Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಉಪನ್ಯಾಸಕರಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಮಾ. 11 : ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಲ್ಲಾ ಪಂಚಾಯಿತಿಯ ಸಿಇಒ ಅಧೀನಕ್ಕೆ ಒಳಪಡಿಸುವ ಕುರಿತ ಪ್ರಸ್ತಾವನೆ ಸರ್ಕಾರದ ಮುಂದಿದೆ. ಈ ಪ್ರಸ್ತಾವನೆಯನ್ನು ಈ ಕೂಡಲೇ ಹಿಂಪಡೆಯುವಂತೆ ಸರ್ಕಾರದ ಗಮನ ಸೆಳೆಯುವ ಸಲುವಾಗಿ ಜಿಲ್ಲೆಯ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಮಾ.12ರ ಗುರುವಾರ ತಮ್ಮ ಕಾಲೇಜುಗಳಲ್ಲಿ ಪ್ರಾಂಶುಪಾಲರ ನೇತೃತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವಂತೆ ಅಧ್ಯಾಪಕರಲ್ಲಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಬಿ.ಆರ್.ಮಲ್ಲೇಶ್, ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷರಾದ ಪಿ.ಎಂ.ಜಿ ರಾಜೇಶ್ ಮನವಿ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶು ಪಾಲರು,ಉಪನ್ಯಾಸಕರು ಹಾಗೂ ಬೋಧಕೇತರ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಕಾಲೇಜುವತಿಯಿಂದ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯದ ಅವಧಿಯ ನಂತರ ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರ ಸೇರಿ ನಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸುವ ಸಮಯದಲ್ಲಿ ಎಲ್ಲಾ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಭಾಗಿಯಾಗುವ ಮೂಲಕ ಯಶಸ್ವಿಗೊಳಿಸಲು ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...