Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನ್ಯಾ. ಬಿ.ಆರ್.ಗವಾಯಿ ಮೇಲೆ ಶೂ ಎಸೆತ ಖಂಡಿಸಿ ವಕೀಲರಿಂದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 09 : ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿರವರ ಮೇಲೆ ನ್ಯಾಯಾಲಯದ ಕಾರ್ಯಕಲಾಪದ ವೇಳೆಯಲ್ಲಿ ಶೂ ಎಸೆದು ಅಗೌರವ ಮಾಡಿರುವ ನ್ಯಾಯವಾದಿ ರಾಕೇಶ್ ಕಿಶೋರ್ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸಮಾನ ಮನಸ್ಕರ ವಕೀಲರ ಬಳಗದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಷ್ಟ್ರಪತಿರವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ನ್ಯಾಯವಾದಿ ಬೀಸ್ನಳ್ಳಿ ಜಯಣ್ಣ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವ ವಕೀಲ ರಾಕೇಶ್ ಕಿಶೋರ್ ಸಂವಿಧಾನಕ್ಕೆ ಅವಮಾನ ಮಾಡಿರುವುದು ಕ್ಷಮಿಸಲಾರದಂತ ಅಪರಾಧ, ಇದರ ಹಿಂದೆ ಪಟ್ಟಭದ್ರಾ ಹಿತಾಸಕ್ತಿಗಳ ಕೈವಾಡವಿದೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ ಮುಖ್ಯ ನ್ಯಾಯಮೂರ್ತಿ ಗವಾಯಿರವರಿಗೆ ಝಡ್ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸುವಂತೆ ಒತ್ತಾಯಿಸಿದರು.

ವಕೀಲರ ಸಂಘದ ಮಾಜಿ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ವಕೀಲರುಗಳಾದ ಎಸ್.ವಿಜಯಕುಮಾರ್, ದಿಲ್‍ಶಾದ್ ಉನ್ನಿಸ, ಬಿ.ಎಂ.ಹನುಮಂತಪ್ಪ, ಚಂದ್ರಣ್ಣ, ಜಗದೀಶ್ ಗುಂಡೇರಿ, ಸುದರ್ಶನ್, ಗಂಗಾಧರ್, ಅಶೋಕ್‍ಬೆಳಗಟ್ಟ, ಸುರೇಶ್, ದಿವ್ಯಚಂದ್ರ, ಕವಿ ಅರಸಿ, ಅನುಷ ಬಿಂದು ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now