Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾರ್ಥಿಗಳಿಗೆ ಚಾರಣದ ಮೂಲಕ ಕಲಿಕೆ : ಯೋಗೀಶ್ ಸಹ್ಯಾದ್ರಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮೇ. 10 :
ನಗರದ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ ವತಿಯಿಂದ ಇಂದು ಶನಿವಾರ ವಿದ್ಯಾರ್ಥಿಗಳಿಗೆ ಚಾರಣದ ಮೂಲಕ ಕಲಿಕೆ ಎಂಬ ಶೀರ್ಷಿಕೆಯಡಿ ಸುಮಾರು 80 ವಿದ್ಯಾರ್ಥಿಗಳಿಗೆ ಜೋಗಿಮಟ್ಟಿ ಅರಣ್ಯದ ಹಿಮ್ಮತ್ ಕೇದಾರಗಿರಿಗೆ ಚಾರಣ ಆಯೋಜನೆ ಮಾಡಲಾಗಿತ್ತು.
ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿಯ ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿ ಅವರು ಚಾರಣದ ನೇತೃತ್ವ ವಹಿಸಿದ್ದು, ವಿದ್ಯಾರ್ಥಿಗಳ ಕಲಿಕೆ ಕೇವಲ ನಾಲ್ಕು ಗೋಡೆಗಳ ಮಧ್ಯೆ ಮಾತ್ರವಲ್ಲದೆ ಪ್ರಕೃತಿಯ ನಡುವೆ ಅಪಾರವಾದ ವಿಷಯ ಸಂಪತ್ತನ್ನು ಗಳಿಸಿಕೊಳ್ಳಲು ಸಾಧ್ಯವಿದೆ ಎಂದು ಮಕ್ಕಳಿಗೆ ತಿಳಿಸಿದರು.

ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಆಯೋಜನೆ ಮಾಡಲಾಗಿದ್ದ ಸ್ಪೋಕನ್ ಇಂಗ್ಲಿಷ್ ಬೇಸಿಗೆ ಶಿಬಿರವು ಮುಕ್ತಾಯವಾದ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ಆಸಕ್ತ ಪೋಷಕರು ಚಾರಣದಲ್ಲಿ ಭಾಗವಹಿಸಿದ್ದರು. ವಿವಿಧ ತರಗತಿಗಳ ವಿದ್ಯಾರ್ಥಿಗಳು ಭಾಗವಹಿಸಿದ್ದು ಚಾರಣದಲ್ಲಿ, ಅರಣ್ಯ ಇಲಾಖೆಯ ಸಿಬ್ಬಂದಿ ಶರಣ್ ಅವರು ಹಲವು ಪ್ರಾಣಿ ಪಕ್ಷಿಗಳ ಬಗ್ಗೆ ಮಾಹಿತಿ ನೀಡಿದರು. ನಿಸರ್ಗ ಹಾಗೂ ಮಾನವನ ಸೌಹಾರ್ದತೆ ಕುರಿತು ಮಕ್ಕಳಿಗೆ ತಿಳಿಸಿದರು.

ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಶಿವಕುಮಾರ್ ಭಾಗವಹಿಸಿ ಮಾತನಾಡಿ, ಇಂದಿನ ಮಕ್ಕಳಿಗೆ ಪ್ರಕೃತಿ ಪ್ರೇಮದ ಕುರಿತು ಅರಿವು ಮೂಡಿಸುವ ಅಗತ್ಯವಿದೆ. ಪುಸ್ತಕಗಳ ಅಭ್ಯಾಸದ ಜೊತೆ ಜೊತೆಗೆ ಮಕ್ಕಳು ನಿಸರ್ಗ ಪ್ರೇಮವನ್ನು ಬೆಳೆಸಿಕೊಳ್ಳಬೇಕಿದೆ ಹಾಗೂ ಈ ನಿಟ್ಟಿನಲ್ಲಿ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿಯ ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿ ಅವರ ಕಾರ್ಯ ಶ್ಲಾಘನೀಯವಾದುದು ಎಂದು ಅಭಿಪ್ರಾಯಪಟ್ಟರು.

ಚಾರಣ ಹಾಗೂ ಸ್ಪೋಕನ್ ಇಂಗ್ಲಿಷ್ ಬೇಸಿಗೆ ಶಿಬಿರವನ್ನು ಕುರಿತು ಪೋಷಕರಾದ ಲಾಯರ್ ಚಂದ್ರಶೇಖರ್ ಹಾಗೂ ಮಧು ಮಾತನಾಡಿದರು. ವಿದ್ಯಾರ್ಥಿಗಳು ಹಾಗೂ ಅನೇಕ ಪೋಷಕರು ಚಿತ್ರದುರ್ಗದ ಹೆಮ್ಮೆಯ ಜೋಗಿಮಟ್ಟಿ ಅರಣ್ಯದ ಸೌಂದರ್ಯವನ್ನು ಸವಿದು ಸಂತೋಷ ವ್ಯಕ್ತಪಡಿಸಿದರು.

 

En

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment