Connect with us

Hi, what are you looking for?

ಪ್ರಮುಖ ಸುದ್ದಿ

ನಾಡಿನ ಪುಣ್ಯ ಕ್ಷೇತ್ರ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ

ಮಡಿಕೇರಿ (ಅ.17): ನಾಡಿನ ಜೀವ ನದಿ ಕಾವೇರಿ ಉಗಮಸ್ಥಳ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವವು ಶನಿವಾರ ಬೆಳಗ್ಗೆ 7 ಗಂಟೆ 4 ನಿಮಿಷದ ಶುಭ ಕನ್ಯಾ ಲಗ್ನದಲ್ಲಿ ಸಂಭವಿಸಿತು. 

ಸಂಪ್ರದಾಯದಂತೆ ತಾಯಿ ಕಾವೇರಿ ಮಾತೆಗೆ ಪೂಜಾ ವಿಧಿವಿಧಾನಗಳು ನಡೆದವು. ತಲಕಾವೇರಿ-ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯು ಪೂಜಾ ಕಾರ್ಯಗಳನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿತ್ತು.

ತಾಯಿ ಕಾವೇರಿ ಮಾತೆ, ಪುಣ್ಯ ಕ್ಷೇತ್ರ ತಲಕಾವೇರಿ ಪವಿತ್ರ ತೀರ್ಥೋದ್ಭವ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಸುನೀಲ್ ಸುಬ್ರಮಣಿ, ಜಿ.ಪಂ ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ ಸಿಇಒ ಭನ್ವರ್ ಸಿಂಗ್ ಮೀನಾ, ಡಿಎಫ್‍ಒ ಪ್ರಭಾಕರನ್, ನೀಲೇಶ್ ಶಿಂಧೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಡಿವೈಎಸ್‍ಪಿ ದಿನೇಶ್ ಕುಮಾರ್, ತಲಕಾವೇರಿ ಭಗಂಡೇಶ್ವರ ದೇವಾಲಯ ಇಒ ಬಿ.ಎಂ.ಕೃಷ್ಣಪ್ಪ ಇತರರು ಇದ್ದರು.

ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಮಾತನಾಡಿ ಈ ವರ್ಷವೂ ಸಹ ಕಾವೇರಿ ತಾಯಿ ದರ್ಶನ ನೀಡಿದ್ದಾಳೆ. ಪ್ರಾಕೃತಿಕ ವಿಕೋಪ ತೊಂದರೆ ಇಲ್ಲದಂತೆ ಮಾಡಲು ಮತ್ತು ಕೋವಿಡ್ ಸೋಂಕು ದೂರಾಗಲು ಕಾವೇರಿ ತಾಯಿಯ ಆಶೀರ್ವಾದ ಬೇಕಿದೆ ಎಂದರು.

ಕೋವಿಡ್ ಸೋಂಕು ದೂರವಾಗಿ ರಾಜ್ಯದಲ್ಲಿ ಸುಖ, ಶಾಂತಿ, ಸಮೃದ್ಧಿ ತರುವಂತಾಗಲಿ ಎಂದು ತಾಯಿ ಕಾವೇರಿ ಬಳಿಯಲ್ಲಿ ಪ್ರಾರ್ಥಿಸಿದೆ ಎಂದು ಸಚಿವರಾದ ವಿ.ಸೋಮಣ್ಣ ಅವರು ಹೇಳಿದರು.

ಶಾಸಕರಾದ ಅಪ್ಪಚ್ಚು ರಂಜನ್ ಅವರು ಮಾತನಾಡಿ ಎಲ್ಲಾ ಸಂಕಷ್ಟಗಳನ್ನು ನಿವಾರಿಸುವಂತೆ ಮಾತೆ ಕಾವೇರಿಯಲ್ಲಿ ಪ್ರಾರ್ಥಿಸಲಾಯಿತು ಎಂದು ತಿಳಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಮಡಿಕೇರಿ (ಅ.16): ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 9.72 ಮಿ.ಮೀ. ಕಳೆದ ವರ್ಷ ಇದೇ ದಿನ 23.23 ಮಿ.ಮೀ....

ಪ್ರಮುಖ ಸುದ್ದಿ

ಮಡಿಕೇರಿ (ಅ.16) : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ 137 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. 117 ಪ್ರಕರಣಗಳು ಆರ್‍ಟಿಪಿಸಿಆರ್...

ಪ್ರಮುಖ ಸುದ್ದಿ

ಮಡಿಕೇರಿ (ಸೆ.24) : ಲೋಕಸಭೆಯಲ್ಲಿ ಕಾಫಿ ಬೆಳೆಗಾರರ ಸಂಕಷ್ಟದ ಬಗ್ಗೆ ಗಮನ ಸೆಳೆಯುವಂತೆ ಮಾತನಾಡಿದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಕೊಡಗಿನ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಮನವರಿಕೆ ಮಾಡಿದರು....

ಪ್ರಮುಖ ಸುದ್ದಿ

ಮಡಿಕೇರಿ,(ಆ.19):ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 20 ಮತ್ತು ಮಧ್ಯಾಹ್ನ 2.30 ಗಂಟೆಗೆ 52 ಸೇರಿದಂತೆ 72 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು...

ಪ್ರಮುಖ ಸುದ್ದಿ

ಮಡಿಕೇರಿ,(ಆ.09):ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 8 ಗಂಟೆ ವೇಳೆಗೆ 13 ಮತ್ತು ಮಧ್ಯಾಹ್ನ 1 ಗಂಟೆಗೆ 09 ಸೇರಿದಂತೆ 22 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು...

ಪ್ರಮುಖ ಸುದ್ದಿ

ಮಡಿಕೇರಿ,(ಆ.07): ಜಿಲ್ಲೆಯಲ್ಲಿ ಶುಕ್ರವಾರ ಬೆಳ್ಳಿಗೆ 8:30ರ ವೇಳೆಗೆ 10 ಮತ್ತು ಮಧ್ಯಾಹ್ನ 2 ಗಂಟೆ ವೇಳೆಗೆ 19 ಸೇರಿದಂತೆ ಒಟ್ಟು 29 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು...

ಪ್ರಮುಖ ಸುದ್ದಿ

ಮಡಿಕೇರಿ,(ಆ.03):-ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 15 ಹೊಸ ಕೋವಿಡ್ ಪ್ರಕರಣಗಳು ಮತ್ತು ಮಧ್ಯಾಹ್ನ 1:30 ರ ವೇಳೆಗೆ 26 ಹೊಸ ಕೋವಿಡ್-19 ಪ್ರಕರಣ ಸೇರಿದಂತೆ ಒಟ್ಟು 41 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ...

ಪ್ರಮುಖ ಸುದ್ದಿ

ಮಡಿಕೇರಿ,(ಆ.03):ಕೊಡಗು ಜಿಲ್ಲೆಯಲ್ಲಿ ಕಳೆದ 10 ದಿನಗಳಿಂದ 10 ಮಿ.ಮೀ ಗಿಂತಲೂ (1 ಸೆಂ.ಮೀ.) ಕಡಿಮೆ ಮಳೆಯಾಗಿದೆ. ಆದರೆ ಆಗಸ್ಟ್, 02 ರಿಂದ ಭಾರಿ ಮಳೆಯಾಗುತ್ತಿದೆ. ಜುಲೈ ತಿಂಗಳ ಕೊನೆ ವಾರದಲ್ಲಿ ವ್ಯಾಪಕ ಮಳೆಯಾಗಬೇಕಿದ್ದ...

ಪ್ರಮುಖ ಸುದ್ದಿ

ಮಡಿಕೇರಿ,(ಜು.28):ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 3.79 ಮಿ.ಮೀ. ಕಳೆದ ವರ್ಷ ಇದೇ ದಿನ 6.41 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ...