ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ಸಂಸದ ಗೋವಿಂದ ಕಾರಜೋಳ

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜ. 02 : ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಂವಿಧಾನದ ಆಶಯದಂತೆ ಆಡಳಿತ ನಡೆಯುತ್ತಿಲ್ಲ. ಅಧಿಕಾರಿಗಳು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಅವರೇ ಹಗರಣಗಳಲ್ಲಿ ಸಿಲುಕಿದ್ದಾರೆ. ಆದರೂ ಕೂಡ ಬಂಡತನದಿಂದ ಏನು ಆಗಿಲ್ಲ ಅನ್ನುವ ರೀತಿಯಲ್ಲಿ ವರ್ತನೆ ಮಾಡುತ್ತಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಗೋವಿಂದ ಕಾರಜೋಳ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

ಚಿತ್ರದುರ್ಗ ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ವಷ್ಠವಾಗಿ ಕಾಣುತ್ತದೆ. ಖರ್ಗೆ ಬಂಟರು ಆತ್ಮಹತ್ಯೆಗೆ ಕಾರಣ ಆಗಿದ್ದಾರೆ. 5% ಹಣ ಕೊಡಿ ನಾವು ಟೆಂಡರ್ ಮಾಡಿಕೊಡುತೇವೆ ಎಂದು ಕಿರುಕುಳ ಕೊಟ್ಟಿದ್ದರಿಂದ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಡತನದಿಂದ ಯಾರು ಸೇರಿಕೊಂಡಿಲ್ಲ ಎಂದು ತಾತ್ಸರದ ಉತ್ತರ ಕೊಡುತ್ತಾರೆ ಇವರಿಗೆ ಅಧಿಕಾರ ನಡೆಸುವ ನೈತಿಕತೆ ಇಲ್ಲ ಎಂಬುದು.ಪಾರದರ್ಶಕ ನಿಸ್ಪಕ್ಷಪಾತವಾಗಿ ತನಿಖೆ ನಡೆಯಲು ರಾಜೀನಾಮೆ ಪಡೆಯಬೇಕಿತ್ತು. ಆದರೆ ಅದ್ಯಾವುದನ್ನು ಮಾಡಿಲ್ಲ. ಅಧಿಕಾರವನ್ನು ನಡೆಸುತ್ತಿದ್ದಾರೆ.

ಬಿಜೆಪಿಯವರು ಹಗರಣಗಳ ಬಗ್ಗೆ ಮಾತನಾಡಿದರೆ ದ್ವೇಷ್ದ ರಾಜಕಾರಣ ಎಂದು ಹೇಳುತ್ತಾರೆ ಹೊರತು ಯಾವುದೇ ಕ್ರಮ ಕೈಗೊಂಡಿಲ್ಲ. ಕಲುಬುರ್ಗಿಯಲ್ಲಿ ಬೃಹತ್ ಹೋರಾಟ ಮಾಡಲಿದ್ದಾವೆ. ಪೊಲೀಸರು ಕಾನೂನು ರೀತಿಕೆಲಸ ಮಾಡುತ್ತಿಲ್ಲ. ಕಾಂಗ್ರೇಸ್ ನಾಯಕರು ಮುಖಂಡರು ಹೇಳಿದಂತೆ ಕೆಲಸ ಮಾಡುತ್ತಿದ್ದಾರೆ. ಸರಿಯಾಗಿ ತನಿಖೆ ಮಾಡುತ್ತಿಲ್ಲ.ಆದ್ದರಿಂದ ಸಿದ್ದರಾಮಯ್ಯ ಅವರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಮತ್ತು ಸಿಬಿಐ ಗೆ ತನಿಖೆ ವಹಿಸಬೇಕು ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯನವರು ಸ್ವತಹ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ.. ಅಷ್ಟೇ ಅಲ್ಲದೆ ಸಿದ್ದರಾಮಯ್ಯನವರು ಸರ್ಕಾರದಲ್ಲಿನ ಹಲವು ಮಂತ್ರಿಗಳು ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ.. ಆದರೂ ಸಹ ಏನು ಆಗಿಲ್ಲ ಅನ್ನುವ ಭಂಡತನ ವರ್ತನೆ ಮಾಡುತ್ತಿದ್ದಾರೆ.ಕೆಲವೇ ದಿನಗಳ ಹಿಂದೆ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಗುತ್ತಿಗೆದಾರ ಸಚಿನ್ ಪಾಂಚಾಳರವರು ಆತ್ಮಹತ್ಯೆ ಪ್ರಕರಣವು ರಾಜ್ಯ ಮಾತ್ರವಲ್ಲ..ದೇಶಾದ್ಯಂತ ಸುದ್ದಿಯಾಗಿದೆ.ಅವರು ಬರೆದಿಟ್ಟ 7 ಪುಟಗಳ ಡೆತ್ ನೋಟಿನಲ್ಲಿ ಕಿರುಕುಳದ ಉಲ್ಲೇಖವಿದೆ… ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ಬರೆದಿಟ್ಟ ಡೆತ್ ನೋಟಿನ ಮಾಹಿತಿ ಸತ್ಯಕ್ಕೆ ದೂರವಾಗುವ ಸಾಧ್ಯತೆ ಇಲ್ಲ.ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತಾವಧಿಯಲ್ಲಿ ಸರಕಾರಿ ಪ್ರಾಯೋಜಿತ ಆತ್ಮಹತ್ಯೆಗಳು ಅಥವಾ ರಾಜ್ಯ ಸರಕಾರದ ಕುಮ್ಮಕ್ಕಿನ ಆತ್ಮಹತ್ಯೆ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿದೆ… ಸರಕಾರ, ಸಚಿವರು, ಆಡಳಿತ ಪಕ್ಷದ ಶಾಸಕರ ಕುಮ್ಮಕ್ಕಿನಿಂದ ಹಿಂದೆಂದೂ ಇಂಥ ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ಕೇಳಿರಲಿಲ್ಲ.ಟೆಂಡರ್ ಮಾಡಿಕೊಡಲು ಶೇ 5 ದುಡ್ಡಿನ ಬೇಡಿಕೆ ಇಟ್ಟಿರುತ್ತಾರೆ..ಪ್ರಿಯಾಂಕ್ ಖರ್ಗೆ ನಾನು ಹೇಳಿದ ಮಾತನ್ನು ಮೀರುವುದಿಲ್ಲ.. ಸಚಿವರ ಬೆಂಬಲ ಇದೆ ಎಂದು ರಾಜು ಕಪನೂರ್ ಹೇಳಿದ್ದಾಗಿ ಸಚಿನ್ ಡೆತ್ ನೋಟಿನಲ್ಲಿ ಬರೆದಿದ್ದಾರೆ.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯ ಸರಕಾರವು ಕರ್ನಾಟಕ ರಾಜ್ಯಕ್ಕೆ ಆತ್ಮಹತ್ಯೆ ಭಾಗ್ಯವನ್ನು ದಯಪಾಲಿಸಿದೆ. ಭ್ರಷ್ಟಾಚಾರ ಬಯಲಾದುದರಿಂದ ವಾಲ್ಮೀಕಿ ನಿಗಮದ ಅಕೌಂಟೆಂಟ್ ಚಂದ್ರಶೇಖರ್ ಮೊದಲ ಆತ್ಮಹತ್ಯೆ ಮಾಡಿಕೊಂಡಿದ್ದು.. ಬಿಜೆಪಿ ಹೋರಾಟದಿಂದ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದರು.ಲಕ್ಷ್ಮಿ ಹೆಬ್ಬಾಳ್ಳರ್ ಪಿ.ಎ. ಹೆಸರು ಬರೆದಿಟ್ಟು ರುದ್ರಣ್ಣ ಯಡವಣ್ಣವರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ದಾವಣಗೆರೆಯಲ್ಲಿ ಗುತ್ತಿಗೆದಾರರೊಬ್ಬರು ಬಾಕಿ ಹಣ ಸಿಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಾಗಡಿಯಲ್ಲಿ ಕ್ರಷರ್ ಲಾರಿ ಮಾಲೀಕರೊಬ್ಬರು ಲಂಚ ಕೊಡಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ… ಯಾದಗಿರಿ ಪಿಎಸ್‍ಐ ಪರಶುರಾಮ, ಸ್ಥಳೀಯ ಶಾಸಕರ ಪುತ್ರನ ಒತ್ತಡ ತಡೆಯಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹಿಂದೂ ಸಮಾಜದ ಸಿದ್ಧಲಿಂಗ ಸ್ವಾಮೀಜಿ, ಶಾಸಕ ಬಸವರಾಜ ಮತ್ತಿಮೂಡ, ಕಲಬುರ್ಗಿಯ ಬಿಜೆಪಿ ನಾಯಕರಾದ ಚಂದುಪಾಟೀಲ, ಮಣಿಕಂಠ ರಾಠೋಡ್ ರವರ ಕೊಲೆಗೆ ಸಂಚು ರೂಪಿಸಿದ್ದಾಗಿ ಡೆತ್‍ನೋಟ್‍ನಲ್ಲಿ ತಿಳಿಸಿದ್ದಾರೆ.ಸಿದ್ದಲಿಂಗ ಸ್ವಾಮೀಜಿ ರವರ ಧ್ವನಿ ಅಡಗಿಸಲು ಮಹಾರಾಷ್ಟ್ರದ ಸುಪಾರಿ ಕಿಲ್ಲರ್ ಗಳನ್ನು ಬಳಸುವ ವಿಚಾರವೂ ಡೆತ್ ನೋಟಿನಲ್ಲಿದೆ…ಹಾಗಾಗಿ ಇದೊಂದು ಗಂಭೀರ ವಿಚಾರ… ಆದ್ದರಿಂದ ಇದನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸುತ್ತೇವೆ..

ರಾಜ್ಯದ ಪೊಲೀಸ್ ಇಲಾಖೆಯಿಂದ ಅತ್ಯಂತ ಶಕ್ತಿಶಾಲಿ ಖರ್ಗೆ ಕುಟುಂಬದ ವಿರುದ್ಧ ತನಿಖೆ ಮಾಡಲು ಸಾಧ್ಯವಿಲ್ಲ.ಹಿಂದೆ ಇದೇ ಸರ್ಕಾರದ ಸಚಿವರಾದ ನಾಗೇಂದ್ರರವರೂ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿ ರಾಜೀನಾಮೆ ಕೊಟ್ಟಿದ್ದಾರೆ… ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಂದು ಕ್ಷಣವೂ ತಡ ಮಾಡದೇ ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದುಕೊಳ್ಳಬೇಕು.. ಯಾವುದೋ ನೆಪ ಮಾಡಿ ರಕ್ಷಿಸುವ ದುಸ್ಸಾಹಸ ಮಾಡುವುದು ಬೇಡ.ಪ್ರಿಯಾಂಕ ಖರ್ಗೆಯವರಿಗೆ ಮರೆವು ಜಾಸ್ತಿ…ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಈಶ್ವರಪ್ಪರವರ ಮೇಲೆ ಆರೋಪ ಬಂದಾಗ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದನ್ನು ಪ್ರಿಯಾಂಕ ಖರ್ಗೆ ಮರೆಯಬಾರದು.ಪ್ರಿಯಾಂಕ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್ ಅಷ್ಟೇ ಅಲ್ಲದೇ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಸಹಕರಿಸಬೇಕು ಎಂದು ಆಗ್ರಹಿಸಿದರು.

ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದುವರೆ ವರ್ಷದ ಅವಧಿಯಲ್ಲಿ 06 ಜನ ಅಧಿಕಾರಿಗಳ ಆತ್ಮಹತ್ಯೆ ಮಾಡಿಕೊಂಡಿದ್ದಾರೆ..ಆತ್ಮಹತ್ಯೆ ಮಾಡಿಕೊಂಡ ಪ್ರತಿಯೊಬ್ಬ ಅಧಿಕಾರಿಯ ಪ್ರಕರಣದಲ್ಲಿ ಒಬ್ಬ ಸಚಿವರ ಹೆಸರು ತಳುಕು ಹಾಕಿಕೊಂಡಿದೆ..ಈ ಸರ್ಕಾರ ಅಧಿಕಾರಕ್ಕೆ ಬಂದಾಗ ಎಸ್.ಎಸ್ (ಸಿದ್ದರಾಮಯ್ಯ ಹಾಗೂ ಶಿವಕುಮಾರ್) ಸರ್ಕಾರ ಅನ್ನುತಿದ್ದರು.. ಈಗ ಇದು ಇನ್ನೊಂದು ತರಹದ ಎಸ್.ಎಸ್ ಸರ್ಕಾರ ಆಗಿದೆ.. (ಸುಸೈಡ್ ಮತ್ತು ಸುಪಾರಿ, ಸುಳ್ಳು ಮತ್ತು ಸಾಲ ಸರ್ಕಾರ).ಸುಸೈಡ್ ನಲ್ಲಿ ಭಾಗಿಯಾಗಿರುವ ಮಂತ್ರಿಗಳ ಬೆಂಗಾವಲಿಗೆ ಸ್ವತಃ ಸಿದ್ಧರಾಮಯ್ಯರವರು ನಿಂತಿದ್ದಾರೆ.ಸ್ವತಹ ಸಿದ್ದರಾಮಯ್ಯನವರೇ ಮಂತ್ರಿಗಳಿಗೆ ಕ್ಲೀನ್ ಚಿಟ್ ಕೊಡುತ್ತಿದ್ದಾರೆ..ರಾಜ್ಯದಲ್ಲಿ ಪ್ರಿಯಾಂಕ ಖರ್ಗೆಯವರೇ ಸೂಪರ್ ಸಿಎಂ.ಏಕೆಂದರೆ ಮಲ್ಲಿಕಾರ್ಜುನ ಖರ್ಗೆಯವರ ಮಗ ಎನ್ನುವ ಕಾರಣಕ್ಕೆ ಸೂಪರ್ ಸಿಎಂ ಆಗಿ ವರ್ತನೆ ಮಾಡುತ್ತಿದ್ದಾರೆ.ಸಿದ್ದರಾಮಯ್ಯರವರಿಗೆ ದೇಶದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ ಗೌರವವಿದ್ದಾರೆ ಭಾಗಿಯಾಗಿರುವ ಸಚಿವರ ರಾಜೀನಾಮೆಯನ್ನು ಪಡೆಯಬೇಕು. ಅವರು ಕಳಂಕಿತರಾಗಿದ್ದು ಸಂಪುಟದಲ್ಲಿ ಕೂರಲು ಅರ್ಹತೆ ಇಲ್ಲ ಎಂದಿದ್ದಾರೆ.

ರಾಜ್ಯ ಬಿಜೆಪಿ ಪಕ್ಷ ರಾಜೀನಾಮೆ ಆಗ್ರಹಿಸಿ ಜ. 04 ರಂದು ಕಲಬುರ್ಗಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ಹಾಗೂ ಜಿಲ್ಲಾ ಕೇಂದ್ರಗಳಲ್ಲೂ ಸಹಾ ಪ್ರತಿಭಟನೆ ನಡೆಯಲಿದೆ ಎಂದರು.

ಗೋಷ್ಟಿಯಲ್ಲಿ ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ತಿಪ್ಪೇಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಎ.ಮುರಳಿ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಸಿದ್ದಾಪುರ, ಸಂಪತ್ ಕುಮಾರ್, ರಾಜ್ಯ ರೈತ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜನ್. ಮುಖಂಡರಾದ ಲಕ್ಷ್ಮೀಕಾಂತ್, ಮಾದ್ಯಮ ವಕ್ತಾರ ಛಲವಾದಿ ತಿಪ್ಪೇಸ್ವಾಮಿ ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ವಿಶ್ವನಾಥ್, ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

Recent Posts

ಫೈನಾನ್ಸ್ ಕಿರುಕುಳಕ್ಕೆ ದಾವಣಗೆರೆಯ ಶಿಕ್ಷಕಿ ಆತ್ಮಹತ್ಯೆ ಕೇಸ್ : ಉಲ್ಟಾ ಹೊಡೆದ ಪತಿ..!

ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…

9 hours ago

ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…

9 hours ago

ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಬಿಸಿಯೂಟ ಸವಿದ ಜಿ.ಪಂ ಸಿಇಒ

ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

9 hours ago

ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದಲ್ಲಿ ಎಫ್.ಐ.ಆರ್ ದಾಖಲಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು  ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್…

9 hours ago

ವಾಹನ ಚಾಲನೆ ವೇಳೆ ತಾಳ್ಮೆ ಅಗತ್ಯ : ಮಹಾಂತೇಶ್

ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…

10 hours ago

ಮಹೇಶ್ ಮೋಟಾರ್ಸ್ ನಲ್ಲಿ ಹೊಸ ಹೀರೋ ಡೆಸ್ಟಿನಿ 125 ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…

10 hours ago