ಬೆಂಗಳೂರು.ಆಗಸ್ಟ್.1: ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರು ತಮ್ಮ ಹುದ್ದೆ ಹಾಗೂ ಪರಿಷತ್ತಿನ ಶಾಸಕ (ಎಮ್‌ಎಲ್‌ಸಿ) ಸ್ಥಾನಕ್ಕೆ ಶನಿವಾರ (ಆಗಸ್ಟ್ 1, 2026) ರಾಜೀನಾಮೆ ನೀಡಿದ್ದಾರೆ.
ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಎಂ.ಕೆ. ಪ್ರಾಣೇಶ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿ ಸಿದ್ದು, ರಾಜೀನಾಮೆಯನ್ನು ಅಂಗೀಕರಿಸುವಂತೆ ಕೋರಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿ ಹುದ್ದೆ ಮತ್ತು ಶಾಸಕ ಸ್ಥಾನಕ್ಕೆ ನಾನು ಸ್ವ-ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದು, ಸದರಿ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ಕೋರುತ್ತೇನೆ ಎಂದು ಅವರು ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.











