Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಶಾಸಕ ಎಸ್.ಟಿ ಸೋಮಶೇಖರ್

---Advertisement---

ಬೆಂಗಳೂರು.ಜೂನ್.18: ತೀವ್ರ ಕುತೂಹಲ ಮೂಡಿಸಿದ್ದ ವಿಧಾನಪರಿಷತ್ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅವರು ತಾವು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಹಾಕಿರುವುದನ್ನು ಬಹಿರಂಗಪಡಿಸಿದರೆ, ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ತಾವು ಆತ್ಮಸಾಕ್ಷಿ ಮತ ಚಲಾಯಿಸಿರುವುದಾಗಿ ಹೇಳಿದ್ದಾರೆ.

ಮತದಾನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಎಸ್.ಟಿ. ಸೋಮಶೇಖರ್, ತಾವು ಕಾಂಗ್ರೆಸ್ ಅಭ್ಯರ್ಥಿ ಪರವಾಗಿಯೇ ಮತ ಚಲಾಯಿಸಿರುವುದನ್ನು ಸ್ಪಷ್ಟಪಡಿಸಿದರು. ನಾನು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಹಾಕಿ ಬಂದಿದ್ದೇನೆ. ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ಬಿಜೆಪಿ ಅಥವಾ ಜೆಡಿಎಸ್ ನಾಯಕರು ಯಾರೂ ನನ್ನನ್ನು ಮತ ಕೇಳಲು ಸಂಪರ್ಕ ಮಾಡಿರಲಿಲ್ಲ. ಅವರು ಸಂಪರ್ಕಿಸದೇ ಇದ್ದಾಗ ಮತ ಹಾಕುವುದು ಹೇಗೆ? ಯಾರು ಮನವಿ ಮಾಡುತ್ತಾರೋ ಅವರಿಗೆ ಮತ ಹಾಕಲಾಗುತ್ತದೆ” ಎಂದು ಸೋಮಶೇಖರ್ ಹೇಳಿದರು.

ಇದೇ ವೇಳೆ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್, ತಮಗೂ ಬಿಜೆಪಿ ಅಥವಾ ಜೆಡಿಎಸ್ ನವರು ಯಾರೂ ಬಂದು ಮತ ಕೇಳಿಲ್ಲ ಎಂದು ಅಸಮಾಧಾನ ಹೊರಹಾಕಿದರು.ಕಾಂಗ್ರೆಸ್ ನಾಯಕರು ಮತ್ತು ಸ್ವತಃ ಮುಖ್ಯಮಂತ್ರಿಗಳು ಕರೆ ಮಾಡಿ ಮತ ಕೇಳಿದ್ದರು. ಕ್ಷೇತ್ರದ ಅಭಿವೃದ್ಧಿ ಕುರಿತು ನನಗೂ ಭರವಸೆ ನೀಡಿದ್ದಾರೆ. ಹಾಗಂತ ನಾನು ಕಾಂಗ್ರೆಸ್ ಗೆ ಮತ ಹಾಕಿದ್ದೇನೆ ಎಂದು ಎಲ್ಲಿಯೂ ಬಹಿರಂಗವಾಗಿ ಹೇಳುತ್ತಿಲ್ಲ, ಆದರೆ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿದ್ದೇನೆ ಎಂದು ಹೆಬ್ಬಾರ್ ತಿಳಿಸಿದರು.

Join WhatsApp

Join Now

Join Telegram

Join Now