Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುಳ್ಳು ಸುದ್ದಿ ಹಾವಳಿ ತಡೆಗೆ ಮುಂದಿನ ಅಧಿವೇಶನದಲ್ಲೇ ಕಾನೂನು ಜಾರಿ : ಕೆ ವಿ ಪ್ರಭಾಕರ್

---Advertisement---

ಬೆಂಗಳೂರು, ಜುಲೈ. 08 :ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಪಿಡುಗು ತಡೆಗಟ್ಟಲು ರಾಜ್ಯ ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.

ನಗರದ ಪ್ರೆಸ್ ಕ್ಲಬ್ ಆವರಣದಲ್ಲಿ ಕೆಂಧೂಳಿ ವಾರಪತ್ರಿಕೆ
ಆಯೋಜಿಸಲಾಗಿದ್ದ “ವಾರಪತ್ರಿಕೆ ಅಂದು -ಇಂದು” ಕುರಿತ ವಿಚಾರಗೋಷ್ಠಿಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಪಿಡುಗು ತಡೆಗಟ್ಟಲು ರಾಜ್ಯ ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ. ರಾಜ್ಯ ವಿಧಾನ ಮಂಡಲದ ಮುಂದಿನ ಅಧಿವೇಶನದಲ್ಲಿ ಈ ಕುರಿತು ವಿಧೇಯಕ ಮಂಡಿಸಲಾಗುವುದು ಎಂದು ಪ್ರಭಾಕರ್ ತಿಳಿಸಿದರು.

ಕೆಲವು ಗಂಭೀರ ವಿಷಯಗಳ ಪ್ರಸಾರ ಮಾಡಬೇಕಾದ ಮಾಧ್ಯಮಗಳು ಅದನ್ನು ಬಿಟ್ಟು ಮೌಢ್ಯ ಬಿತ್ತುವ ಕೆಲಸವಾಗುತ್ತಿದೆ ಈ ಮೂಲಕ ಪತ್ರಿಕೋದ್ಯಮ ಹಾದಿ ತಪ್ಪುತ್ತಿದೆ ಎಂದರು.

ಹಿರಿಯ ಪತ್ರಕರ್ತ ಶಶಿಧರ್ ಭಟ್ ಮಾತನಾಡಿ, ಪತ್ರಿಕೋದ್ಯಮದ ಮಡಿವಂತಿಕೆ ದೂರವಾಗಬೇಕು. ಪ್ರಶ್ನೆ ಮಾಡುವ ಹಕ್ಕನ್ನು ಪತ್ರಕರ್ತರು ಕಳೆದುಕೊಳ್ಳಬಾರದು. ಆಳುವ ಸರ್ಕಾರಗಳ ಕೈಗೊಂಬೆಯಾಗಿ ಮಾಧ್ಯಮಗಳು ಇಂದು ಕೆಲಸ ಮಾಡುತ್ತಿರುವುದು ತೀವ್ರ ನೋವು ತಂದಿದೆ ಎಂದು ತಮ್ಮ ಬೇಸರ ವ್ಯಕ್ತಪಡಿಸಿದರು.

ಹರಿಯ ಪತ್ರಕರ್ತ ಆರ್ ಜಿ ಹಳ್ಳಿ ನಾಗರಾಜ್, ಕನ್ನಡ ಪತ್ರಿಕೋದ್ಯಮದಲ್ಲಿ ವಾರಪತ್ರಿಕೆಗಳ ಗತವೈಭವ ಹಾಗೂ ಇತಿಹಾಸವನ್ನು ಮೇಲಕು ಹಾಕಿದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ್ ತಗಡೂರ ಮಾತನಾಡಿ, ಮಾಧ್ಯಮ ಕ್ಷೇತ್ರದ ವಿವಿಧ ಆಯಾಮಗಳಲ್ಲಿ ಹಾಗೂ ಬದಲಾಗುತ್ತಿರುವ ಪತ್ರಕರ್ತರ ವೃತ್ತಿ ಬದುಕು ಕುರಿತು ಅಭಿಪ್ರಾಯ ವ್ಯಕ್ತಪಡಿಸಿ, ಒಟ್ಟಾರೆ, ಪತ್ರಿಕೋದ್ಯಮದ ಗಾಂಭೀರ್ಯ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದರು.

ಹರಿಯ ಪತ್ರಕರ್ತ ಆರ್ ಜಿ ಹಳ್ಳಿ ನಾಗರಾಜ್, ಕನ್ನಡ ಪತ್ರಿಕೋದ್ಯಮದಲ್ಲಿ ವಾರಪತ್ರಿಕೆಗಳ ಗತವೈಭವ ಹಾಗೂ ಇತಿಹಾಸವನ್ನು ಮೇಲಕು ಹಾಕಿದರು. ಅಂಕಣಕಗಾರ್ತಿ ಕುಸುಮ ಆಯರಹಳ್ಳಿ ಮಾತನಾಡಿ, ಮಾಧ್ಯಮ ಲೋಕದಲ್ಲಿ ಅಜಗಜಾಂತರ ಬದಲಾವಣೆಗಳುಆಗಿವೆ. ಆದರೆ, ವೈಚಾರಿಕ ಪ್ರೌಢಿಮೆ ಇಂದಿನ ಯುವ ಪೀಳಿಗೆಯ ಪತ್ರಕರ್ತರಲ್ಲಿ ಕಣ್ಮರೆಯಾಗಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕೆಂಧೂಳಿ ಪತ್ರಿಕೆಯ ಸಂಪಾದಕ ತುರುವನೂರು ಮಂಜುನಾಥ್ ಅತಿಥಿಗಳನ್ನು ಗೌರವಿಸಿದರು.
ಕೆಂದುಳಿ ಪತ್ರಿಕೆಯ ಹಿರಿಯ ವರದಿಗಾರ ಪರಶಿವ ಧನಗೂರು ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...