Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹತ್ತು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಲಿ : ಬಿಜೆಪಿ ಶಾಸಕರ ಮನದಾಳದ ಆಸೆ

---Advertisement---

ರಾಯಚೂರು: ಬಿಜೆಪಿ ಶಾಸಕರೊಬ್ಬರು ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ. ಇಂದು ಕನಕದಾಸರ ಜಯಂತೋತ್ಸವ ಸಮಾರಂಭದಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಆಶಿಸಿದ್ದಾರೆ. ಅದರಲ್ಲೂ ಮುಂದಿನ ಇನ್ನು ಐದು ವರ್ಷಗಳ ಕಾಂಗ್ರೆಸ್ ಗೆಲ್ಲಲಿ, ಅವರೇ ಸಿಎಂ ಆಗಲಿ ಎಂದು ಹಾರೈಸಿದ್ದಾರೆ.

 

ಈ ಹಿಂದೆ ದೇವರಾಜು ಅರಸು ಅವರು ಪೂರ್ಣಾವಧಿ ಸಿಎಂ ಆಗಿದ್ದರು. ಅಲ್ಲದೇ ಎಂಟಯ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಈಗಾಗಲೇ ಸಿದ್ದರಾಮಯ್ಯ ಅವರು ಪೂರ್ಣಾವಧಿ ಸಿಎಂ ಆಗಿದ್ದಾರೆ. ಈ ಬಾರಿಯೂ ಸಿದ್ದರಾಮಯ್ಯ ಅವರು ಪೂರ್ಣಾವಧಿ ಸಿಎಂ ಆಗಿ ಮುಂದಜವರೆಯಲಿ. ಮುಂದಿನ ಹತ್ತು ವರ್ಷಗಳ ಸಿಎಂ ಆಗಿ ಸಿದ್ದರಾಮಯ್ಯ ಅವರು ಮುಂದುವರೆಯಲಿ ಎಂದೇ ಹರಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ವಿಚಾರಕ್ಕೆ ಸಾಕಷ್ಟು ಚರ್ಚೆಗಳು ಆಗಾಗ ಶುರುವಾಗುತ್ತವೆ. ಸಿದ್ದರಾಮಯ್ಯ ಬೆಂಬಲುಗರು, ಈ ಐದು ವರ್ಷದ ಅವಧಿಯಲ್ಲಿ ಸಿದ್ದರಾಮಯ್ಯ ಅವರೇ ಮುಂದುವರೆಯಲಿ ಎಂದು ಹೇಳಿದರೆ, ಡಿಕೆ ಶಿವಕುಮಾರ್ ಅವರ ಬೆಂಬಲಿಗರು ಡಿಕೆಶಿ ಆದಷ್ಟು ಬೇಗ ಸಿಎಂ ಆಗಲಿ ಎಂದೇ ಬಯಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ನಲ್ಲೂ ಸಿಎಂ ಎಂಬ ವಿಚಾರ ಬೂದಿ ಮುಚ್ಚಿದ ಕೆಂಡದಂತೆಯೇ ಆಡುತ್ತಿದೆ. ಹೀಗಿರುವಾಗ ಬಿಜೆಪಿ ಶಾಸಕರೇ ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment