ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ನ. 20 : ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟು ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ. ಇದರಿಂದ ರಾಜ್ಯದಲ್ಲಿ ದರೋಡೆ, ಹಲ್ಲೆ, ಕೋಮುಗಲಭೆ ನಡೆಯುತ್ತಿವೆ ಎಂದು ಬಿಜೆಪಿ ವಕ್ತಾರ ನಾಗರಾಜ್ ಬೇದ್ರೆ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳ ಮೇಲೆ ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈಚೆಗೆ ಶಿವಮೊಗ್ಗದಲ್ಲಿ ಹಿಂದೂ ಯುವಕನನ್ನು ಅನ್ಯ ಕೋಮಿನವರು ಅಟ್ಟಾಡಿಸಿ ಮನ ಬಂದಂತೆ ಥಳಿಸಿದ್ದಾರೆ. ದೂರು ನೀಡಲು ಹೋದರೆ ಪೊಲೀಸರು ತೆಗೆದುಕೊಂಡಿಲ್ಲ. ಇಂತಹ ಕೃತ್ಯಗಳು ನಡೆಯುತ್ತಲೇ ಇವೆ. ಈ ಹಿಂದೆ ನಡೆದ ಅನೇಕ ಘಟನೆಗಳಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಗಲಭೆಕೋರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಸರ್ಕಾರ ಹಿಂಪಡೆಯುತ್ತಿದೆ, ಇದು ಸರಿಯಾದ ಕ್ರಮವಲ್ಲ ಎಂದರು.
ಬುಧವಾರ ಬೆಂಗಳೂರಿನ ಫೈ ಓವರ್ ಒಂದರಲ್ಲಿ ಹಗಲು ದರೋಡೆ ನಡೆದು 7 ಕೋಟಿ ರೂ. ವನ್ನು ಹಗಲು ದರೋಡೆ ಮಾಡಿದ್ದಾರೆ. ಇದನ್ನು ನೋಡಿದರೆ ಈ ಸರ್ಕಾರದಲ್ಲಿ ಜನರಿಗೆ ಭದ್ರತೆಯೂ ಇಲ್ಲ ನೆಮ್ಮದಿಯೂ ಇಲ್ಲದಂತಾಗಿದೆ. ವಿಪರ್ಯಾಸವೆಂದರೆ ಇಂತಹ ಘಟನೆಗಳು ನಡೆದಿರುವ ಕುರಿತು ಗೃಹಸಚಿವರಿಗೆ ಮಾಹಿತಿಯೇ ಇರುವುದಿಲ್ಲ ಎಂದ ಅವರು. ಮುಖ್ಯಮಂತ್ರಿ ಬದಲಾವಣೆ ಹಾಗೂ ಸಂಪುಟ ವಿಸ್ತರಣೆ ಗುಂಗಿನಲ್ಲೇ ಸಚಿವರು, ಶಾಸಕರು ಕಾಲ ಕಳೆಯುತ್ತಿದ್ದಾರೆ ಎಂದು ದೂರಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















