Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕ್ಷಯ ಮುಕ್ತ ಭಾರತ ನಿರ್ಮಾಣ ಸಾರ್ವಜನಿಕ ಜವಾಬ್ದಾರಿಯಾಗಲಿ : ತಹಶೀಲ್ದಾರ್ ಡಾ.ನಾಗವೇಣಿ

---Advertisement---

ಚಿತ್ರದುರ್ಗ. ಜ.09: ಕ್ಷಯಮುಕ್ತ ಭಾರತ ನಿರ್ಮಾಣ ಸಾರ್ವಜನಿಕ ಜವಾಬ್ದಾರಿಯಾಗಲಿ ಎಂದು ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ಹೇಳಿದರು.

ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಗುರುವಾರ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ 100 ದಿನಗಳ ತೀವ್ರ ಪ್ರಚಾರ ಆಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ ಪತ್ತೆ ಚಿಕಿತ್ಸೆ ಉಚಿತ. ನಿಗದಿತ ಅವಧಿಯ ಚಿಕಿತ್ಸೆಯಿಂದ ಕ್ಷಯ ರೋಗ ಗುಣಪಡಿಸಬಹುದು. ಎಲ್ಲರೂ ಒಗ್ಗೂಡಿ ಕ್ಷಯರೋಗದ ವಿರುದ್ಧ ಹೋರಾಟ ನಡೆಸಿ ಚಿತ್ರದುರ್ಗ ಜಿಲ್ಲೆಯನ್ನ ಕ್ಷಯ ಮುಕ್ತ ಜಿಲ್ಲೆಯನ್ನಾಗಿಸೋಣ ಎಂದು ಹೇಳಿದರು.

ಗ್ರೇಡ್-2 ತಹಶೀಲ್ದಾರ್ ನಾಗರಾಜ್ ಮಾತನಾಡಿ, ಚಿಕಿತ್ಸೆ ಪೂರ್ಣಗೊಳ್ಳುವವರೆಗೆ ಪೌಷ್ಟಿಕ ಆಹಾರಕ್ಕಾಗಿ ಮಾಸಿಕ ರೂ.1 ಸಾವಿರ ಹಣವನ್ನು ಫಲಾನುಭವಿಯ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಜಮಾ ಮಾಡಲಾಗುತ್ತದೆ ಎಂದರು.

ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಮಾತನಾಡಿ, ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ರಾತ್ರಿ ವೇಳೆ ಜ್ವರ, ಬೆವರುವುದು, ಹಸಿವಾಗದಿರುವುದು ತೂಕ ಇಳಿಕೆ ಕಫದಲ್ಲಿ ರಕ್ತ ಈ ಲಕ್ಷಣಗಳ ಕಂಡುಬಂದಲ್ಲಿ ತಪ್ಪದೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಫ ಪರೀಕ್ಷೆ ಮಾಡಿಸಿಕೊಳ್ಳಿ.  ಶೀಘ್ರ ಪ್ರಕರಣ ಪತ್ತೆ ತ್ವರಿತ ಚಿಕಿತ್ಸೆ ನೀಡುವುದರಿಂದ ನಾವು ಟಿಬಿಯನ್ನು ಕೊನೆಗಾಣಿಸಬಹುದು. ನಿಕ್ಷಯ ಮಿತ್ರ ಯೋಜನೆ ಅಡಿಯಲ್ಲಿ ಟಿಬಿ ಪ್ರಕರಣಗಳಿಗೆ ಪೌಷ್ಟಿಕ ಪೂರಕ ಆಹಾರ ಮತ್ತು ಪರೀಕ್ಷೆಗಳಿಗೆ ದಾನಿಗಳನ್ನು ಆಹ್ವಾನಿಸಿದ್ದಾರೆ. ಈ ಕಚೇರಿಯ ದಯಾಪರ ಸಿಬ್ಬಂದಿಗಳಾದ ತಾವುಗಳು ಈ ಯೋಜನೆಯಲ್ಲಿ ಭಾಗವಹಿಸಬಹುದಾಗಿದೆ. 6 ರಿಂದ 8 ತಿಂಗಳಗಳ ಕಾಲ ಟಿಬಿ ರೋಗಿಗಳನ್ನ ದತ್ತು ಪಡೆದು ಪೌಷ್ಟಿಕ ಪೂರಕ ಆಹಾರಗಳನ್ನು ದಾನದ ರೂಪದಲ್ಲಿ ನೀಡಬಹುದಾಗಿದೆ. ತಮ್ಮ ಹೆಸರನ್ನು ನಿಕ್ಷಯ ಮಿತ್ರ ಯೋಜನೆಯ ವೆಬ್ ಪೋರ್ಟಲ್‍ನಲ್ಲಿ ನೋಂದಾಯಿಸಲಾಗುತ್ತದೆ. ನೋಂದಾವಣೆ ಮಾಡಿದವರಿಗೆ ಕೇಂದ್ರ ಸರ್ಕಾರ ದೃಢೀಕರಣ ಪತ್ರವನ್ನು ನೀಡಲಾಗುತ್ತದೆ. ನಿಮ್ಮ ಕಚೇರಿಯ ಸೂಚನಾ ಫಲಕದಲ್ಲಿ ಕ್ಷಯರೋಗದ ಕರಪತ್ರಗಳನ್ನ ಪ್ರಕಟಿಸಿ ಸಾರ್ವಜನಿಕ ಮಾಹಿತಿ ನೀಡಿರಿ ಎಂದರು.

ಕಾರ್ಯಕ್ರಮದಲ್ಲಿ ಉಪ ತಹಶೀಲ್ದಾರ್ ವಿನುತಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ.ಮೂಗಪ್ಪ, ಜಾನಕಿ, ಕ್ಷಯ ರೋಗ ವಿಭಾಗದ ನಾಗರಾಜ್ ಮತ್ತು ಸಂತೋಷ್ ಹಿರಿಯ ಆರೋಗ್ಯ ಸುರಕ್ಷತಾ ಅಧಿಕಾರಿ ಕಾತ್ಯಾಯನಮ್ಮ, ತಾಲೂಕ ಕಚೇರಿ ಸಿಬ್ಬಂದಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...