ಚಿತ್ರದುರ್ಗದಲ್ಲಿ ಜೂನ್ 11ರಂದು “ಶಕ್ತಿ” ಯೋಜನೆಗೆ ಚಾಲನೆ

Facebook
Twitter
Telegram
WhatsApp

 

ಚಿತ್ರದುರ್ಗ,(ಜೂನ್.09) : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ರಾಜ್ಯಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ “ಶಕ್ತಿ” ಯೋಜನೆಗೆ ಚಾಲನೆ ಕಾರ್ಯಕ್ರಮವನ್ನು ಇದೇ ಜೂನ್ 11ರಂದು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಘನ ಉಪಸ್ಥಿತಿವಹಿಸುವರು. ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ.ಸಿ.ವೀರೇಂದ್ರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡೆ, ಕೆ.ಎಸ್.ನವೀನ್ ಸೇರಿದಂತೆ ನಗರಸಭೆ ಸದಸ್ಯರು ಮತ್ತು ಎಲ್ಲಾ ಚುನಾಯಿತ ಪ್ರತಿನಿಧಿಗಳು ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಸಿಬ್ಬಂದಿ ಮತ್ತು ಜಾಗೃತ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಸ್. ದಿವಾಕರ್ ಭಾಗವಹಿಸಲಿದ್ದಾರೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಎನ್.ಹೆಬ್ಬಾಳ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸರ್ಕಾರಿ ಕೆಲಸ ಕೊಡಿಸುವುದಾಗಿ ಸಚಿವರ ಆಪ್ತರಿಂದ ಕೋಟಿ ಕೋಟಿ ಲೂಟಿ : ರಾಯಚೂರು ನಿರುದ್ಯೋಗಿ ಯುವಕರಿಗೆ ಮೋಸ..!

ರಾಯಚೂರು: ರಾಜ್ಯದಲ್ಲಿ ಚೈತ್ರಾ ಮೋಸ ಇನ್ನು ವಿಧವಿಧವಾಗಿ ತೆರೆದುಕೊಳ್ಳುತ್ತಲೇ ಇದೆ. ಬಿಜೆಪಿ ಎಂಎಲ್ಎ ಟಿಕೆಟ್ ಕೊಡುವುದಾಗಿ ಹೇಳಿ ಮೋಸ ಮಾಡಿದ್ದಾಳೆ‌. ಆದರೆ ಈಗ ಮತ್ತೊಂದು ಮೋಸ ಬಯಲಾಗಿದೆ. ಸಚಿವರ ಆಪ್ತರೊಬ್ಬರು ನಿರುದ್ಯೋಗಿ ಯುವಕರನ್ನೇ ಟಾರ್ಗೆಟ್

ಕಾವೇರಿ ವಿಚಾರಕ್ಕೆ ಕಣ್ಣೀರು ಹಾಕಿದ ಮಾಜಿ ಪ್ರಧಾನಿ ದೇವೇಗೌಡ..!

  ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಎಂದು ಆಗ್ರಹಿಸಿ ಇಂದು ಹಲವಾರು ಸಂಘಟನೆಗಳು ಪ್ರತಿಭಟಿಸುತ್ತಿವೆ. ಈ ಮಧ್ಯೆ ಮಾಜಿ ಪ್ರಧಾನಿ ದೇವೇಗೌಡ್ರು ಸುದ್ದಿಗೋಷ್ಟಿ ನಡೆಸಿ, ಕಾವೇರಿ ವಿಚಾರಕ್ಕೆ ಕಣ್ಣೀರು ಹಾಕಿದ್ದಾರೆ‌. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ

ಹಿರಿಯೂರಿನಲ್ಲಿ ನಡೆದ ಜನತಾ ದರ್ಶನ ಹೇಗಿತ್ತು ? ಸಚಿವ ಸುಧಾಕರ್ ಅಧಿಕಾರಿಗಳಿಗೆ ನೀಡಿದ ಸೂಚನೆ ಏನು ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…!

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.25 : ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಬೇಕು ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ  ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಿರಿಯೂರು

error: Content is protected !!