Connect with us

Hi, what are you looking for?

ಪ್ರಮುಖ ಸುದ್ದಿ

ಹೊರಬಿತ್ತು ಟಿಇಟಿ ಫಲಿತಾಂಶ: ಬರೆದಿದ್ದು ಲಕ್ಷ ಮಂದಿ ಪಾಸಾಗಿದ್ದು ಸಾವಿರ

ಬೆಂಗಳೂರು :ಸಾರ್ವಜನಿಕ ಶಿಕ್ಷಣ ಇಲಾಖೆ ಅಕ್ಟೋಬರ್ನಲ್ಲಿ ನಡೆಸಿದ 2019ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಶೇ 3.93 ಅಭ್ಯರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ 2,02,991 ಅಭ್ಯರ್ಥಿಗಳ ಪೈಕಿ 7,980 ಅಭ್ಯರ್ಥಿಗಳು ಮಾತ್ರ ಶಿಕ್ಷಕರಾಗಲು ಅರ್ಹತೆ ಪಡೆದಿದ್ದಾರೆ. 2018ನೇ ಸಾಲಿನಲ್ಲಿ 12.6ರಷ್ಟು ಫಲಿತಾಂಶ ಬಂದಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಶೇ.9ರಷ್ಟು ಕುಸಿತವಾಗಿದೆ.
ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಯ ಅರ್ಹತೆಗೆ ಪತ್ರಿಕೆ-1, ಪ್ರೌಢಶಾಲಾ ಶಿಕ್ಷಕ ಹುದ್ದೆಗೆ ಪರೀಕ್ಷೆ ಬರೆಯಲು ಪತ್ರಿಕೆ 2ರಲ್ಲಿ ಉತ್ತೀರ್ಣರಾಗಬೇಕು. ಅದರಂತೆ ಪತ್ರಿಕೆ 1ಕ್ಕೆ ಪರೀಕ್ಷೆ ಬರೆದವರಲ್ಲಿ ರಲ್ಲಿ 1,342 ಮಂದಿ ಮತ್ತು ಪತ್ರಿಕೆ-2ರಲ್ಲಿ ಪರೀಕ್ಷೆ ಬರೆದವರಲ್ಲಿ 6,638 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.
2019ರಲ್ಲಿ ಟಿಇಟಿಗೆ ಅರ್ಜಿ ಆಹ್ವಾನಿಸಲಾಗಿತ್ತು, ಮಾರ್ಚ್ನಲ್ಲಿ ಪರೀಕ್ಷೆ ಆಯೋಜಿಸಲು ಉದ್ದೇಶಿಸಲಾಗಿತ್ತು. ಕೊರೋನಾ ಬಂದ ಹಿನ್ನೆಲೆಯಲ್ಲಿ ಅಕ್ಟೋಬರ್ನಲ್ಲಿ ಪರೀಕ್ಷೆ ನಡೆಸಿತ್ತು. ಒಟ್ಟಾರೆ ಪರೀಕ್ಷೆ ನಡೆಸಿದ 45 ದಿನದೊಳಗೆ ಫಲಿತಾಂಶವನ್ನು ಪ್ರಕಟಿಸಿದೆ.

ಅರ್ಹತೆ ಅಂಕಗಳಿಸಿದ ಅಭ್ಯರ್ಥಿಗಳಿಗೆ ಗಣಕೀಕೃತ ಅಂಕಪಟ್ಟಿಯನ್ನು ಇಲಾಖೆ ವಿತರಿಸಲಿದ್ದು, ಯಾವುದೇ ಮುದ್ರಿತ ಅಂಕಪಟ್ಟಿ ವಿತರಿಸುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಸಿಎಂ ಯಡಿಯೂರಪ್ಪ ಅವರು 500 ಕೋಟಿ ಅನುದಾನವನ್ನು ನೀಡಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ...

ಪ್ರಮುಖ ಸುದ್ದಿ

ಬೆಂಗಳೂರು : ನಟಿ ಸಾನ್ವಿ ಶ್ರೀವಾತ್ಸವ್ ಸದ್ಯ ಮಾಲ್ಡೀವ್ಸ್ ಬೀಚ್ ನಲ್ಲಿ ಮಸ್ತ್ ಮಜಾ ಮಾಡುತ್ತಿದ್ದಾರೆ. ಸಿನಿಮಾ ಶೂಟಿಂಗ್ ನಿಂದ ಕೊಂಚ ಬಿಡುವ ಪಡೆದಿರುವ ನಟಿ, ಪ್ರವಾಸದಲ್ಲಿದ್ದು, ಹಾಟ್ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸದ್ಯ...

ಪ್ರಮುಖ ಸುದ್ದಿ

ಬೆಂಗಳೂರು : ಕರೊನಾ ಲಾಕ್‍ಡೌನ್ ನಂತರ ಕನ್ನಡ ಪ್ರೇಕ್ಷಕರ ಮೇಲೆ ನಂಬಿಕೆಯಿಂದ ಬಿಡುಗಡೆಯಾದ ‘ಆಕ್ಟ್-1978’ ಚಿತ್ರವು ತೆರೆಕಂಡು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಗ್ ಬಜೆಟ್ ಚಿತ್ರಗಳ ರೀಲಿಸ್‍ಗೂ ಮುನ್ನ ‘ಆಕ್ಟ್-1978’ ತೆರೆ...

ಪ್ರಮುಖ ಸುದ್ದಿ

ಬೆಂಗಳೂರು :ರಾಜ್ಯದಲ್ಲಿ ಡಿಸೆಂಬರ್‍ವರೆಗೂ ಶಾಲೆ ಪ್ರಾರಂಭಿಸುವುದಿಲ್ಲ ಎಂದು ಸಿಎಂ ಹೇಳಿದ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶೀಘ್ರವೇ ಎಸ್.ಎಸ್ ಎಲ್ ಸಿ ಮತ್ತು ದ್ವಿತೀಯ...

ಪ್ರಮುಖ ಸುದ್ದಿ

ಬೆಂಗಳೂರು: ಇಂದು ಶಾಲೆಗಳನ್ನು ಪ್ರಾರಂಭ ಮಾಡುವ ವಿಚಾರಕ್ಕೆ ಅಭಿಪ್ರಾಯ ಪಡೆಯಲು ಸಭೆ ಕರೆದಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಡಿಸೆಂಬರ್ ಅಂತ್ಯದವರೆಗೂ ಶಾಲೆಗಳು ತೆರೆಯುವುದಿಲ್ಲ ಎಂದು ಹೇಳಿದ್ದಾರೆ. ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ...

ಪ್ರಮುಖ ಸುದ್ದಿ

ಬೆಂಗಳೂರು :ತಜ್ಞರ ಅಭಿಪ್ರಾಯದಂತೆ ಡಿಸೆಂಬರ್‌ವರೆಗೆ ಶಾಲೆ ಪ್ರಾರಂಭಿಸುವುದಿಲ್ಲ ಎಂದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದರು. ಶಾಲಾ-ಕಾಲೇಜು ಪ್ರಾರಂಭ ಕುರಿತು ಸಿಎಂ ನೇತೃತ್ವದಲ್ಲಿ ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು. ಸಭೆ...

ಪ್ರಮುಖ ಸುದ್ದಿ

ಬೆಂಗಳೂರು : ಸಂಕಷ್ಟದಲ್ಲಿರುವ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.26ರಂದು ಅಖಿಲ ಭಾರತ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಪ್ರತಾಪ್ ಸಿಂಹ ಹೇಳಿದ್ದಾರೆ. ದಾಬಸ್ಪೇಟೆಯಲ್ಲಿ ಆಯೋಜಿಸಿದ್ದ ಸಿಐಟಿಯು ಬಹಿರಂಗ ಅಧಿವೇಶನದಲ್ಲಿ...

ಪ್ರಮುಖ ಸುದ್ದಿ

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಇಳಿಮುಖ ಕಾಣುತ್ತಿದ್ದರೂ ಸಹ ಶಾಲೆ ಪ್ರಾರಂಭಿಸಲು ಡಿಸೆಂಬರ್ ಸಹ ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು...

ಪ್ರಮುಖ ಸುದ್ದಿ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ನಿವಾಸದ ಮೇಲೆ ಬೆಳಗಿನ ಜಾವ ದಾಳಿ ನಡೆದಿದೆ. ದೆಹಲಿ ಮೂಲದ ಹದಿಮೂರು ಅಧಿಕಾರಿಗಳ ತಂಡ ದಾಳಿ...

error: Content is protected !!