Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಮ್ಮ ಪಾಡಿಗೆ ನಮ್ಮನ್ನ ಬಿಡಿ : ಕರೀನಾ ಕಪೂರ್ ಮನವಿ

---Advertisement---

ಕಳ್ಳನೊಬ್ಬ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದ. ಸೈಫ್ ಅಲಿ ಖಾನ್ ಗೆ ಇದು ದೊಡ್ಡ ಮಟ್ಟದಲ್ಲಿಯೇ ಗಾಯವಾಗಿತ್ತು. ಸದ್ಯ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸೈಫ್ ಅಲಿಖಾನ್ ಆರೋಗ್ಯದ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಎಲ್ಲರಿಗೂ ಇದೆ. ಸೈಫ್ ಅಲಿಖಾನ್ ಆರೋಗ್ಯ ಹೇಗಿದೆ ಎಂಬ ಕ್ಷಣ ಕ್ಣದ ಮಾಹಿತಿ ಕೊಡುವುದಕ್ಕೆ ಪಾಪರಾಜಿಗಳು ಆಸ್ಪತ್ರೆ ಮುಂದೆಯೇ ಇದ್ದಾರೆ. ಇದು ಕರೀನಾ ಅವರಿಗೆ ಕೊಂಚ ಕಿರಿಕಿರಿ ಅನ್ನಿಸಿದೆ. ಆದ ಕಾರಣ ಸೋಷಿಯಲ್ ಮೀಡಿಯಾದಲ್ಲಿಯೇ ಬರೆದುಕೊಂಡಿದ್ದಾರೆ. ನಮ್ಮ ಪಾಡಿಗೆ ನಮ್ಮನ್ನ ಬಿಟ್ಟು ಬಿಡಿ ಎಂದಿದ್ದಾರೆ.

ಕರೀನಾ ಕಪೂರ್ ಅವರು, ಸೈಫ್ ಅಲಿ ಖಾನ್ ಗೆ ಈ ರೀತಿ ಆಗಿರೋ ಕಾರಣಕ್ಕೆ ಆತಂಕದಲ್ಲಿದ್ದಾರೆ. ಸೈಫ್ ಆರೋಗ್ಯದ ಸ್ಥಿತಿ ಬಗ್ಗೆ ಕಾಳಜಿ ಮಾಡುತ್ತಿದ್ದಾರೆ. ಈ ಕಷ್ಟದ ಸಮಯದಲ್ಲಿ ಖಾಸಗಿತನಕ್ಕೆ ಗೌರವ ನೀಡಿ ಎಂದು ಕೋರಿದ್ದಾರೆ. ಆದರೆ ಇದನ್ನು ಯಾರೂ ಕೂಡ ಪಾಲಿಸುತ್ತಿಲ್ಲ. ಇತ್ತೀಚೆಗೆ ಕರೀನಾ ಮನೆಗೆ ಆಟಿಕೆ ತರುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ತೈಮೂರ್ ಹಾಗೂ ಜೇ ಅಲಿಗೆ ಹೊಸ ಆಟಿಕೆ ಎಂದು ಕ್ಯಾಪ್ಶನ್ ನೀಡಲಾಗಿತ್ತು. ಇದರಿಂದಲೂ ಕರೀನಾ ಕಪೂರ್ ನೊಂಡುಕೊಂಡಿದ್ದಾರೆ.

ಇದನ್ನು ಇಲ್ಲಿಗೆ ಬಿಡಿ.. ನಿಮಗೆ ಹೃದಯ ಇದೆಯಾ..? ನಮ್ಮನ್ನು ಒಂಟಿಯಾಗಿ ಇರುವುದಕ್ಕೆ ಬಿಡಿ ಎಂದು ತಮ್ಮ ಸೋಷಿಯಲ್ ಮೀಡಿಯಾ ಸ್ಟೋರೀಸ್ ನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಮತ್ತೆ ಆ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ. ಮಕ್ಕಳು ಕೂಡ ಆಸ್ಪತ್ರೆಗೆ ಬಂದು ಸೈಫ್ ಆರೋಗ್ಯವನ್ನು ವಿಚಾರಿಸಿಕೊಂಡು ಹೋಗಿದ್ದಾರೆ. ಸೈಫ್ ಸದ್ಯಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment