ಬೆಂಗಳೂರು.ಜೂನ್.18: ಕರ್ನಾಟಕ ವಿಧಾನಪರಿಷತ್ ಚುನಾವಣೆಯ ಮತದಾನ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ವಿಧಾನಸಭೆಯ ಎಲ್ಲಾ 222 ಶಾಸಕರು ಉತ್ಸಾಹದಿಂದ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.
ಮತದಾನ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ, ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕರಾದ ಜಿ.ಟಿ. ದೇವೇಗೌಡ ಅವರು ಮೊದಲ ಮತವನ್ನು ಚಲಾಯಿಸುವ ಮೂಲಕ ಚುನಾವಣೆಗೆ ಚಾಲನೆ ನೀಡಿದರು.

ದಿನವಿಡೀ ನಡೆದ ಬಿರುಸಿನ ಮತದಾನ ಪ್ರಕ್ರಿಯೆಗೆ ಯಲಬುರ್ಗಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಕೊನೆಯದಾಗಿ ಮತ ಚಲಾಯಿಸುವ ಮೂಲಕ ತೆರೆ ಎಳೆದರು.
ಮತದಾನ ಪ್ರಕ್ರಿಯೆ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಇಂದು ಸಂಜೆ 5 ಗಂಟೆಗೆ ಮತಗಳ ಎಣಿಕೆ ಕಾರ್ಯ ಆರಂಭವಾಗಲಿದೆ. ತದನಂತರ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










