ತಿದ್ದು, ಯಾವ ಮತಗಟ್ಟೆಯಲ್ಲಿ ಮತದಾನ ಮಾಡಬೇಕೆಂಬ ವಿವರವನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದ್ದು ವಿವರವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಕವಿತಾ.ಎಸ್ ಮನ್ನಿಕೇರಿ ತಿಳಿಸಿದ್ದಾರೆ.

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‍ಸೈಟ್ ಹೋಂ ಪೇಜ್‍ನಲ್ಲಿ ಸರ್ಚ್‍ನಲ್ಲಿ ಪದವೀಧರರ ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಎಂಬಲ್ಲಿ ಹೆಸರು ಟೈಪ್ ಮಾಡಿ ಹುಡುಕಬಹುದು ಅಥವಾ http;//ceokarnataka.kar.nic.in/searchHome TG.aspx  ಎಂಬಲ್ಲಿ ಈ ಲಿಂಕ್‍ನಲ್ಲಿ ತಾವು ಮತದಾನ ಮಾಡಲಿರುವ ಮತಗಟ್ಟೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಮತ ಚಲಾಯಿಸಲು ಪರ್ಯಾಯ ದಾಖಲೆ: ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅಕ್ಟೋಬರ್28 ರಂದು ಮತದಾನ ನಡೆಯಲಿದ್ದು, ಚುನಾವಣಾ ಗುರುತಿನ ಚೀಟಿ ಇಲ್ಲದೆ ಇದ್ದವರು ಪರ್ಯಾಯ ದಾಖಲೆ ಬಳಸಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಮತದಾರರು ಮತ ಚಲಾಯಿಸಲು ಮತಗಟ್ಟೆಗಳಿಗೆ ಹೋದ ಸಂದರ್ಭದಲ್ಲಿ ಅವರು ಹೊಂದಿರುವ ಮತದಾರರ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕು. ಒಂದು ವೇಳೆ ಅದನ್ನು ಹಾಜರುಪಡಿಸಲು ಸಾಧ್ಯವಿಲ್ಲದಿದ್ದಲ್ಲಿ ಈ ಕೆಳಕಂಡ ಯಾವುದಾದರೂ ಒಂದು ಪರ್ಯಾಯ ದಾಖಲಾತಿಯನ್ನು ಮತದಾರರನ್ನು ಗುರುತಿಸುವುದಕ್ಕಾಗಿ ಹಾಜರುಪಡಿಸಬಹುದಾಗಿದೆ.

ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್, ಭಾರತೀಯ ಪಾಸ್‍ಫೋರ್ಟ್, ರಾಜ್ಯ, ಕೇಂದ್ರ ಸರ್ಕಾರ, ಸಾರ್ವಜನಿಕ ವಲಯ, ಸ್ಥಳೀಯ ಸಂಸ್ಥೆಗಳು ಅಥವಾ ಇತರೆ ಖಾಸಗಿ ಕೈಗಾರಿಕೆ ಸಂಸ್ಥೆಗಳು ತಮ್ಮ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ, ಸಂಸದರು, ವಿಧಾನಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳು, ಶಿಕ್ಷಕರು, ಪದವೀಧರರ ಕ್ಷೇತ್ರ ವ್ಯಾಪ್ತಿಯಲ್ಲಿ ಶೈಕ್ಷಣಿಕ ಸಂಸ್ಥೆಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ, ವಿಶ್ವವಿದ್ಯಾಲಯದಿಂದ ನೀಡಿರುವ ಪದವಿ, ಡಿಪ್ಲೊಮಾದ ಮೂಲಕ ಪ್ರಮಾಣಪತ್ರಗಳು, ಸಕ್ಷಮ ಪ್ರಾಧಿಕಾರದಿಂದ ನೀಡಲಾಗಿರುವ ಅಂಗವಿಕಲ ದೃಢೀಕರಣ ಪತ್ರದ ಮೂಲ ಪ್ರತಿಗಳನ್ನು ಮತದಾನದ ವೇಳೆ ಪರ್ಯಾಯ ದಾಖಲೆಗಳನ್ನಾಗಿ ಬಳಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕೇಂದ್ರಗಳು: ಜಿಲ್ಲೆಯ ಆಯಾ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.  ಚಿತ್ರದುರ್ಗ ತಾಲ್ಲೂಕು ಮಾತ್ರ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕೇಂದ್ರ ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಮುಖ್ಯ ಡಿಮಸ್ಟರಿಂಗ್ ಕೇಂದ್ರವನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗಿದೆ.

ಅರ್ಹ ಮತದಾರಿಗೆ ಮತಚಲಾಯಿಸಲು ವಿಶೇಷ ಸಾಂದರ್ಭಿಕ ರಜೆ : ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ-2020ರ ಸಂಬಂಧ ಅಕ್ಟೋಬರ್ 28 ರಂದು ನಡೆಯುವ ಮತದಾನದಲ್ಲಿ ಮತ ಚಲಾಯಿಸಲು ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯೋಗಿಕ ಸಂಸ್ಥೆಗಳಲ್ಲಿ ಇತರೆ
Establishment ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲು ಮತದಾರರಿಗೆ ಅಕ್ಟೋಬರ್ 28 ರ ಬುಧವಾರದಂದು ವಿಶೇಷ ಸಾಂದರ್ಭಿಕ ರಜೆ ನೀಡಿ ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ನವೆಂಬರ್-24,2020 ಸೂರ್ಯೋದಯ: 06:26, ಸೂರ್ಯಸ್ತ: 17:46 ಶಾರ್ವರಿ ನಾಮ ಸಂವತ್ಸರ ಕಾರ್ತಿಕ ಮಾಸ ದಕ್ಷಿಣಾಯಣ ತಿಥಿ: ದಶಮೀ – 26:41+ ವರೆಗೆ ನಕ್ಷತ್ರ: ಪೂರ್ವಾ ಭಾದ್ರ – 15:32 ವರೆಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಆರೋಗ್ಯ ಸರಿಯಿಲ್ಲದಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಹಾಕಿಕೊಂಡು ವ್ಯಕ್ತಿಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾಲೇಶ (32) ಆರೋಗ್ಯ ಸರಿಯಿಲ್ಲದ್ದಕ್ಕೆ ನೊಂದು ಸೋಮವಾರ ಮನೆಯಲ್ಲೇ ನೇಣು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಜೋಗಿ ಸಮಾಜ ಕ್ಷೇಮಾಭಿವೃದ್ಧಿ ಸಂಘದಿಂದ ಜೋಗಿಮಟ್ಟಿಯಲ್ಲಿ ಶ್ರೀ ಕಾಲಭೈರವ ಜಯಂತಿ ಆಚರಿಸಲಾಯಿತು. ನಗರದ ಚಂದ್ರವಳ್ಳಿಯ ಹುಲೆಗೊಂದಿ ಸಿದ್ದೇಶ್ವರಸ್ವಾಮಿಯ ಪೂಜೆ ಸಲ್ಲಿಸಿ ಬಳಿಕ ಕನಕದಾಸರು, ಸಂಗೋಳ್ಳಿರಾಯಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಒನಕೆ ಓಬವ್ವ...

ಪ್ರಮುಖ ಸುದ್ದಿ

ಚಿತ್ರದುರ್ಗ : ಗ್ರಾಮ ಪಂಚಾಯಿತಿಗಳ ನೋಟಿಸ್ ಬೋರ್ಡ್‍ನಲ್ಲಿ ಪಿಡಿಒ ಹಾಗೂ ಇಂಜಿನಿಯರ್‍ಗಳ ಭೇಟಿ ದಿನಾಂಕ ಹಾಗೂ ಮಾಹಿತಿಯನ್ನು ಕಡ್ಡಾಯವಾಗಿ ಹಾಕಬೇಕೆಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಾಪಂ...

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್23): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 33 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,335 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಪಂಚಾಯಿತಿ ಅಭಿವೃದ್ದಿ ಅನುದಾನದಡಿ ಹಿರೇಗುಂಟನೂರು ಕ್ಷೇತ್ರದ ನಾಲ್ಕು ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿದರು. ಕುರುಬರಹಳ್ಳಿಯಲ್ಲಿ ಹೈಮಾಸ್ ವಿದ್ಯುತ್ ದೀಪ ಅಳವಡಿಕೆಗೆ ಭೂಮಿಪೂಜೆ, ಹುಲ್ಲೂರು...

ಪ್ರಮುಖ ಸುದ್ದಿ

ಚಿತ್ರದುರ್ಗ :ನ.1 ರಿಂದ ವಿದ್ಯುತ್ ದರ ಏರಿಸಿ ರಾಜ್ಯದ ಜನತೆಗೆ ಶಾಕ್ ನೀಡಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲೆಯಲ್ಲಿ ಕೇವಲ ಐದು ತಿಂಗಳಲ್ಲಿ 24 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 4ನೇ ತ್ರೈಮಾಸಿಕ...

ಪ್ರಮುಖ ಸುದ್ದಿ

ಚಿತ್ರದುರ್ಗ :ಭವ್ಯ ಪರಂಪರೆಯ ಕನ್ನಡವನ್ನು ಬೆಳೆಸುವ ಪ್ರಯತ್ನಕ್ಕೆ ಕೈ ಹಾಕದೇ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕøತಿಕವಾಗಿ ಅಧೋಗತಿಗೆ ನೂಕುತ್ತಿದ್ದೇವೆ ಎಂದು ಬಾಲಕರ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ರೇಣುಕಾ ಪ್ರಕಾಶ್ ಬೇಸರ ವ್ಯಕ್ತಪಡಿಸಿದರು....

error: Content is protected !!