Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಜಮೀರ್ ಅಹಮದ್‍ಖಾನ್ ನೀಡಿರುವ ನೂತನ ಅಂಬ್ಯುಲೆನ್ಸ್ ವಾಹನಕ್ಕೆ ಚಾಲನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 25 : ಕರ್ನಾಟಕ ರಾಜ್ಯ ವಕ್ಫ್ ಸಚಿವ ಬಿ.ಝಡ್.ಜಮೀರ್ ಅಹಮದ್‍ಖಾನ್ ನೀಡಿರುವ ನೂತನ ಅಂಬ್ಯುಲೆನ್ಸ್ ವಾಹನಕ್ಕೆ ದಾವಣಗೆರೆ ರಸ್ತೆಯಲ್ಲಿರುವ ಹೈದರ್ ಷಾವಲಿ ದರ್ಗಾ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.

ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮಾಜಿ ಚೇರ್ಮನ್ ಹಾಲಿ ಸದಸ್ಯ ಕೆ.ಅನ್ವರ್ ಭಾಷ ಅಂಬ್ಯುಲೆನ್ಸ್ ವಾಹನಕ್ಕೆ ಚಾಲನೆ ನೀಡಿ ಮಾತನಾಡುತ್ತ ಕಳೆದ ನೂರು ವರ್ಷಗಳಿಂದಲೂ ಹೈದರ್‍ಷಾವಲಿ ದರ್ಗಾದಲ್ಲಿ ಪ್ರತಿ ವರ್ಷವೂ ಉರುಸ್ ಮತ್ತು ಸಂದಲ್ ನಡೆಯುತ್ತಿರುವ ಈ ಸಂದರ್ಭದಲ್ಲಿ ವಕ್ಫ್ ಸಚಿವರು ನೀಡಿರುವ ಅಂಬ್ಯುಲೆನ್ಸ್ ವಾಹನ ಐ.ಸಿ.ಯು. ವೆಂಟಿಲೇಟರ್‍ನೊಂದಿಗೆ ಸುಸಜ್ಜಿತವಾಗಿದೆ. ಸಾರ್ವಜನಿಕರು ಅಂಬ್ಯುಲೆನ್ಸ್ ಸೇವೆಯ ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಸೈಯದ್ ನಯಾಜ್, ಜಿಲ್ಲಾ ವಕ್ಫ್ ಮಂಡಳಿ ಮಾಜಿ ಚೇರ್ಮನ್ ಇಕ್ಬಾಲ್ ಹುಸೇನ್, ಅನ್ವರ್‍ಭಾಷ ವರದ, ಮಹಮದ್ ಸೈಫುಲ್ಲಾ, ಮಹಮದ್ ಸಾಧಿಕ್, ನೂರುಲ್ಲಾ, ಮುಹಿಬುಲ್ಲಾ, ಮಹ್ಮದ್ ಮೌಸಿನ್ ಪಟೇಲ್, ಮಹ್ಮದ್ ರಫಿ, ಮುಷ್ತಾಕ್ ಅಹಮದ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ನಗರಸಭೆ ಮಾಜಿ ಅಧ್ಯಕ್ಷ ಮಹಮದ್ ಅಹಮದ್ ಪಾಷ, ಸೈಯದ್, ಜಮೀಲ್ ಅಹಮದ್, ಮುನ್ನ, ಸೈಯದ್ ಇಸ್ಮಾಯಿಲ್ ಈ ಸಂದರ್ಭದಲ್ಲಿ ಹಾಜರಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...