ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸಾಮಾಜಿಕ ನ್ಯಾಯದಡಿ ಟಿಕೆಟ್ ನೀಡಲಿ : ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,                         
ಮೊ : 87220 22817

ಚಿತ್ರದುರ್ಗ,(ಏ.14) : ಭೋವಿ ಸಮುದಾಯದ ಕೆಲ ಶಾಸಕರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಕ್ಷಗಳ ಮೇಲೆ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಭೋವಿ ಗುರುಪೀಠದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ಹಾಗೂ ಗೂಳಿಹಟ್ಟಿ ಶೇಖರ್ ಅವರಿಗೆ ಟಿಕೆಟ್ ನೀಡದೆ ಕಡೆಗಣನೆ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದಿಂದ ಕಳೆದ ಭಾರೀ ಹೆಚ್ಚಿನ ಅಂತರದಿಂದ ದಾಖಲೆಯ ಗೆಲುವು ಸಾಧಿಸಿದ್ದ ಅಖಂಡ ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡದೆ ಕಡೆಗಣನೆ ಮಾಡಲಾಗಿದೆ. ಇದು ಬೋವಿ ಸಮಾಜವನ್ನು ನಿರ್ಲಕ್ಷ್ಯ ಮಾಡಿದಂತಾಗಿದೆ. ಈ ಹಿಂದೆ 8-10 ಜನ ಬೋವಿ ಸಮುದಾಯದವರಿಗೆ ಟಿಕೆಟ್ ನೀಡುತ್ತಿದ್ದರು. ಅದೇ ರೀತಿ ಈ ಭಾರೀಯೂ ಸಮಾಜದವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸಾಮಾಜಿಕ ನ್ಯಾಯದಡಿ ಟಿಕೆಟ್ ನೀಡುವಂತೆ ಆಗ್ರಹಿಸಿದ ಶ್ರೀಗಳು, ಒಂದು ವೇಳೆ ಭೋವಿ ಸಮುದಾಯವನ್ನು ಕಡೆಗಣಿಸಿದಲ್ಲಿ ಅಂತಹ ಪಕ್ಷಗಳನ್ನು ಸಮುದಾಯ ಕೈಬಿಡಲಿದೆ ಎಂದು ಎಚ್ಚರಿಸಿದರು.

ಭಾರತೀಯ ಜನತಾ ಪಕ್ಷದಿಂದ ಅರವಿಂದ ಲಿಂಬಾವಳಿ, ಗೂಳಿಹಟ್ಟಿ ಶೇಖರ್ ಅವರಿಗೆ ಟಿಕೆಟ್ ನೀಡಬೇಕು. ಅಖಂಡ ಶ್ರೀನಿವಾಸ್‍ಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು. ಇಲ್ಲವಾದಲ್ಲಿ ಬೋವಿ ಸಮಾಜದ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಭೋವಿ ಸಮಾಜದ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಸಿಇಓ ಗೋವಿಂದಪ್ಪ, ಕಾರ್ಯದರ್ಶಿ ಲಕ್ಷ್ಮಣ್, ಮುಖಂಡರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *