Connect with us

Hi, what are you looking for?

ಪ್ರಮುಖ ಸುದ್ದಿ

ನಟಿ ಉಮಾಶ್ರೀ ಕಾರು ಅಪಘಾತ : ಇಬ್ಬರು ಮೃತ

ಹುಬ್ಬಳ್ಳಿ : ಹಿರಿಯ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ ಕಾರು ಶುಕ್ರವಾರ ರಾತ್ರಿ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಇನ್ನೊಂದು ಕಾರಿನ ನಡುವೆ ಶುಕ್ರವಾರ ರಾತ್ರಿ ಡಿಕ್ಕಿಯಾಗಿದೆ. ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಉಮಾಶ್ರೀ ಅವರನ್ನು ಬಿಟ್ಟು ಕಾರು ಚಾಲಕ ತಮ್ಮೂರಿಗೆ ಹೊರಟಿದ್ದ. ಹುಬ್ಬಳ್ಳಿ ತಾಲ್ಲೂಕಿನ ಬಂಡಿವಾಡ ಸಮೀಪ ಅಪಘಾತ ನಡೆದಿದ್ದು, ಓವರ್‌ ಟೇಕ್‌ ಮಾಡುವ ಭರದಲ್ಲಿ ಎದುರಿಗೆ ಬಂದ ಕಾರುಗಳ ನಡುವೆ ಡಿಕ್ಕಿಯಾಗಿದೆ.

ಧಾರವಾಡ ಮೂಲದ ಸ್ಮಿತಾ ಕಟ್ಟಿ ಹಾಗೂ ಇನ್ನೋರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಹುಬ್ಬಳ್ಳಿ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ಕೂಡ ಬಿಡುಗಡೆಯ ಭಾಗ್ಯ ಸಿಕ್ಕಿಲ್ಲ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ....

ಪ್ರಮುಖ ಸುದ್ದಿ

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ನಗರದ ಗೋಕುಲ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ಲಾರಿ ಹೊಸಪೇಟೆಯಿಂದ ಗೋವಾಗೆ ಸ್ಪಂಜ್ ತುಂಬಿಕೊಂಡು ಹೊರಟಿತ್ತು. ರಸ್ತೆ ಮಧ್ಯೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಚಳ್ಳಕೆರೆ ತಾಲ್ಲೂಕಿನ ತಳಕು ಗರಣಿ ಕ್ರಾಸ್ ಬಳಿ ಗುರುವಾರ ತಡರಾತ್ರಿ ಲಾರಿ ಡಿಕ್ಕಿಯಾಗಿ ದಂಪತಿಗಳು ಮೃತಪಟ್ಟಿದ್ದಾರೆ. ಮೃತರನ್ನು ನಗರಂಗೆರೆ ಗ್ರಾಮದ ದಂಪತಿಗಳಾದ ಸುದೀಪ್ (22), ಪತ್ನಿ ಭವ್ಯ (19) ಎಂದು...

ಪ್ರಮುಖ ಸುದ್ದಿ

ಮೈಸೂರು: ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೈಸೂರು ಊಟಿ ಹೆದ್ದಾರಿ ಹಿರಿಕಾಟಿ ಗೇಟ್ ಬಳಿ ತಡರಾತ್ರಿ ಈ ಘಟನೆ ಸಂಭವಿಸಿದೆ. ನಂಜನಗೂಡು ತಾಲೂಕಿನ ಹಂಡುವಿನಹಳ್ಳಿ ಗ್ರಾಮದ...

ಪ್ರಮುಖ ಸುದ್ದಿ

ಚೆನ್ನೈ: ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರು ಇದ್ದ ಕಾರು ಅಪಘಾತಕ್ಕೀಡಾಗಿದೆ. ತಮಿಳುನಾಡಿನ ಮೆಲ್ಮರುವಾತ್ತೂರ್ ಬಳಿ ಈ ಘಟನೆ ನಡೆದಿದೆ. ಖುಷ್ಬೂ ಅವರಿದ್ದ ಕಾರಿಗೆ ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ...

ಪ್ರಮುಖ ಸುದ್ದಿ

ಚಿತ್ರದುರ್ಗ : ಎರಡು ಬಸ್, ಕಾರು, ಕ್ಯಾಂಟರ್ ನಡುವೆ ಸರಣಿ ಅಪಘಾತವಾಗಿ ಇಬ್ಬರು ಮೃತಪಟ್ಟ ಘಟನೆ ಹಿರಿಯೂರು ತಾಲೂಕಿನ ಪಟ್ರೇಹಳ್ಳಿ ಬಳಿ ಶನಿವಾರ ಮುಂಜಾನೆ ನಡೆದಿದೆ. ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಇಂಡಿಕಾ...

ಪ್ರಮುಖ ಸುದ್ದಿ

ಮೈಸೂರು : ರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಜೀಪ್ ತಡರಾತ್ರಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತವಾಗಿ ಎಎಸ್ಐ ಹಾಗೂ ಹೆಡ್ ಕಾನ್ಸ್ಟೇಬಲ್ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಸಿದ್ದನಕೊಪ್ಪಲು ಗೇಟ್ ಬಳಿ...

ಪ್ರಮುಖ ಸುದ್ದಿ

ಹುಬ್ಬಳ್ಳಿ : ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡಿತ್ತು. ಇಂದು ವಿನಯ್ ಕುಲಕರ್ಣಿ ಕಸ್ಟಡಿ ಅಂತ್ಯವಾಗಲಿದ್ದು, ಮತ್ತೆ...

ಪ್ರಮುಖ ಸುದ್ದಿ

ಚಿತ್ರದುರ್ಗ, (ನ.04) : ಮುಂಜಾನೆಯೇ ಜವರಾಯ ಅಟ್ಟಹಾಸ ಮೆರೆದಿದ್ದು, ಒರ್ವನನ್ನು ಬಲಿ ಪಡೆದು ಏಳು ಜನರ ಸ್ಥಿತಿ ಗಂಭೀರವಾಗಿದೆ. ಹೊಳಲ್ಕೆರೆ ತಾಲೂಕಿನ ಹಳೆಹಳ್ಳಿ ಬಳಿ ಬುಧವಾರ ಭೀಕರ ಅಪಘಾತ ಸಂಭವಿಸಿದೆ. ಹೊಳಲ್ಕೆರೆ ಕಡೆಯಿಂದ...

error: Content is protected !!