Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನನ್ನ ವೈಯಕ್ತಿಕ ತೇಜೋವಧೆ ಮಾಡುವವರು ತಾಕತ್ತಿದ್ದರೆ ಸಾಬೀತು ಮಾಡಲಿ : ಸಿ.ಮಹಲಿಂಗಪ್ಪ ಸವಾಲು

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 03 : ಸಾರ್ವಜನಿಕವಾಗಿ ನನ್ನ ಹೆಸರಿಗೆ ಕೆಲವರು ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆಂದು ಜಿಲ್ಲಾ ಯಾದವ ಗೊಲ್ಲರ ಸಂಘದ ಅಧ್ಯಕ್ಷ ಸಿ.ಮಹಲಿಂಗಪ್ಪ ತಮ್ಮ ವಿರುದ್ದ ಅಪ ಪ್ರಚಾರದಲ್ಲಿ ತೊಡಗಿರುವವರಿಗೆ ತಿರುಗೇಟು ನೀಡಿದರು.

ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘದ ಕೆಲವು ಸದಸ್ಯರು ಹಾಗೂ ಸಂಘಕ್ಕೆ ಸಂಬಂಧವೇ ಇಲ್ಲದ ಕೆಲವರು ತೇಜೋವಧೆಗಾಗಿ ನನ್ನ ಬಗ್ಗೆ ಇಲ್ಲ ಸಲ್ಲದ ಆಪಾದನೆಗಳನ್ನು ಹೊರಿಸುತ್ತಿದ್ದಾರೆ. ಇದಕ್ಕೆ ಯಾರು ಕಿವಿಗೊಡಬಾರದೆಂದು ಸಿ.ಮಹಲಿಂಗಪ್ಪ ಮನವಿ ಮಾಡಿದರು.

ಕೇಂದ್ರ ಮಂತ್ರಿಯಾಗಿದ್ದ ನಾರಾಯಣಸ್ವಾಮಿರವರು ಐವತ್ತು ಲಕ್ಷ ರೂ. ರಾಜ್ಯಸಭೆ ಸದಸ್ಯ ಜಿ.ಸಿ.ಚಂದ್ರಶೇಖರ್ ಇಪ್ಪತ್ತು ಲಕ್ಷ ರೂ. ಸಂಸದ ಕೆ.ಎಸ್.ನವೀನ್ ಹತ್ತು ಲಕ್ಷ ರೂ.ಗಳನ್ನು ಸಂಘದ ಕಟ್ಟಡಕ್ಕೆ ಮಂಜೂರು ಮಾಡಿದ್ದಾರೆ. ನಿರ್ಮಿತಿ ಕೇಂದ್ರದವರು ಕಟ್ಟಡ ಕಟ್ಟಿಸುತ್ತಿರುವುದರಿಂದ ಅನುದಾನ ನೇರವಾಗಿ ಸಂಘಕ್ಕೆ ಬರುವುದಿಲ್ಲ. ವಾಸ್ತವ ಅರಿಯದವರು ಐದರಿಂದ ಹತ್ತು ಕೋಟಿ ರೂಪಾಯಿ ದುರುಪಯೋಗವಾಗಿದೆಯೆಂದು ಎಲ್ಲಾ ಕಡೆ ಹೇಳಿಕೊಂಡು ತಿರುಗಾಡುತ್ತಿರುವುದು ಸತ್ಯಕ್ಕೆ ದೂರವಾದುದು. ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಸರ್ವ ಸದಸ್ಯರ ಸಭೆ ಕರೆಯುತ್ತೇನೆ. ತಾಕತ್ತಿದ್ದರೆ ಅಲ್ಲಿ ಬಂದು ಹಣ ದುರಪಯೋಗವಾಗಿರುವುದನ್ನು ಸಾಬೀತುಪಡಿಸಲಿ ಎಂದು ಸಿ.ಮಹಲಿಂಗಪ್ಪ ಸವಾಲು ಹಾಕಿದರು.

ಜಿಲ್ಲಾ ಯಾದವ ಗೊಲ್ಲರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಆನಂದ್, ಸಂಘಟನಾ ಕಾರ್ಯದರ್ಶಿ ವೆಂಕಟೇಶ್‍ಯಾದವ್, ಖಜಾಂಚಿ ಎಸ್.ಟಿ.ಪಲ್ಗುಣೇಶ್ವರ ನಿರ್ದೇಶಕರುಗಳಾದ ಗೋವಿಂದಪ್ಪ, ರಂಗಸ್ವಾಮಿ, ಪ್ರಕಾಶ್, ಚಂದ್ರಣ್ಣ, ಟಿ.ತಿಮ್ಮಪ್ಪ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...