Connect with us

Hi, what are you looking for?

ಪ್ರಮುಖ ಸುದ್ದಿ

ನಿತೀಶ್ ಕುಮಾರ್ 7 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

ಪಾಟ್ನಾ: ನಿತೀಶ್ ಕುಮಾರ್ (69) ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಅವರು ಸತತ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಮತ್ತು ಏಳನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಸೋಮವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಫಾಗು ಚೌಹಾಣ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರಮಾಣವಚನ ಭೋಧಿಸಿದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಜೆಪಿ ನಡ್ಡಾ ಭಾಗವಹಿಸಿದ್ದರು.

ತೀವ್ರ ಕುತೂಹಲ ಕೆರಳಿಸಿದ್ದ ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಸರಳ ಬಹುಮತದೊಂದಿಗೆ ಹೊಸ ಸರ್ಕಾರವನ್ನು ರಚಿಸಲು ಸಾಧ್ಯವಾಯಿತು. ಬಿಜೆಪಿಯಿಂದ ಏಳು ಮಂದಿ ಮತ್ತು ಜೆಡಿಯುನಿಂದ ಐವರು ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿ ಉಪಮುಖ್ಯಮಂತ್ರಿ ಹುದ್ದೆಯನ್ನು ಪಡೆದುಕೊಂಡಿರುವುದು ವಿಶೇಷ. ಬಿಜೆಪಿ ಮುಖಂಡ ತರ್ಕಿಶೋರ್ ಪ್ರಸಾದ್ ಮತ್ತು ರೇಣು ದೇವಿಯವರು ಉಪ ಮುಖ್ಯಮಂತ್ರಿಯಾಗಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಭಾನುವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲಾ ಸದಸ್ಯರು ನಿತೀಶ್ ಕುಮಾರ್ ಅವರನ್ನು ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಂತೆ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರಗತಿಯಲ್ಲಿ ಬೆಳವಣಿಗೆಗಳು ಜರುಗುತ್ತಿದ್ದು, ಮಾಸಾಂತ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಗೆ ಹೈ ಕಮಾಂಡ್ ಸಿದ್ಧತೆ ನಡೆಸುತ್ತಿದೆ ಎನ್ನುತ್ತಿವೆ ದೆಹಲಿ ರಾಜಕೀಯ ವಿಶ್ಲೇಷಕರ ಮಾತುಕತೆ....

ಪ್ರಮುಖ ಸುದ್ದಿ

ಬಿಹಾರ: ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದರಿಂದ ಮೇವಾಲಾಲ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ. ನಿತೀಶ್ ಕುಮಾರ್ ನೇತೃತ್ವದ ನೂತನ ಸರ್ಕಾರ ಸಂಪುಟ ರಚನೆಯಾಗಿ ಇನ್ನು ವಾರ ಕಳೆದಿಲ್ಲ....

ಪ್ರಮುಖ ಸುದ್ದಿ

ಪಾಟ್ನಾ :: ಇತ್ತೀಚಿಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿರುವ ಕಾರಣ ಅಲ್ಲಿನ ಹಿರಿಯ ಮುಖಂಡರು ರಾಜೀನಾಮೆಗೆ ಮುಂದಾಗಿದ್ದಾರೆ. ಬಿಹಾರ ಎಐಸಿಸಿ ಉಸ್ತುವಾರಿ ಶಕ್ತಿಸಿನ್ಹಾ ಗೊಹಿಲ್ ಮತ್ತಿತರ ಮುಖಂಡರು ತಮ್ಮ...

ಪ್ರಮುಖ ಸುದ್ದಿ

ಪಾಟ್ನಾ : ಬಿಹಾರ ಸಿಎಂ ಆಗಿ ಹಾಲಿ ಸಿಎಂ ನಿತೀಶ್ ಕುಮಾರ್ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಆಯ್ಕೆ ಯಾಗಿದ್ದಾರೆ. ಬಿಹಾರ ಚುನಾವಣೆಯಲ್ಲಿ ಎನ್ ಡಿ ಎ ಬಹುಮತ ಗಳಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ...

ಪ್ರಮುಖ ಸುದ್ದಿ

ಬೆಂಗಳೂರು : ಬಿಹಾರ ಸರ್ಕಾರದ ರಚನೆಯ ಬಳಿಕವೇ ಸಚಿವ ಸಂಪುಟ ವಿಸ್ತರಣೆ ಅಥವ ಪುನಾರಚನೆ ವಿಚಾರಕ್ಕೆ ಸ್ಪಷ್ಟನೆ ಸಿಗಲಿದೆ ಎಂಬ ಅರ್ಥದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ,...

ಪ್ರಮುಖ ಸುದ್ದಿ

ಬಿಹಾರ: ಏಳನೇ ಬಾರಿ ಸಿಎಂ ಆಗುತ್ತಿರುವ ನಿತೀಶ್ ಕುಮಾರ್ ರಾಜ್ಯದಲ್ಲಿ ದೀರ್ಘಾವಧಿ ಕಾಲ ಮುಖ್ಯಮಂತ್ರಿಯಾದ ದಾಖಲೆ ನಿರ್ಮಿಸಲು ಸಜ್ಜಾಗಿದ್ದಾರೆ. ಬಿಹಾರ ಚುನಾವಣೆಯಲ್ಲಿ ಜೆಡಿಯುಗಿಂತ ಬಿಜೆಪಿ ಮುನ್ನಡೆ ಸಾಧಿಸಿದ್ದರೂ, ಚುನಾವಣಾ ಪೂರ್ವದಲ್ಲಿ ಮಾಡಿಕೊಂಡ ಮೈತ್ರಿಯಂತೆ...

ಪ್ರಮುಖ ಸುದ್ದಿ

ನವದೆಹಲಿ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಜನತಾದಳ (ಯುನೈಟೆಡ್) ಪಕ್ಷ ಕೇವಲ 43 ಸ್ಥಾನಗಳನ್ನು ಗೆದ್ದಿರುವುದರಿಂದ, ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಇದೀಗ ಕುತೂಹಲ ಹೆಚ್ಚಾಗಿದೆ. 73 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಸಿಎಂ ಸ್ಥಾನ ತಮ್ಮದಾಗಬೇಕೆಂದು...

ಪ್ರಮುಖ ಸುದ್ದಿ

ಪಾಟ್ನಾ: ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇನ್ನೂ ನಡೆಯುತ್ತಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮತ ಎಣಿಕೆಯಲ್ಲಿ ಸ್ವಲ್ಪ ಮುನ್ನಡೆ ಸಾಧಿಸುತ್ತಿದ್ದಂತೆ, ಎನ್‌ಡಿಎ ಮುನ್ನಡೆ ಕಾಯ್ದುಕೊಂಡಿದೆ. ನಿತೀಶ್ ಕುಮಾರ್...

ಪ್ರಮುಖ ಸುದ್ದಿ

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಪಕ್ಷ ಮುನ್ನುಗ್ಗುತ್ತಿದ್ದು, ಜಯದ ಹಾದಿಯಲ್ಲಿದೆ. ಆದ್ರೆ ಇನ್ನು ಫಲಿತಾಂಶ ಪ್ರಕಟವಾಗಿಲ್ಲ. ಈ ಬೆನ್ನಲ್ಲೇ ಕಾಂಗ್ರೆಸ್ ಇವಿಎಂ ಮಷಿನ್ ನಲ್ಲಿ ದೋಷ ಇದೆ ಎಂದಿದ್ದಾರೆ. ಈ...

error: Content is protected !!