Connect with us

Hi, what are you looking for?

ಪ್ರಮುಖ ಸುದ್ದಿ

ನಿತ್ಯಜೀವನದಲ್ಲಿ ವಾಲ್ಮೀಕಿ ಆದರ್ಶ ಪಾಲಿಸೋಣ : ಕವಿತಾ ಎಸ್ ಮನ್ನಿಕೇರಿ

ಚಿತ್ರದುರ್ಗ, (ಅಕ್ಟೋಬರ್31) : ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ನಮ್ಮ ನಿತ್ಯಜೀವನದಲ್ಲಿ ಪಾಲಿಸೋಣ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದರು.

ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸರಳವಾಗಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಆರತಿ ಬೆಳಗಿ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಆದಿಕವಿ ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಯಾವ ರೀತಿಯ ಆದರ್ಶಗಳು ಇರಬೇಕು ಎಂದು ತಿಳಿಸಿಕೊಟ್ಟಿದ್ದಾರೆ . ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗಿರಬಾರದು. ಆಚರಣೆಗಳಿಂದ ನಮ್ಮ ತಪ್ಪುಗಳನ್ನು ತಿದ್ದಿಕೊಂಡು ಸರಿದಾರಿಗೆ ಹೋಗುವ ಸಲುವಾಗಿ ಆಚರಣೆಗಳನ್ನು ನೆನಪಿನಿಂದ ಆಚರಿಸಲಾಗುತ್ತದೆ ಎಂದರು.

ರಾಮಾಯಣದಲ್ಲಿ ಯಾವ ರೀತಿಯಾಗಿ ರಾಮರಾಜ್ಯವನ್ನು ಕಟ್ಟಬೇಕು ಎಂದು ಹೇಳಿದ್ದಾರೆಯೋ ಅದೇ ರೀತಿಯಾಗಿ ನಮ್ಮ ದೇಶವನ್ನು ರಾಮರಾಜ್ಯ ಮಾಡಲಿಕ್ಕೆ ನಾವೆಲ್ಲರೂ ಪರಿಶ್ರಮ ಪಡೋಣ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಧಿಕಾ ಮಾತನಾಡಿ, ವಾಲ್ಮೀಕಿ ರಚಿಸಿದ ರಾಮಾಯಣ ಎಂಬ ಮಹಾನ್ ಗ್ರಂಥಕ್ಕೆ ದೇಶದಲ್ಲಿ ಮಾತ್ರವಲ್ಲದೆ ಇಡೀ ಪ್ರಪಂಚದಾದ್ಯಂತ ಮಹತ್ವವಾದ ಸ್ಥಾನವಿದೆ ಎಂದು ಹೇಳಿದರು.

ರಾಮಾಯಣ ಮನುಕುಲಕ್ಕೆ ಮಾರ್ಗದರ್ಶನ ನೀಡುವ ಗ್ರಂಥವಾಗಿದ್ದು, ಅದರಲ್ಲಿರುವ ಸಂದೇಶಗಳು ಎಲ್ಲ ಕಾಲಕ್ಕೂ ಪ್ರಸ್ತುತ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಟಿ.ಯೋಗೇಶ ಮಾತನಾಡಿ, ವಾಲ್ಮೀಕಿಯವರು ನಾಡು,ದೇಶಕ್ಕೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಭಾರತ ದೇಶದ ಸಂಸ್ಕೃತಿಯನ್ನು ಪರಿಚಯಿಸಿಕೊಟ್ಟಿದ್ದಾರೆ ಎಂದರು.

ರಾಮಾಯಣ ಮಹಾಕಾವ್ಯ ಶ್ರೇಷ್ಠ ಅಷ್ಟೇ ಮಾತ್ರವಲ್ಲದೇ ಅದನ್ನು ಬರೆದ ವ್ಯಕ್ತಿಯ ಬದುಕು ಸಹ ಶ್ರೇಷ್ಠ. ವಾಲ್ಮೀಕಿ ಅವರ ಆದರ್ಶಗಳು ನಮಗೆ ದಾರಿದೀಪವಾಗಲಿ ಎಂದು ಹೇಳಿದರು.

ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಬದರಿನಾಥ್ ಮಾತನಾಡಿ, ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯ ನಮ್ಮೆಲ್ಲರ ಜೀವನದ ಆದರ್ಶಕ್ಕೆ ನಾಂದಿ ಆಗಿದೆ. ಇಂತಹ ಮಹಾಪುರುಷರ ಜಯಂತಿಯನ್ನು ಕೋವಿಡ್ -19 ಕಾರಣಕ್ಕೆ ಸರಳವಾಗಿ ಆಚರಿಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನ, ತಹಶೀಲ್ದಾರ್ ವೆಂಕಟೇಶಯ್ಯ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಟಿ.ಪರಮೇಶ್ವರಪ್ಪ ಸೇರಿದಂತೆ ಸಮಾಜದ ಮುಖಂಡರು ಹಾಜರಿದ್ದರು.

*ಫೋಟೋ ವಿವರ:* ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಪುಪ್ಪನಮನ ಸಲ್ಲಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ : ಆರೋಗ್ಯ ಸರಿಯಿಲ್ಲದಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಹಾಕಿಕೊಂಡು ವ್ಯಕ್ತಿಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾಲೇಶ (32) ಆರೋಗ್ಯ ಸರಿಯಿಲ್ಲದ್ದಕ್ಕೆ ನೊಂದು ಸೋಮವಾರ ಮನೆಯಲ್ಲೇ ನೇಣು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಜೋಗಿ ಸಮಾಜ ಕ್ಷೇಮಾಭಿವೃದ್ಧಿ ಸಂಘದಿಂದ ಜೋಗಿಮಟ್ಟಿಯಲ್ಲಿ ಶ್ರೀ ಕಾಲಭೈರವ ಜಯಂತಿ ಆಚರಿಸಲಾಯಿತು. ನಗರದ ಚಂದ್ರವಳ್ಳಿಯ ಹುಲೆಗೊಂದಿ ಸಿದ್ದೇಶ್ವರಸ್ವಾಮಿಯ ಪೂಜೆ ಸಲ್ಲಿಸಿ ಬಳಿಕ ಕನಕದಾಸರು, ಸಂಗೋಳ್ಳಿರಾಯಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಒನಕೆ ಓಬವ್ವ...

ಪ್ರಮುಖ ಸುದ್ದಿ

ಚಿತ್ರದುರ್ಗ : ಗ್ರಾಮ ಪಂಚಾಯಿತಿಗಳ ನೋಟಿಸ್ ಬೋರ್ಡ್‍ನಲ್ಲಿ ಪಿಡಿಒ ಹಾಗೂ ಇಂಜಿನಿಯರ್‍ಗಳ ಭೇಟಿ ದಿನಾಂಕ ಹಾಗೂ ಮಾಹಿತಿಯನ್ನು ಕಡ್ಡಾಯವಾಗಿ ಹಾಕಬೇಕೆಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಾಪಂ...

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್23): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 33 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,335 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಪಂಚಾಯಿತಿ ಅಭಿವೃದ್ದಿ ಅನುದಾನದಡಿ ಹಿರೇಗುಂಟನೂರು ಕ್ಷೇತ್ರದ ನಾಲ್ಕು ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿದರು. ಕುರುಬರಹಳ್ಳಿಯಲ್ಲಿ ಹೈಮಾಸ್ ವಿದ್ಯುತ್ ದೀಪ ಅಳವಡಿಕೆಗೆ ಭೂಮಿಪೂಜೆ, ಹುಲ್ಲೂರು...

ಪ್ರಮುಖ ಸುದ್ದಿ

ಚಿತ್ರದುರ್ಗ :ನ.1 ರಿಂದ ವಿದ್ಯುತ್ ದರ ಏರಿಸಿ ರಾಜ್ಯದ ಜನತೆಗೆ ಶಾಕ್ ನೀಡಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲೆಯಲ್ಲಿ ಕೇವಲ ಐದು ತಿಂಗಳಲ್ಲಿ 24 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 4ನೇ ತ್ರೈಮಾಸಿಕ...

ಪ್ರಮುಖ ಸುದ್ದಿ

ಚಿತ್ರದುರ್ಗ :ಭವ್ಯ ಪರಂಪರೆಯ ಕನ್ನಡವನ್ನು ಬೆಳೆಸುವ ಪ್ರಯತ್ನಕ್ಕೆ ಕೈ ಹಾಕದೇ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕøತಿಕವಾಗಿ ಅಧೋಗತಿಗೆ ನೂಕುತ್ತಿದ್ದೇವೆ ಎಂದು ಬಾಲಕರ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ರೇಣುಕಾ ಪ್ರಕಾಶ್ ಬೇಸರ ವ್ಯಕ್ತಪಡಿಸಿದರು....

ಪ್ರಮುಖ ಸುದ್ದಿ

ಚಿತ್ರದುರ್ಗ :ಯಾವ ರಾಷ್ಟ್ರದಲ್ಲಿ ರಾಷ್ಟ್ರೀಯ ಭಾವೈಕ್ಯತೆ ಇರುತ್ತದೆಯೋ ಅಲ್ಲಿ ಅಭಿವೃದ್ಧಿ ಇರುತ್ತದೆ ಎಂದು ಪ್ರಾಂಶುಪಾಲ ಡಾ.ಪಿ.ಶಿವಲಿಂಗಪ್ಪ ಹೇಳಿದರು. ನಗರದ ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದಲ್ಲಿ...

error: Content is protected !!