ಚಿತ್ರದುರ್ಗ,(ಜೂನ್.09) : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ರಾಜ್ಯಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ “ಶಕ್ತಿ” ಯೋಜನೆಗೆ ಚಾಲನೆ ಕಾರ್ಯಕ್ರಮವನ್ನು ಇದೇ ಜೂನ್ 11ರಂದು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಘನ ಉಪಸ್ಥಿತಿವಹಿಸುವರು. ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ.ಸಿ.ವೀರೇಂದ್ರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡೆ, ಕೆ.ಎಸ್.ನವೀನ್ ಸೇರಿದಂತೆ ನಗರಸಭೆ ಸದಸ್ಯರು ಮತ್ತು ಎಲ್ಲಾ ಚುನಾಯಿತ ಪ್ರತಿನಿಧಿಗಳು ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಸಿಬ್ಬಂದಿ ಮತ್ತು ಜಾಗೃತ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಸ್. ದಿವಾಕರ್ ಭಾಗವಹಿಸಲಿದ್ದಾರೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಎನ್.ಹೆಬ್ಬಾಳ್ ತಿಳಿಸಿದ್ದಾರೆ.