Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೀಟ್ ಅಕ್ರಮ, ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿ ಚಿತ್ರದುರ್ಗದಲ್ಲಿ ವಕೀಲರ ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 24 : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೆಹಲಿಯ ಜಂತರ್-ಮಂತರ್‍ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದು ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲಿಸಿ ಪ್ರಧಾನಿ ನರೇಂದ್ರಮೋದಿರವರ ನಿವಾಸದ ಎದುರು ಧರಣಿ ನಡೆಸಿದ ಕಾಂಗ್ರೆಸ್ ಯುವ ನಾಯಕ ರಾಹುಲ್‍ಗಾಂಧಿ ಬಂಧನ ಖಂಡಿಸಿ ನ್ಯಾಯವಾದಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

 

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದಿರುವವರನ್ನು ಗುರುತಿಸಿ ತಕ್ಕ ಶಿಕ್ಷೆ ನೀಡಲು ಬದಲು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಸ್ವಾತಂತ್ರ್ಯವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವ ಕೇಂದ್ರ ಸರ್ಕಾರ ಮೊದಲು ಗೂಂಡಾ ವರ್ತನೆಯನ್ನು ಕೈಬಿಡಬೇಕು. ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ರಾಜಿನಾಮೆ ನೀಡುವಂತೆ ಪ್ರತಿಭಟನಾನಿರತ ವಕೀಲರುಗಳು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷ ಡಿ.ಎಸ್.ಸುದರ್ಶನ್, ಉಪಾಧ್ಯಕ್ಷ ಬೀಸ್ನಳ್ಳಿ ಜಯಣ್ಣ, ನ್ಯಾಯವಾದಿಗಳಾದ ರವಿ, ಜಗದೀಶ್ ಗುಂಡೇರಿ, ಜಿ.ಶರಣಪ್ಪ, ಎನ್.ಡಿ.ಗುರುಮೂರ್ತಿ, ಕುಮಾರಣ್ಣ, ಗಂಗಾಧರ್, ತೇಜು, ಚಂದ್ರಪ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now