Connect with us

Hi, what are you looking for?

ಪ್ರಮುಖ ಸುದ್ದಿ

ಮಕ್ಕಳ ಪ್ರತಿಭೆ ಗುರುತಿಸುವ ಕೆಲಸವಾಗಲಿ; ರಂಗ ನಿರ್ದೇಶಕ ಮಹಂತೇಶ್ ಆದೀಮ

ಸುದ್ದಿಒನ್, ಚಿತ್ರದುರ್ಗ : ಎಲ್ಲಾ ಮಕ್ಕಳಲ್ಲಿಯೂ ಒಂದಲ್ಲ ಒಂದು ರೀತಿಯ ಪ್ರತಿಭೆಯಿರುತ್ತದೆ. ಅದನ್ನು ಗುರುತಿಸುವ ಕೆಲಸವಾಗಬೇಕೆಂದು ರಂಗ ನಿರ್ದೇಶಕ ಮಹಂತೇಶ್ ಆದೀಮ ಅಭಿಪ್ರಾಯಪಟ್ಟರು.

ಬಾದರ ದಿನ್ನಿ ಆಟ್ರ್ಸ್ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ಐ.ಯು.ಡಿ.ಪಿ.ಲೇಔಟ್‍ನಲ್ಲಿರುವ ಲಿಲ್‍ಬ್ರೂಕ್ಸ್ ಪ್ರಿಸ್ಕೂಲ್ ಆವರಣದಲ್ಲಿ ಏಳು ದಿನಗಳ ಕಾಲ ನಡೆದ ಉಚಿತ ರಂಗ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ರಂಗ ತರಬೇತಿಯೆಂದರೆ ಒಂದು ವಾರದಲ್ಲಿ ಪರಿಪೂರ್ಣವಾಗಿ ಎಲ್ಲವನ್ನು ಕಲಿಸಲು ಆಗುವುದಿಲ್ಲ. ಎಷ್ಟು ಸಾಧ್ಯವೋ ಅಷ್ಟನ್ನು ಮಕ್ಕಳಿಗೆ ಕಲಿಸಲಾಗಿದೆ. ಮಕ್ಕಳನ್ನು ಕೇವಲ ಓದು, ಅಂಕಗಳನ್ನು ತೆಗೆಯುವುದಕ್ಕಷ್ಟೆ ಮೀಸಲಿರಿಸಬಾರದು. ಯಾವ ರಂಗದಲ್ಲಿ ಆಸಕ್ತಿಯಿದೆ ಎನ್ನುವುದನ್ನು ಗುರುತಿಸಿ ಪೋಷಕರುಗಳು ಪ್ರೋತ್ಸಾಹಿಸಬೇಕೆಂದು ಸಲಹೆ ನೀಡಿದರು.

ತರಬೇತಿಯಲ್ಲಿ ಕಲಿತಿದ್ದನ್ನು ಇಲ್ಲಿಗೆ ನಿಲ್ಲಿಸಬೇಡಿ. ಜೀವನದಲ್ಲಿ ಮುಂದುವರೆಸಿಕೊಂಡು ಹೋಗಿ ಒಂದಲ್ಲ ಒಂದು ದಿನ ಪ್ರಯೋಜಕ್ಕೆ ಬರಲಿದೆ ಎಂದರು.

ಬಾದರ್‍ದಿನ್ನಿ ಆಟ್ರ್ಸ್ ಅಕಾಡೆಮಿ ಕಾರ್ಯದರ್ಶಿ ಪ್ರಕಾಶ್ ಬಾದರ್‍ದಿನ್ನಿ ಮಾತನಾಡಿ, ರಂಗಭೂಮಿಯಿಂದ ಮಕ್ಕಳು ಜೀವನದಲ್ಲಿ ಶಿಸ್ತು ಕಲಿಯಬಹುದು. ತರಬೇತಿಯಲ್ಲಿ ಕಲಿತಿದ್ದನ್ನು ಮುಂದುವರೆಸಿಕೊಂಡು ಹೋಗಿ. ಮಕ್ಕಳನ್ನು ಸಾಧ್ಯವಾದಷ್ಟು ಟಿವಿ, ಮೊಬೈಲ್‍ನಿಂದ ದೂರವಿಡುವ ಜವಾಬ್ದಾರಿ ನಿಮ್ಮಗಳ ಮೇಲಿದೆ ಎಂದು ಪೋಷಕರುಗಳಿಗೆ ತಿಳಿಸಿದ ಅವರು ರಂಗ ಭೂಮಿ ಎಂದರೆ ನೈಜ ಕಲೆ. ಅದಕ್ಕಾಗಿ ಶಿಕ್ಷಣದ ಜೊತೆ ಮಕ್ಕಳನ್ನು ರಂಗಭೂಮಿಯಲ್ಲಿ ತೊಡಗಿಕೊಳ್ಳಲು ಸಹಕರಿಸಿ ಎಂದು ಮನವಿ ಮಾಡಿದರು.

ರಂಗ ಕಲಾವಿದ ಜಾನಪದ ಹಾಡುಗಾರ ಹರೀಶ್ ಮಾತನಾಡಿ, ಒಂದು ವರ್ಷದಿಂದ ಕೊರೋನಾ ಬಾಧಿಸುತ್ತಿದ್ದು, ಅತ್ತ ಶಾಲೆಯೂ ಇಲ್ಲ ಇತ್ತ ಪಾಠವೂ ಇಲ್ಲದಂತಾಗಿದೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಏನಾದರೂ ವಿಶೇಷತೆ ಇರಬೇಕು. ಕಳೆದ ಏಳು ದಿನಗಳ ಕಾಲ ವಿಶೇಷತೆಯನ್ನು ರಂಗ ತರಬೇತಿ ಕಾರ್ಯಾಗಾರದಲ್ಲಿ ನೀಡಲಾಗಿದೆ. ಮಕ್ಕಳು ಟಿವಿ, ಮೊಬೈಲ್ ನೋಡಿದರೂ ಕಷ್ಟ. ಬಿಟ್ಟರು ಕಷ್ಟ ಎನ್ನುವಂತಾಗಿದೆ. ಈ ನಿಟ್ಟಿನಲ್ಲಿ ಮಕ್ಕಳಲ್ಲಿರುವ ಸದಭಿರುಚಿಗೆ ಪೋಷಕರುಗಳು ನೀರೆರೆದು ಬೆಂಬಲಿಸಬೇಕೆಂದು ವಿನಂತಿಸಿದರು.

ಶಿಕ್ಷಣದ ಜೊತೆ ಮಕ್ಕಳು ರಂಗ ಕಲೆ, ಹಾಡು, ಅಭಿನಯದಲ್ಲಿ ತೊಡಗಿಕೊಂಡಾಗ ಜೀವನದಲ್ಲಿ ಉತ್ತಮ ಸಂಸ್ಕಾರ ಕಲಿಯಬಹುದು. ಪುಸ್ತಕಗಳನ್ನು ಓದುವ ಹವ್ಯಾಸವನ್ನು ಮಕ್ಕಳಿಗೆ ಕಲಿಸಿ ಎಂದು ಹೇಳಿದರು.

ಬಾದರ್‍ದಿನ್ನಿ ಆಟ್ರ್ಸ್ ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಅನುಸೂಯ ಬಾದರ್‍ದಿನ್ನಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಏಳು ದಿನಗಳ ಕಾಲ ಉಚಿತ ರಂಗ ತರಬೇತಿಯಲ್ಲಿ ಭಾಗವಹಿಸಿದ್ದ ಮಕ್ಕಳು ತಮ್ಮ ಅನುಭವವನ್ನು ಹಂಚಿಕೊಂಡರು. ಮಕ್ಕಳ ಪೋಷಕರುಗಳಾದ ಶಿವಪ್ಪ, ಪದ್ಮ ಇವರುಗಳು ರಂಗ ತರಬೇತಿಯಿಂದ ಮಕ್ಕಳಿಗಾದ ಅನುಭವ ಕುರಿತು ಮಾತನಾಡಿದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರ ವರದಿಯಲ್ಲಿ 183 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47668 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 69...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದವರಿಗೆ ಎಷ್ಟು ಮೊತ್ತ ಸಿಗಬಹುದು ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಿಗೆ ಯಾವಾಗಲೂ ಕಾಡುವಂತ ಪ್ರಶ್ನೆ. ಆ ಪ್ರಶ್ನೆಗೆ ಇಂದು ಐಸಿಸಿ ಉತ್ತರಿಸಿದೆ. ಟೆಸ್ಟ್ ಚಾಂಪಿಯನ್ ಶಿಪ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆದಿವೆ. ವರ್ಷದ ಅಂತ್ಯದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಆದರೆ ಪ್ರವಾಸದ ಸಮಯ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಸಂಚಾರಿ ವಿಜಯ್ ನಮ್ಮೊಂದಿಗಿಲ್ಲ ಎನ್ನಲು ಮನಸ್ಸು ತುಂಬಾ ಭಾರವಾಗುತ್ತಿದೆ. ಆ ದೇವರು ಯಾವ ತಪ್ಪನ್ನು ತನ್ನ ಮೇಲೆ ಹಾಕಿಕೊಳ್ಳೊಲ್ಲ. ಬದುಕೆಂಬ ರಂಗಶಾಲೆಯಲ್ಲಿ ನಾನಾ ಪಾತ್ರಗಳಿಗೆ ತಮಗೆ ತಿಳಿಯದಂತೆ...

error: Content is protected !!